ಖಾಸಗಿ ವೈದ್ಯಕೀಯ ವಿಧೇಯಕಕ್ಕೆ ಅಂಕಿತ
Team Udayavani, Jan 6, 2018, 6:05 AM IST
ಬೆಂಗಳೂರು: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಉದ್ದೇಶದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರೆತಿದೆ.
ಸರ್ಕಾರ ಮತ್ತು ಖಾಸಗಿ ವೈದ್ಯ ಸಂಸ್ಥೆಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್ ಅವರು ಹಠಕ್ಕೆ ಬಿದ್ದು ವಿಧಾನಮಂಡಲದಲ್ಲಿ ಒಪ್ಪಿಗೆ ಪಡೆದಿದ್ದ ಮಹತ್ವಾಕಾಂಕ್ಷಿ ವಿಧೇಯಕಕ್ಕೆ ರಾಜ್ಯಪಾಲ ವಜೂಭಾಯ್ ವಾಲಾ ಗುರುವಾರ ಒಪ್ಪಿಗೆ ನೀಡಿದ್ದಾರೆ.
ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಒಪ್ಪಿದ ರೂಪದಲ್ಲಿರುವ ವಿಧೇಯಕಕ್ಕೆ ರಾಜ್ಯಪಾಲರು ಅನುಮತಿ ನೀಡಿದ್ದು, ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರಡು ರೂಪಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಿದೆ. ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ಕಾಯ್ದೆ ಜಾರಿಗೆ ಬರಲಿದೆ. ರಾಜ್ಯಪಾಲರ ಅಂಕಿತ ದೊರೆತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್, ನನ್ನ ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಇದೊಂದು ಸುದಿನ ಎಂದು ಬಣ್ಣಿಸಿದ್ದಾರೆ.
ಏನಾಗಿತ್ತು?
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕಕ್ಕೆ ಮೊದಲಿಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಆಕ್ಷೇಪ ವ್ಯಕ್ತವಾಗಿ ಜಂಟಿ ಸಲಹಾ ಸಮಿತಿಗೆ ವಹಿಸಲಾಗಿತ್ತು. ನಂತರ ಸಮಿತಿಯ ವರದಿ ಆಧರಿಸಿ ವಿಧೇಯಕ ಅಂತಿಮಗೊಳಿಸಲಾಗಿತ್ತಾದರೂ ಜೈಲು ಶಿಕ್ಷೆ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ್ದವು.
ಬೆಳಗಾವಿಯಲ್ಲಿ ನಡೆದ ಅಧಿವೇಶನ ಸಂದರ್ಭದಲ್ಲಿ ಇದೇ ವಿಚಾರದಲ್ಲಿ ಖಾಸಗಿ ವೈದ್ಯರು ಮುಷ್ಕರ ನಡೆಸಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘಟನೆಯ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ ಅಧಿವೇಶನದಲ್ಲಿ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿತ್ತು.
ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಕರ್ತವ್ಯ ನಿರ್ಲಕ್ಷ್ಯ ಅಥವಾ ಲೋಪ ಎಸಗಿದ ವೈದ್ಯರಿಗೆ ಜೈಲು ಶಿಕ್ಷೆಯ ಪ್ರಸ್ತಾಪ ಕೈ ಬಿಡಲಾಗಿತ್ತು. ದಂಡದ ಮೊತ್ತ ಹೆಚ್ಚಿಸಲಾಗಿತ್ತು. ವಿಧಾನಸಭೆಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸ್ವತಂತ್ರ ಆಯೋಗ ರಚಿಸುವುದಾಗಿ ಪ್ರಕಟಿಸಿದ್ದರು.
ವಿಧೇಯಕದಲ್ಲಿರುವ ಪ್ರಮುಖಾಂಶಗಳು
*ಸರ್ಕಾರಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸ್ವತಂತ್ರ ಆಯೋಗ ರಚನೆ ನಿರ್ಧಾರ
* ವೈದ್ಯರ ನಿರ್ಲಕ್ಷ್ಯಕ್ಕೆ ಜೈಲುಶಿಕ್ಷೆ ಇಲ್ಲ, ದಂಡದ ಮೊತ್ತ ಹೆಚ್ಚಳ
* ನೋಂದಣಿ ಇಲ್ಲದಿದ್ದರೆ ಮತ್ತು ನಕಲಿ ವೈದ್ಯರಿಗೆ ದಂಡ ಮತ್ತು ಶಿಕ್ಷೆ
* ನೋಂದಣಿ ಜತೆಗೆ ಕುಂದುಕೊರತೆ ನಿವಾರಣಾ ಪ್ರಾಧಿಕಾರ
* ವೈದ್ಯರ ನಿರ್ಲಕ್ಷ್ಯ ಆರೋಪದ ಬಗ್ಗೆ ಕೆಎಂಸಿ ವರದಿ ಬಳಿಕ ಕ್ರಮ
* ಶುಲ್ಕ ಭರಿಸದಿದ್ದರೆ ಮೃತದೇಹ ಕೊಡುವುದು ಕಡ್ಡಾಯ, ಹಣ ನಂತರ ಪಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.