ಕೆಪಿಸಿಸಿ ಅಧ್ಯಕ್ಷ ಗಾದಿ ದಿಲ್ಲಿಯಲ್ಲಿ ಇಂದು ಮಹತ್ವದ ಸಭೆ


Team Udayavani, May 29, 2017, 10:01 AM IST

Congress-Party-Logo-650.jpg

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸ ಸಾರಥಿಯಾ? ಅಥವಾ ಹಾಲಿ ಅಧ್ಯಕ್ಷರೇ ಮುಂದುವರಿಕೆಯಾ ಎಂಬ ಬಗ್ಗೆ ಸೋಮವಾರ ಬಹುತೇಕ ಸ್ಪಷ್ಟತೆ ದೊರೆಯಲಿದೆ. ಹೈಕಮಾಂಡ್‌ ಮೂಲಗಳ ಪ್ರಕಾರ, ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕವಾಗಿದ್ದೇ ಆದರೆ ಡಿ.ಕೆ. ಶಿವಕುಮಾರ್‌ ಅಥವಾ ಎಂ.ಬಿ. ಪಾಟೀಲ್‌ಗೆ ಅದೃಷ್ಟ ಖುಲಾಯಿಸುವ ಸಾಧ್ಯತೆ ಹೆಚ್ಚು. ಹಿರಿಯರು ಬೇಕು ಎಂದಾದರೆ ಮಾತ್ರ ಎಸ್‌.ಆರ್‌. ಪಾಟೀಲ್‌ ರೇಸ್‌ಗೆ ಬರಬಹುದು. ಪೈಪೋಟಿ ತೀವ್ರಗೊಂಡರೆ ಹೊಸ ಸಮಸ್ಯೆ ಮೈಮೇಲೆ ಎಳೆದುಕೊಳ್ಳುವುದು ಬೇಡ ಎಂದು ಡಾ| ಜಿ.ಪರಮೇಶ್ವರ್‌ ಅವರೇ ಮುಂದುವರಿಯಬಹುದು. ರಾಜ್ಯದಲ್ಲಿ ನಾಲ್ಕು ದಿನ ವಾಸ್ತವ್ಯ ಹೂಡಿ ಎಲ್ಲ ನಾಯಕರ ಅಭಿಪ್ರಾಯ, ಸಲಹೆ – ಸೂಚನೆ ಪಡೆದು ದಿಲ್ಲಿಗೆ ತೆರಳಿರುವ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ನೀಡಿರುವ ವರದಿ ಆಧಾರದ ಮೇಲೆ ಕೆಪಿಸಿಸಿ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು, ಅವರ ಸಾಮರ್ಥ್ಯ, ಪಕ್ಷದ ನಾಯಕರಿಗೆ ಅವರ ಬಗ್ಗೆ ಇರುವ ಅಭಿಪ್ರಾಯ, ಹಾಲಿ ಅಧ್ಯಕ್ಷರ ಕಾರ್ಯವೈಖರಿ, ಅವರನ್ನೇ ಮುಂದುವರಿಸಿದರೆ ಆಗುವ ಲಾಭ-ನಷ್ಟ  ಎಲ್ಲದರ ಬಗ್ಗೆ ವೇಣುಗೋಪಾಲ್‌ ಹೈಕಮಾಂಡ್‌ಗೆ ಈಗಾಗಲೇ ವರದಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಲೋಕಸಭೆ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಭಿಪ್ರಾಯ ಮತ್ತು ಸಲಹೆ ಪ್ರಮುಖವಾಗಿ ಪರಿಗಣನೆಯಾಗಬೇಕು. ಇಬ್ಬರಿಗೂ ಒಪ್ಪುವ ಸರ್ವಸಮ್ಮತ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷರಾಗಿರಬೇಕು ಎಂಬುದು ಹೈಕಮಾಂಡ್‌ ನಿಲುವು ಎಂದು ತಿಳಿದು ಬಂದಿದೆ. ಕೆಪಿಸಿಸಿಗೆ ಹೊಸ ಅಧ್ಯಕ್ಷರು ನೇಮಕವಾದರೂ ಹಾಲಿ ಅಧ್ಯಕ್ಷರೇ ಮುಂದುವರಿದರೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರ್ನಾಟಕದಲ್ಲಿ ಪಕ್ಷದ ವಿಚಾರದಲ್ಲಿ ಹೆಚ್ಚಿನ ಹೊಣೆಗಾರಿಕೆ ಎಐಸಿಸಿ ನೀಡಲಿದೆ ಎಂದು ಹೇಳಲಾಗಿದೆ.

ಸಿಎಂ ದಿಲ್ಲಿಗೆ
ಹೈಕಮಾಂಡ್‌ ಬುಲಾವ್‌ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಸಂಜೆಯೇ ದಿಲ್ಲಿಗೆ ತೆರಳಿದ್ದು, ಸೋಮವಾರ ಬೆಳಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಉಸ್ತುವಾರಿ ವೇಣುಗೋಪಾಲ್‌, ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಆಕಾಂಕ್ಷಿಗಳಾದ ಡಿ.ಕೆ. ಶಿವಕುಮಾರ್‌, ಎಂ.ಬಿ. ಪಾಟೀಲ್‌ ಪಾಲ್ಗೊಳ್ಳಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕದ ಬೆಳವಣಿಗೆ ಹಿನ್ನೆಲೆಯಲ್ಲಿ ಆಕಾಂಕ್ಷಿಗಳಾದ ಎಸ್‌.ಆರ್‌. ಪಾಟೀಲ್‌, ಸಚಿವರಾದ ಕೆ.ಜೆ. ಜಾರ್ಜ್‌, ರೋಷನ್‌ ಬೇಗ್‌ ಸಹಿತ ಹಲವರು ಸಚಿವರು ದಿಲ್ಲಿ ತಲುಪಿದ್ದಾರೆ.

ಟಾಪ್ ನ್ಯೂಸ್

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Navy-Submarin

Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್‌ ಸೇರ್ಪಡೆ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.