ಹಕ್ಕುಗಳ ಜತೆಗೆ ಕರ್ತವ್ಯವನ್ನೂ ಪಾಲಿಸಲಿ ಜನಪ್ರತಿನಿಧಿಗಳು
Team Udayavani, Feb 15, 2017, 12:02 PM IST
ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಜನಪ್ರತಿನಿಧಿಗಳು ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ ಹೊರತು, ಕರ್ತವ್ಯಗಳ ಬಗ್ಗೆ ಯಾರೂ ಮಾತನಾಡುವುದಿಲ್ಲ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಶ್ವ ವೀರಶೈವ ಸಂಸ್ಕೃತಿ ಪ್ರತಿಷ್ಠಾನ ಮತ್ತು ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕನ್ನಡಭವನದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಗುಣವಂತ ಮಂಜುರವರ “ಗಾಂಧಿ ಊರಿನ ಮೋದಿ’ ಕೃತಿ ಬಿಡುಗಡೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, “ಜನಪ್ರತಿನಿಧಿಗಳು ಹಕ್ಕುಗಳಂತೆಯೇ ಕರ್ತವ್ಯಗಳನ್ನು ನಿರ್ವಹಿಸುವುದು ಅತ್ಯಗತ್ಯ,” ಎಂದು ಹೇಳಿದರು.
“ಸಾರ್ವಜನಿಕ ಕ್ಷೇತ್ರದಲ್ಲಿರುವ ಜನಪ್ರತಿನಿಧಿಗಳ ಮೇಲೆ ಮಹತ್ತರ ಜವಾಬ್ದಾರಿ ಇರುತ್ತದೆ. ಅದನ್ನು ಅರಿತು ನಡೆದುಕೊಳ್ಳಬೇಕು. ದೇಶದ ಜನರ ಹಿತಾಸಕ್ತಿ, ಭದ್ರತೆ ವಿಚಾರವಾಗಿ ಯಾವುದೇ ರಾಜೀ ಮಾಡಿಕೊಳ್ಳಬಾರದು. ಇತರರಿಗೆ ಮಾದರಿಯಾದಂತ ನಡವಳಿಕೆ ಹೊಂದುವುದು ಒಬ್ಬ ಉತ್ತಮ ರಾಜಕಾರಣಿಯ ಸದ್ಗುಣ,” ಎಂದರು.
ಮಾಜಿ ಕೇಂದ್ರ ಸಚಿವ ಡಾ.ಎಂ.ವಿ.ರಾಜಶೇಖರನ್ ಮಾತನಾಡಿ, “”ಜನಸೇವೆಯನ್ನು ಶ್ರೇಷ್ಠ ತ್ಯಾಗದ ಕೆಲಸ ಎಂಬುದನ್ನು ಮರೆತಿರುವ ರಾಜಕಾರಣಿಗಳು ದ್ವೇಷ, ಅಸೂಯೆ, ಆರೋಪ ಪ್ರತ್ಯೋರೋಪ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ರಾಜಕೀಯ ಮುಖಂಡರ ಈ ದುಸ್ಥಿತಿ ಕಂಡು ಬೇಸರವಾಗಿದೆ,” ಎಂದು ವಿಷಾದ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.