ಹಲವೆಡೆ ಮುಂದುವರಿದ ಮಳೆ ಅವಘಡ
Team Udayavani, Jun 4, 2018, 6:05 AM IST
ಬೆಂಗಳೂರು/ಮಂಗಳೂರು: ರಾಜಧಾನಿ ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಭಾನುವಾವೂ ಮಳೆ
ಯಾಗಿದೆ. ಈ ಮಧ್ಯೆ, ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಚಿಕ್ಕೋಡಿಯಲ್ಲಿ
ರಾಜ್ಯದಲ್ಲೇ ಗರಿಷ್ಠ, 7 ಸೆಂ.ಮೀ. ಮಳೆ ಸುರಿಯಿತು.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಗೊಂದಿಹಳ್ಳಿಯಲ್ಲಿ ರೇಷ್ಮೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಅವ
ಘಡಕ್ಕೆ ರೆಡ್ಡಪ್ಪ (58) ಎಂಬುವರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಮಳೆ ಬಂದಾಗ ಬೀಸಿದ ಬಾರಿ ಗಾಳಿಗೆ ವಿದ್ಯುತ್ ಸಮಸ್ಯೆ ಉಂಟಾಗಿತ್ತು. ಅದನ್ನು ಸರಿಪಡಿಸುವ ವೇಳೆ ವಿದ್ಯುತ್ ಶಾಕ್ ಹೊಡೆಯಿತು.
ಶಿವಮೊಗ್ಗದಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಗೆ ಹಲವೆಡೆ ಸಂಪರ್ಕ ರಸ್ತೆ ಕಡಿದುಹೋಗಿದ್ದು, ಜನರು ಪರದಾಡುವಂತಾಯಿತು. ತಾಲೂಕಿನ ಹೊರಬೈಲು ಗ್ರಾಮದ ಸಂಪರ್ಕ ರಸ್ತೆ ಬಂದ್ ಆಗಿದ್ದು, ರಸ್ತೆಯಲ್ಲಿ ನಾಲ್ಕೈದು ಅಡಿ ನೀರು ಹರಿಯುತ್ತಿತ್ತು. ಸುತ್ತಮುತ್ತಲ ಗದ್ದೆ, ತೋಟಗಳಿಗೂ ನೀರು ನುಗ್ಗಿದ್ದು, ಹಲವೆಡೆ ಶುಂಠಿ ಗದ್ದೆಗಳಲ್ಲಿ ನೀರು ನುಗ್ಗಿದ ಪರಿಣಾಮ ಬಿತ್ತನೆ ಮಾಡಿದ್ದ ಶುಂಠಿ, ಮೆಕ್ಕೆಜೋಳ ಕೊಚ್ಚಿ ಹೋಗಿದೆ.
ಕರಾವಳಿಯ ಕೆಲವೆಡೆಯೂ ಮಳೆಯಾಗಿದ್ದು, ಕೆದೂರಿನಲ್ಲಿ ಸಿಡಿಲು ಬಡಿದು ಕೆಲ ಮನೆಗಳಿಗೆ ಹಾನಿಯಾಗಿದೆ. ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆ ಯಂತೆ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಲಾಶಯಗಳ ಒಳಹರಿವು ಹೆಚ್ಚಳ
ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಕಣಿವೆಯ ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ.
ಕೆಆರ್‌ಎಸ್‌ನ ನೀರಿನ ಮಟ್ಟ (124.80 ಅಡಿ ಗರಿಷ್ಠ) 75.55 ಅಡಿಗಳಿಗೆ ಏರಿದೆ. ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ(2284.00 ಅಡಿ ಗರಿಷ್ಠ) ನೀರಿನ ಮಟ್ಟ 2258.40 ಅಡಿಗೆ ಏರಿದೆ. ಜಲಾಶಯ ಭರ್ತಿಯಾಗಲು 25.60 ಅಡಿ ಬಾಕಿ ಇದೆ.
ಹಾಸನ ಜಿಲ್ಲೆಯ ಹೇಮಾವತಿಯಲ್ಲಿ (2922.00 ಅಡಿ ಗರಿಷ್ಠ) 2867.50 ಅಡಿ ನೀರು ಸಂಗ್ರಹವಿದ್ದು, ಭರ್ತಿಯಾಗಲು 54.50 ಅಡಿ ಬಾಕಿ ಇದೆ. ಕೊಡಗಿನ ಹಾರಂಗಿಯಲ್ಲಿ (2859.00 ಅಡಿ ಗರಿಷ್ಠ) 2784.23 ಅಡಿ ನೀರು ಸಂಗ್ರಹವಿದ್ದು,ಭರ್ತಿಯಾಗಲು 74.77 ಅಡಿ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.