ಮಂಪರು ಪರೀಕ್ಷೆಗೆ ನಾನು ಸಿದ್ಧ: ಶೋಭಾ
Team Udayavani, Oct 29, 2017, 6:05 AM IST
ಬೆಂಗಳೂರು: “ವಿದ್ಯುತ್ ಖರೀದಿ ಹಗರಣ ಆರೋಪದ ಮೂಲಕ ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ನನ್ನನ್ನು ರಾಜಕೀಯವಾಗಿ ಹಣಿಯಲು ನೋಡಿದರೆ ನಾನೂ ರಾಜಕೀಯವಾಗಿಯೇ ಎದುರಿಸುತ್ತೇನೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಕಳೆದ 20 ವರ್ಷಗಳ ವಿದ್ಯುತ್ ಖರೀದಿ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ನನ್ನನ್ನು ಮಾಧ್ಯಮದ ಮುಂದೆಯೇ ಮಂಪರು ಪರೀಕ್ಷೆಗೆ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ಎರಡೂವರೆ ವರ್ಷ ಇಂಧನ ಸಚಿವೆಯಾಗಿ ಕೆಲಸ ಮಾಡಿದ್ದೇನೆ. ರಾಜ್ಯದಲ್ಲಿ ವಿದ್ಯುತ್ ಸ್ವಾವಲಂಬನೆ ಸಾಧಿಸಲು ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದೇನೆ. ಸಮರ್ಥ ಅಧಿಕಾರಿಗಳನ್ನು ಇಲಾಖೆಗೆ ನಿಯೋಜಿಸಿ ಮಾದರಿ ಕೆಲಸ ಮಾಡಿದ್ದೇನೆ. ಹೀಗಾಗಿ, ನನಗೆ ಯಾವ ಅಂಜಿಕೆಯೂ ಇಲ್ಲ ಎಂದರು. ಬ್ಲಾಕ್ಲಿಸ್ಟ್ ಮಾಡಲಾಗಿದ್ದ ಕಂಪನಿಯಿಂದ 477 ಕೋಟಿ ರೂ. ನೀಡಿ ಕಲ್ಲಿದ್ದಲ್ಲು ಖರೀದಿಸಿದ ಹಗರಣ ಬಯಲು ಮಾಡಿದ್ದಕ್ಕೆ ವಿದ್ಯುತ್ ಖರೀದಿಯಲ್ಲಿ ಹಗರಣವಾಗಿದೆ ಎಂದು ಸದನ ಸಮಿತಿ ರಚಿಸಲಾಗಿದೆ. ಆ ಸಮಿತಿಯಲ್ಲಿ ನಮ್ಮ ಪಕ್ಷದ ಸದಸ್ಯರು ಏನೆಲ್ಲಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬುದೂ ವರದಿಯಲ್ಲಿ ತಿಳಿಸಲಿ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.