![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 8, 2018, 2:44 PM IST
ಬೆಂಗಳೂರು: ರಾಜ್ಯದ ಜನತೆಗೆ ರಿಯಾಯಿತಿ ದರದಲ್ಲಿ ತಿಂಡಿ-ಊಟ ಪೂರೈಸುವ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆಯ ಅನುಷ್ಠಾನ ಚುರುಕುಗೊಂಡಿದೆ. ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಯೋಜನೆಯನ್ನು ವಿಸ್ತರಿಸಲು ಸರ್ಕಾರು ಯೋಜನೆ ರೂಪಿಸಿತ್ತು.
ಅದರಂತೆ ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಒಟ್ಟು 247 ಕ್ಯಾಂಟೀನ್‌ಗಳನ್ನು ನಿರ್ಮಿಸಲು ಆದೇಶ ಹೊರಡಿಸಿದ್ದ ಸರ್ಕಾರ, ಯೋಜನೆ ಜಾರಿಗಾಗಿ 211 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ.
ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ಪ್ರೀಕಾಸ್ಟ್ ಮಾದರಿ ಇಂದಿರಾ ಕ್ಯಾಂಟೀನ್‌ಗಳನ್ನು 97 ಕಡೆ ನಿರ್ಮಿಸಲು ಅಧಿಕಾರಿಗಳು ತೀರ್ಮಾನಿಸಿದ್ದರು. ಅದರಂತೆ ಜೂನ್ ತಿಂಗಳ ಅಂತ್ಯಕ್ಕೆ 247 ಕ್ಯಾಂಟೀನ್‌ಗಳ ಪೈಕಿ 113 ಕಡೆಗಳಲ್ಲಿ ಕ್ಯಾಂಟೀನ್‌ಗಳ ಕಾಮಗಾರಿ ಮಾತ್ರ ಪೂರ್ಣಗೊಂಡಿದ್ದು, ಸುಮಾರು 60 ಕ್ಯಾಂಟೀನ್‌ಗಳಲ್ಲಿ ಮಾತ್ರ ಸಾರ್ವಜನಿಕರಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ ಎನ್ನಲಾಗಿದೆ.
ಸರ್ಕಾರದಿಂದ ಈಗಾಗಲೇ ಅನುದಾನ ಬಿಡುಗಡೆಯಾಗಿರುವುದರಿಂದ ಕಾಮಗಾರಿಗೆ ಯಾವುದೇ ರೀತಿಯ ಅಡಚಣೆ ಉಂಟಾಗುವುದಿಲ್ಲ. ಹೆಚ್ಚಿನ ಭಾಗಗಳಲ್ಲಿ ಕಾಂಕ್ರಿಟ್ ಕಟ್ಟಡ ಕ್ಯಾಂಟೀನ್‌ಗಳನ್ನು ನಿರ್ಮಿಸಬೇಕಿದ್ದು, ಕಟ್ಟಡ ನಿರ್ಮಾಣಕ್ಕೆ ಕನಿಷ್ಠ ಮೂರು ತಿಂಗಳು ಬೇಕಾಗುತ್ತದೆ. ಇದರ ನಡುವೆಯೇ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರಿಂದ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.