ಐಎಂಎ ಪ್ರಕರಣ: ಮತ್ತೆ 83 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶ
Team Udayavani, Jun 26, 2019, 3:00 AM IST
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ಮಂಗಳವಾರ ಮನ್ಸೂರ್ ಖಾನ್‌ಗೆ ಸೇರಿದ ತಿಲಕನಗರ ಮತ್ತು ಯಶವಂತಪುರದಲ್ಲಿರುವ ಐಎಂಎ ಗೋಲ್ಡ್ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ವಿಶೇಷ ತನಿಖಾ ತಂಡ(ಎಸ್‌ಐಟಿ) 83 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಿದೆ.
ಎಸ್‌ಐಟಿ ಎಸಿಪಿ ಬಾಲರಾಜ್ ನೇತೃತ್ವದ ಎರಡು ತಂಡಗಳ ಅಧಿಕಾರಿಗಳು ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ತಿಲಕ್‌ನಗರ ಮತ್ತು ಯಶವಂಪತಪುರದಲ್ಲಿರುವ ಐಎಂಎ ಗೋಲ್ಡ್ ಕಂಪನಿಯ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು. ಈ ವೇಳೆ ತಿಲಕನಗರದ ಐಎಂಎ ಗೋಲ್ಡ್‌ನಲ್ಲಿ 41.60 ಲಕ್ಷ ರೂ. ಮೌಲ್ಯದ 1 ಕೆ.ಜಿ.300 ಗ್ರಾಂ ಚಿನ್ನದ ಆಭರಣಗಳು, 2.20 ಲಕ್ಷ ರೂ. ಮೌಲ್ಯದ 5.5ಕೆ.ಜಿ ತೂಕದ ಬೆಳ್ಳಿ ವಸ್ತುಗಳು, ಎರಡು ಸಾವಿರ ನಗದು ಪತ್ತೆಯಾಗಿವೆ.
ಯಶವಂತಪುರದಲ್ಲಿರುವ ಕಚೇರಿಯಲ್ಲಿ 31.04 ಲಕ್ಷ ರೂ. ಮೌಲ್ಯದ 970 ಗ್ರಾಂ ಚಿನ್ನದ ಆಭರಣಗಳು, 8.40 ಲಕ್ಷ ರೂ. ಮೌಲ್ಯದ 21 ಕೆ.ಜಿ. ಬೆಳ್ಳಿ ವಸ್ತುಗಳು ಸಿಕ್ಕಿದ್ದು, ಒಟ್ಟಾರೆ ಎರಡು ಕಡೆಗಳ ಪರಿಶೀಲನೆಯಲ್ಲಿ 83.26.000 ರೂ. ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ. ಅಷ್ಟೇ ಅಲ್ಲದೆ, ಕೆಲ ದಾಖಲೆಗಳು ದೊರಕಿವೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಜೂ.24 ರಂದು ಸಿಕ್ಕಿದ್ದೇಷ್ಟು?: ಜೂನ್ 24ರಂದು ಶಿವಾಜಿನಗರದ ಲೇಡಿ ಕರ್ಜನ್ ರಸ್ತೆಯಲ್ಲಿರುವ ಐಎಂಎ ಗೋಲ್ಡ್ ಹಾಗೂ ಪ್ರಧಾನ ಕಚೇರಿಗಳ ಪರಿಶೀಲನೆ ವೇಳೆ 11.34 ಕೋಟಿ ಮೌಲ್ಯದ 41 ಕೆ.ಜಿ 302 ಗ್ರಾಂ ತೂಕದ ಚಿನ್ನಾಭರಣ, 8.27 ಲಕ್ಷ ಮೌಲ್ಯದ 71 ಕೆ.ಜಿ 770 ಗ್ರಾಂ ತೂಕದ ಬೆಳ್ಳಿ ವಸ್ತುಗಳು, 5.60 ಲಕ್ಷ ರೂ ನಗದು ಹಾಗೂ 320 ಗ್ರಾಂ ತೂಕದ ಚಿನ್ನಾಭರಣ, 14.5 ಕ್ಯಾರೆಟ್ ವಜ್ರ, 60 ಕ್ಯಾರೆಟ್ ಹರಳುಗಳು, 470 ಗ್ರಾಂ ತೂಕದ ಬೆಳ್ಳಿಯ ವಸ್ತುಗಳು, 7.85 ಲಕ್ಷ ರೂ. ನಗದು, .32 ರಿವಾಲ್ವಾರ್, 58 ಗುಂಡುಗಳು ಸಿಕ್ಕಿವೆ. ಒಟ್ಟಾರೆ 11.72.72.000 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.