ಅಕ್ರಮ ಗಣಿಗಾರಿಕೆ: ಎಸ್ಐಟಿಗೆ ತನಿಖೆ ಹೊಣೆ
Team Udayavani, Apr 2, 2017, 12:54 PM IST
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆಗೆ ಮತ್ತೆ ಚಾಲನೆ ದೊರೆತಿದೆ.
ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಶನಿವಾರ ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ ಹಾಗೂ ಎಸ್ಐಟಿ ತನಿಖಾ ತಂಡದ ಮುಖ್ಯಸ್ಥ ಚರಣ್ರೆಡ್ಡಿ ಸಭೆ ನಡೆಸಿದರು. ತನಿಖೆ ತ್ವರಿತಗತಿಯಲ್ಲಿ ಪೂರ್ಣಗೊಳಿಬೇಕೆಂದು ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ ಎಸ್ಐಟಿ ತಂಡಕ್ಕೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ. ಅಕ್ರಮ ಗಣಿಗಾರಿಕೆ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ವರದಿ ನೀಡುವಂತೆ ಎಸ್ಐಟಿ ಗೆ ಸೂಚಿಸಿತ್ತು. ಈ ಪ್ರಕರಣದಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕಲ್ಪಿಸಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್, ಎಚ್.ಡಿ ಕುಮಾರಸ್ವಾಮಿ, ಹಿರಿಯ ಅಧಿಕಾರಿಗಳಾದ ವಿ.ಉಮೇಶ್, ಎಂ.ರಾಮಪ್ಪ ಹಾಗೂ ಗಂಗಾರಾಮ… ಬಡೇರಿಯಾ ಸೇರಿ 11 ಅಧಿಕಾರಿಗಳ ವಿರುದ್ಧ ತನಿಖೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.