ಹಳೆ ಮೈಸೂರಿಗೂ ಪ್ರಾಮುಖ್ಯತೆ


Team Udayavani, Feb 9, 2019, 5:49 AM IST

hale.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್‌ನಲ್ಲಿ ಹಳೇ ಮೈಸೂರು ಭಾಗದ ಕೆಲವೇ ಜಿಲ್ಲೆಗಳಿಗೆ ಕೊಡುಗೆ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿದ್ದರಿಂದ ಈ ಬಾರಿ ಹಳೇ ಮೈಸೂರು ಭಾಗದ ಎಲ್ಲ ಜಿಲ್ಲೆಗಳಿಗೂ ಬಜೆಟ್‌ನಲ್ಲಿ ಪ್ರಾಮುಖ್ಯತೆ ಕಲ್ಪಿಸಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ನಲ್ಲಿ ಜೆಡಿಎಸ್‌ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದು, ವಿಶೇಷವಾಗಿ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹಣದ ಹೊಳೆ ಹರಿಸಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಹಾಗೂ ಹಾಲಿ ಮುಖ್ಯಮಂತ್ರಿಯವರ ತವರು ಜಿಲ್ಲೆ ಹಾಸನ ಮತ್ತು ಅವರ ಕ್ಷೇತ್ರದವಾದ ರಾಮನಗರ ಜಿಲ್ಲೆಗೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ಸಿಕ್ಕಿದೆ.

ಹಾಸನ ಜಿಲ್ಲೆಯ ಕಾಚೀನಹಳ್ಳಿ ಏತ ನೀರಾವರಿ 3ನೇ ಹಂತದ ಯೋಜನೆ 100 ಕೋಟಿ, ಒಂಟಿಗುಡ್ಡ ಏತನೀರಾವರಿಗೆ 54 ಕೋಟಿ, ಅರಕಲಗೂಡಿನ 150 ಕೆರೆಗೆ ಹೇಮೆ ನೀರು ಹರಿಸಲು 120 ಕೋಟಿ, ಅರಸೀಕೆರೆ ಕೆರೆಗಳ ಅಭಿವೃದ್ಧಿಗೆ 15 ಕೋಟಿ, ಬೇಲೂರು ಕೆರೆಗಳ ಅಭಿವೃದ್ಧಿಗೆ ಯಗಚಿ ನೀರು ಹರಿಸಲು 100 ಕೋಟಿ, ಎತ್ತಿನ ಹೊಳೆ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ 60 ಕೋಟಿ ರೂ. ಸಕಲೇಶಪುರ ಕುಡಿಯುವ ನೀರಿಗೆ 12 ಕೋಟಿ ರೂ. ಅನುದಾನ ನೀಡಲಾಗಿದೆ.

ಮಂಡ್ಯ ಜಿಲ್ಲೆ 2ನೇ ಹಂತದ ವಿಶ್ವೇಶ್ವರಯ್ಯ ಜಾಲ 1ನೇ ಘಟಕ ಆಧುನೀಕರಣಕ್ಕೆ 400 ಕೋಟಿ ರೂ. ಕೋಲಾರದಲ್ಲಿ ಟೊಮೆಟೋ ಸಂಸ್ಕರಣಾ ಘಟಕಕ್ಕೆ 20 ಕೋಟಿ ರೂ. ತುಮಕೂರಿನ ಸಿದ್ಧಗಂಗಾ ಮಠದ ಪ್ರಾರ್ಥನಾ ಮಂದಿರಕ್ಕೆ 5 ಕೋಟಿ, ಚಿತ್ರದುರ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳ ಕಾಮಗಾರಿಗೆ 105 ಕೋಟಿ, ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲೂಕುಗಳ ನೀರಾವರಿ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ಕೆರೆಗಳಿಗೆ ಕಬಿನಿ ನೀರು ಹರಿಸಲು 80 ಕೋಟಿ, 2ನೇ ಹಂತದ ವಿಶ್ವೇಶ್ವರಯ್ಯ ಜಾಲ 1ನೇ ಘಟಕದ ಅಧುನೀಕರಣಕ್ಕೆ 400 ಕೋಟಿ. ಬೆಂಗಳೂರು ನಗರದ ಕಾವೇರಿ ನೀರು ಸರಬರಾಜು ಯೋಜನೆಗೆ 500 ಕೋಟಿ ರೂ. ಅನುದಾನ ಘೋಷಿಸಲಾಗಿದೆ. 

ಟಾಪ್ ನ್ಯೂಸ್

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

18-

US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ

17-BNG

Bengaluru: ಕೆಂಪೇಗೌಡ ಲೇಔಟ್‌ನಲ್ಲಿ ಅನಧಿಕೃತ ನಿವೇಶನ ತೆರವು

16-bng

Bengaluru: ವಿವಾಹ ತಿರಸ್ಕರಿಸಿದ ನರ್ಸ್‌ಗೆ ಚೂರಿ ಇರಿದ ಪಾಗಲ್‌ ಪ್ರೇಮಿ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.