2018ಕ್ಕೆ ಸೋಲಾರ್ ವಿದ್ಯುತ್ ಉತ್ಪಾದನೆ
Team Udayavani, Mar 22, 2017, 9:05 AM IST
ವಿಧಾನ ಪರಿಷತ್ತು: ಮುಂದಿನ ವರ್ಷ ಜಗತ್ತಿನ ಅತಿದೊಡ್ಡ ಸೋಲಾರ್ ಪಾರ್ಕ್ ಪಾವಗಡದಲ್ಲಿ ಕಾರ್ಯಾ ರಂಭವಾಗಲಿದ್ದು, ಸೌರಶಕ್ತಿಯಿಂದ ಒಟ್ಟು 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಪ್ರಶ್ನೋತ್ತರ ವೇಳೆ ಬಿಜೆಪಿಯ ತಾರಾ ಅನುರಾಧ ಪ್ರಶ್ನೆಗೆ ಉತ್ತರಿಸಿದ ಅವರು, “ಪಾವಗಡದ ಬಳಿ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸೋಲಾರ್ ಪಾರ್ಕ್ ನಿರ್ಮಾಣವಾಗುತ್ತಿದ್ದು, 2018ಕ್ಕೆ ಪ್ರಧಾನಿಯವರಿಂದಲೇ ಉದ್ಘಾಟಿಸಲಾಗುವುದು. ಒಂದು ಎಕರೆ ಭೂಮಿಯನ್ನೂ ಖರೀದಿಸದೆ, ಸ್ವಾಧೀನಪಡಿಸಿಕೊಳ್ಳದೆ ರೈತರಿಗೆ ಬಾಡಿಗೆ ನೀಡುವ ಮೂಲಕ ಅವರ ಜಮೀನಿನಲ್ಲಿ ಘಟಕ ಅಳವಡಿಸಿ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಜೂನ್ ಹೊತ್ತಿಗೆ ಸೋಲಾರ್ ಪಾರ್ಕ್‌ನಿಂದ 500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆರಂಭವಾಗಲಿದೆ ಎಂದು ತಿಳಿಸಿದರು.
ತಾವು ಸಚಿವನಾಗಿ ಅಧಿಕಾರ ವಹಿಸಿಕೊಂಡಾಗ ಸೌರಶಕ್ತಿಯಿಂದ 17 ಮೆಗಾ ವ್ಯಾಟ್ ವಿದ್ಯುತ್ ಉತ್ಪತ್ತಿಯಾ ಗುತ್ತಿತ್ತು. ಸದ್ಯ
ಸೌರಶಕ್ತಿ ಮೂಲದಿಂದ 55.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗು ತ್ತಿದ್ದು, ವರ್ಷಾಂತ್ಯಕ್ಕೆ 2000 ಮೆಗಾವ್ಯಾಟ್‌ಗೆ ಏರಿಕೆ
ಮಾಡಲು ಪ್ರಯತ್ನಿಸಲಾಗುವುದು. ಇದೇ ಮೊದಲ ಬಾರಿಗೆ ಪ್ರತಿ ತಾಲೂಕು ಮಟ್ಟದಲ್ಲೂ ಸೌರ ವಿದ್ಯುತ್ ಘಟಕ ಅಳವಡಿಸುವ
ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದು ಸ್ಥಳದಲ್ಲಿ ವಿದ್ಯುತ್ ಉತ್ಪಾದಿಸಿ ಅದನ್ನು ಬೇರೆಡೆ ಸಾಗಿಸುವ ಬದಲಿಗೆ ತಾಲೂಕು ಮಟ್ಟದ
ಪ್ರಸರಣ ಜಾಲವನ್ನೇ ಬಳಸಿಕೊಳ್ಳಲು 110 ತಾಲೂಕುಗಳಲ್ಲಿ ತಲಾ 20 ಮೆಗಾವ್ಯಾಟ್ ಸೌರವಿದ್ಯುತ್ ಉತ್ಪಾದನೆಗೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.