ಐಎಂಎ ವಂಚನೆ: ಉಪ ವಿಭಾಗಾಧಿಕಾರಿ ಬಂಧನ
Team Udayavani, Jul 6, 2019, 3:00 AM IST
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಆಳಕ್ಕಿಳಿಯುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಂಗಳೂರು ಉತ್ತರ ಉಪವಿಭಾಗಧಿಕಾರಿ ಹಾಗೂ ಗ್ರಾಮಲೆಕ್ಕಿಗ ಮಂಜುನಾಥ್ ಎಂಬಾತನನ್ನು ಬಂಧಿಸಿದೆ.
ಐಎಂಎ ಕಂಪನಿ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಈ ಹಿಂದೆ ಉಪವಿಭಾಗಾಧಿಕಾರಿ ಎ.ಸಿ.ನಾಗರಾಜ್ ಅವರನ್ನು ಸಕ್ಷಮ ಪ್ರಾಧಿಕಾರಿಯನ್ನಾಗಿ ನೇಮಿಸಿತ್ತು. ಆದರೆ, ನಾಗರಾಜು ಅವರು ಸೂಕ್ತ ತನಿಖೆ ನಡೆಸದೆ ಐಎಂಎ ಅಕ್ರಮ ವ್ಯವಹಾರವನ್ನು ಮುಚ್ಚಿಟ್ಟು ಕಂಪನಿ ಪರವಾಗಿ ವರದಿ ನೀಡಲು ಐಎಂಎ ಮಾಲೀಕ ಮನ್ಸೂರ್ ಖಾನ್ ಕಡೆಯಿಂದ ಲಂಚದ ರೂಪದಲ್ಲಿ 4.5 ಕೋಟಿ ರೂ. ಪಡೆದಿದ್ದರು.
ಪ್ರಕರಣದ ತನಿಖೆ ವೇಳೆ ಈ ವಿಷಯ ಬಹಿರಂಗವಾಗಿದೆ. ಹೀಗಾಗಿ ಎಸಿ ನಾಗರಾಜ್ ಹಾಗೂ ಈ ಅಕ್ರಮಕ್ಕೆ ಸಹಕರಿಸಿ ಗ್ರಾಮಲೆಕ್ಕಿಗ ಮಂಜುನಾಥ್‌ನನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿಸಿದ್ದು ಎಲ್.ಸಿ ನಾಗರಾಜ್ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿ ಮಂಜುನಾಥ್‌ನನ್ನು ನ್ಯಾಯಾಲಯದ ಅನುಮತಿ ಮೇರೆಗೆ 9 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
1.20 ಕೋಟಿ ಮೌಲ್ಯದ ಫಾರ್ಮಾ ವಸ್ತು ಜಪ್ತಿ: ಮತ್ತೂಂದೆಡೆ ಐಎಂಎ ಒಡೆತನದ ನಗರದ ವಿವಿಧ ಭಾಗಗಳಲ್ಲಿರುವ ಫ್ರಂಟ್ ಲೈನ್ ಫಾರ್ಮಾ ಮಳಿಗೆಗಳಲ್ಲಿ ಶುಕ್ರವಾರ ಶೋಧ ಕಾರ್ಯಾಚರಣೆ ನಡೆಸಿರುವ ಎಸ್‌ಐಟಿ ಅಧಿಕಾರಿಗಳು, 1.20 ಕೋಟಿ ರೂ. ಮೌಲ್ಯದ ಫಾರ್ಮಸಿ, ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಶಾಂತಿನಗರ, ಬಿಟಿಎಂ ಲೇಔಟ್ ಹಾಗೂ ಜಯನಗರದ ಎರಡು ಫ್ರಂಟ್ ಲೈನ್ ಫಾರ್ಮಾ ಮಳಿಗೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಐಎಂಎ ಮಾಲೀಕತ್ವ ಹೊಂದಿರುವ ಇತರೆ ಕಂಪನಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.