ಅನಂತಕುಮಾರ್ ಹೆಗಡೆ ಸಂಪುಟ ಸೇರ್ಪಡೆಗೆ ಐಎಂಎ ಆಕ್ಷೇಪ
Team Udayavani, Sep 6, 2017, 12:00 PM IST
ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಅನಂತಕುಮಾರ್ ಹೆಗಡೆ ಅವರನ್ನು ಕೇಂದ್ರ ಸಚಿವ ಸಂಪುಟದಲ್ಲಿ ಸೇರಿಸಿಕೊಂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದಿದೆ.
“ಆರೋಪ ಎದುರಿಸುತ್ತಿರುವ ಸಂಸದರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಬದಲು ಅವರನ್ನು ಕೇಂದ್ರ ಸಂಪುಟದಲ್ಲಿ ಸ್ಥಾನ ಕೊಟ್ಟು “ಪುರಸ್ಕಾರ’ ನೀಡಿರುವುದು ಇಡೀ ವೈದ್ಯರನ್ನು ಘಾಸಿಗೊಳಿಸಿದೆ. ಅನಂತಕುಮಾರ್ ಅವರನ್ನು ಸಚಿವರನ್ನಾಗಿ ಮಾಡುವ ಮೂಲಕ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ.
ಹಲ್ಲೆ ಘಟನೆಯ ವಿಡಿಯೋ ತುಣುಕನ್ನು ಪತ್ರದೊಂದಿಗೆ ಅಡಕ ಮಾಡಿ, “ಅವರಿಗೆ (ಹೆಗಡೆ) ಕೇಂದ್ರ ಸಚಿವ ಸ್ಥಾನದ ಪುರಸ್ಕಾರ ಸಿಕ್ಕಿದ್ದು ಹೇಗೇ? ಎಂದು ಐಎಂಎ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ. ಅಗರವಾಲ್ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಸಚಿವರಾದ ತಕ್ಷಣ, ವೈದ್ಯರ ಮೇಲೆ ನಡೆಸಿದ ಹಲ್ಲೆ ಬಗ್ಗೆ ಹೆಗಡೆಯವರು ಕ್ಷಮೆ ಕೇಳಬಹುದು ಎಂಬುದು ವೈದ್ಯರ ಭಾವನೆ ಆಗಿತ್ತು. ಆದರೆ, ಹಾಗಾಗಲಿಲ್ಲ.
ಅಲ್ಲದೇ ಅವರನ್ನು ಕೌಶಲ್ಯಾಭಿವೃದ್ಧಿ ಸಚಿವರನ್ನಾಗಿ ಮಾಡುವ ಮೂಲಕ ಸಮಾಜಕ್ಕೆ ಮತ್ತೂಂದು ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ. “ಹಿಂಸೆಯಲ್ಲಿ ಭಾಗಿಯಾಗುವುದು ಮತ್ತು ಕ್ಷಮೆ ಕೇಳದಿರುವುದು’ ಎಂಬ ಹೊಸ ಕೌಶಲ್ಯವೊಂದನ್ನು ಉದ್ಯಮಿಗಳಿಗೆ ಹೇಳಿಕೊಡುವುದಾ? ಎಂದು ಅವರು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.