ಐಎಂಎ: ಜಮೀರ್ ಅಹಮದ್ ವಿಚಾರಣೆ
Team Udayavani, Aug 1, 2019, 3:03 AM IST
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಮೀರ್ ಅಹಮದ್ ಬುಧವಾರ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದು, ಸತತ ಒಂಬತ್ತೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.
ಅರಮನೆ ರಸ್ತೆಯಲ್ಲಿರುವ ಸಿಐಡಿ ಆವರಣದಲ್ಲಿರುವ ಎಸ್‌ಐಟಿ ಕಚೇರಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಆಗಮಿಸಿದ ಜಮೀರ್ ಅಹಮದ್‌ರನ್ನು ರಾತ್ರಿ 8.30ರವರೆಗೆ ವಿಚಾರಣೆ ನಡೆಸಲಾಗಿದೆ. ಈ ವೇಳೆ ಮನ್ಸೂರ್ ಖಾನ್‌ಗೆ ಆಸ್ತಿ ಮಾರಾಟ ಮಾಡಿದ್ದ ಕುರಿತು ವಿಚಾರವಾಗಿ ಪ್ರಶ್ನಿಸಲಾಯಿತು.
ಜತೆಗೆ ಆತ ಹೇಗೆ ಪರಿಚಿತನಾದ? ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿರುವ ವಿಚಾರ ತಮ್ಮ ಗಮನಕ್ಕೆ ಇರಲಿಲ್ಲವೇ? ಎಂಬಿತ್ಯಾದಿ ಹತ್ತಾರು ಪ್ರಶ್ನೆಗಳನ್ನು ಕೇಳಲಾಗಿದೆ. ಎಲ್ಲದಕ್ಕೂ ಅವರು ಸಮರ್ಪಕವಾಗಿ ಉತ್ತರಿಸಿದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ವಿಚಾರಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಜಮೀರ್, ಮನ್ಸೂರ್ ಖಾನ್‌ಗೂ ತಮಗೂ ಯಾವುದೇ ಸಂಬಂಧ ಇಲ್ಲ. ನಿವೇಶನ ಮಾರಾಟ ವಿಚಾರವಾಗಿ ಪರಿಚಯವಾಗಿದ್ದು, ಹೊರತುಪಡಿಸಿ ಆತನ ಬಗ್ಗೆ ಬೇರೆ ಯಾವುದೇ ಮಾಹಿತಿ ಇಲ್ಲ. ತನಿಖಾಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಸೂಕ್ತ ಉತ್ತರ ನೀಡಿದ್ದೇನೆ.
ನಗರದಲ್ಲಿರುವ ಆಸ್ತಿ ಮಾರಾಟ ಸಂಬಂಧ 2017ರಲ್ಲಿ ಬಿಬಿಎಂಪಿ ನಾಮನಿರ್ದೇಶಿತ ಸದಸ್ಯ ಸೈಯದ್ ಮುಜಾಯಿದ್(ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ) ಮೂಲಕ ಮನ್ಸೂರ್ ಖಾನ್ ಪರಿಚಯವಾಗಿದ್ದ. 2009ರಲ್ಲಿ ಖರೀದಿಸಿದ್ದ ಆಸ್ತಿಯನ್ನು 9.38 ಕೋಟಿ ರೂ.ಗೆ ಮಾರಾಟ ಮಾಡಿ 5 ಕೋಟಿ ರೂ. ಲಾಭಗಳಿಸಿದ್ದೇನೆ.
ಮನ್ಸೂರ್ ಖಾನ್‌ನನ್ನು ನಾಲ್ಕೈದು ಬಾರಿ ಮಾತ್ರ ಭೇಟಿಯಾಗಿದ್ದೇನೆ. ಇಫ್ತಿಯಾರ್ ಕೂಟಕ್ಕೆ ಕರೆದಾಗ ಹೋಗಿದ್ದಾನೆ ಅಷ್ಟೆ. ಆಸ್ತಿ ಮಾರಾಟ ಮಾಡಿದ ಎಲ್ಲ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇನೆ. ಮತ್ತೂಮ್ಮೆ ವಿಚಾರಣೆಗೆ ಕರೆದರೆ ಖಂಡಿತ ಬರುತ್ತೇನೆ ಎಂದು ಹೇಳಿದರು.
ರೋಷನ್ ಬೇಗ್ ಗೈರು: ಅನರ್ಹ ಶಾಸಕ ಆರ್.ರೋಷನ್ ಬೇಗ್ ಮತ್ತೂಮ್ಮೆ ಎಸ್‌ಐಟಿ ವಿಚಾರಣೆಗೆ ಗೈರಾಗಿದ್ದಾರೆ. ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ನಾಲ್ಕು ಬಾರಿ ನೋಟಿಸ್ ನೀಡಲಾಗಿತ್ತು. ಆದರೂ ಅನಗತ್ಯ ಸಬೂಬುಗಳನ್ನು ನೀಡಿ ಗೈರಾಗುತ್ತಿದ್ದಾರೆ.
ಬುಧವಾರ ಕೂಡ ಮತ್ತೂಮ್ಮೆ ವಿಚಾರಣೆಗೆ ಬರದೆ ಅನಾರೋಗ್ಯ ಕಾರಣ ನೀಡಿ ಒಂದು ವಾರಗಳ ಕಾಲವಕಾಶ ಕೋರಿದ್ದಾರೆ. ಹೀಗಾಗಿ ಮತ್ತೂಂದು ನೋಟಿಸ್ ಜಾರಿ ಮಾಡಿ, ದಿನಾಂಕ ನಿಗದಿ ಮಾಡಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.