ರಾಜಧಾನಿಯಲ್ಲಿ ರಾಮ ಸ್ಮರಣೆ
Team Udayavani, Apr 6, 2017, 12:17 PM IST
ಬೆಂಗಳೂರು: ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮ ದಿನವಾದ ರಾಮನವಮಿಯನ್ನು ರಾಜಧಾನಿಯಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ರಾಮನವಮಿ ಪ್ರಯುಕ್ತ ನಗರದ ಪ್ರಮುಖ ದೇವಸ್ಥಾನಗಳಲ್ಲಿ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ, ಪೂಜೆ ಏರ್ಪಡಿಸಲಾಗಿತ್ತು.
ರಾಮನವಮಿ ವಿಶೇಷವಾದ ಪಾನಕ, ಮಜ್ಜಿಗೆ, ಕೊಸುಂಬರಿ ಹಂಚಿಕೆ ಎಲ್ಲೆಡೆ ಸಾಮಾನ್ಯವಾಗಿತ್ತು. ದೇವಾಲಯಗಳಲ್ಲಷ್ಟೇ ಅಲ್ಲದೆ ನಗರದ ಬಹುತೇಕ ಬಡಾವಣೆಗಳಲ್ಲಿ ಸಂಘ-ಸಂಸ್ಥೆಗಳಿಂದ ಸಾರ್ವಜನಿಕರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತು. ಜತೆಗೆ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲೂ ರಾಮನವಮಿ ಆಚರಿಸಲಾಯಿತು.
ಚಾಮರಾಜಪೇಟೆಯ ಕೋಟೆ ವೆಂಕಟರಮಣ ಸ್ವಾಮಿ ದೇವಸ್ಥಾನ, ವಿಜಯನಗರ, ರಾಜಾಜಿನಗರ, ಜೆ.ಪಿ.ನಗರ, ಜಯನಗರ, ಶಂಕರಮಠ, ಎನ್.ಆರ್. ಕಾಲೋನಿ, ವಿ.ವಿ.ಪುರದಲ್ಲಿನ ರಾಮಮಂದಿರ ಸೇರಿದಂತೆ ನಗರದ ವಿವಿಧ ದೇವಸ್ಥಾನಗಳಲ್ಲಿ ರಾಮನವಮಿ ಪ್ರಯುಕ್ತ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಲಕ್ಷಾಂತರ ಮಂದಿ ರಾಮ ಭಕ್ತರು ಪಾಲ್ಗೊಂಡಿದ್ದರು.
ಹನುಮಂತನಗರದ ಗುಡ್ಡದ ಶ್ರೀ ರಾಮಾಂಜನೇಯ ಸ್ವಾಮಿ ದೇವಾಲಯದ ಶ್ರೀರಾಮ ಸೇವಾ ಮಂಡಳಿ ವತಿಯಿಂದ ರಾಮನವಮಿ ಪ್ರಯುಕ್ತ ಹಮ್ಮಿಕೊಂಡಿದ್ದ ಮೂರು ದಿನಗಳ ರಾಮೋತ್ಸವದ ಅಂಗವಾಗಿ ಪೂಜಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಸಾರ ತಂಡದಿಂದ “ಶ್ರೀಕೃಷ್ಣ ಸಂಧಾನ’ ಹಾಸ್ಯ ನಾಟಕ ಹಾಗೂ ಭಾವಗೀತೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿಜಯನಗರದ ಮಾರುತಿ ಭಕ್ತ ಮಂಡಳಿ ವತಿಯಿಂದ ರಾಮನವಮಿ ಅಂಗವಾಗಿ ವಿಶೇಷ ಕಾರ್ಯಕ್ರಮಗಳು ನಡೆದವು. ರಾಮನವಮಿ ಅಂಗವಾಗಿ ನಗರದ ಪ್ರಮುಖ ದೇವಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಾಮ, ಲಕ್ಷ್ಮಣ, ಸೀತೆ ಹಾಗೂ ಆಂಜನೇಯ ವೇಷಧಾರಿಗಳು ಗಮನ ಸೆಳೆದರು.
ರಾಷ್ಟ್ರೀಯ ಸಂಗೀತ ಉತ್ಸವ
ಚಾಮರಾಜಪೇಟೆಯ ಶ್ರೀರಾಮ ಸೇವಾ ಮಂಡಳಿ ಪ್ರತಿ ವರ್ಷ ರಾಮನವಮಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಿದ್ದು, ಈ ಬಾರಿ ಮಂಡಳಿಯ 79ನೇ ರಾಮನವಮಿ ಆಚರಣೆ ಪ್ರಯುಕ್ತ ರಾಷ್ಟ್ರೀಯ ಸಂಗೀತ ಉತ್ಸವ ಆಯೋಜಿಸಲಾಗಿದೆ. ಕೋಟೆ ಹೈಸ್ಕೂಲ್ ಮೈದಾನದಲ್ಲಿ ಈ ಉತ್ಸವಕ್ಕೆ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಚಾಲನೆ ನೀಡಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ. ದತ್ತ, ಎಡಿಜಿಪಿ ಭಾಸ್ಕರ್‌ರಾವ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಪಾಲ್ಗೊಂಡಿದ್ದರು.
ಮಹದೇವಪುರದಲ್ಲಿ ರಾಮ ರ್ಯಾಲಿ
ರಾಮನವಮಿ ಪ್ರಯುಕ್ತ ಹೂಡಿಯಲ್ಲಿ ಗ್ರಾಮಸ್ಥರು ಮತ್ತು ಜನ್ ಸಹಯೋಗ್ ಸಂಘಟನೆ ಸದಸ್ಯರು ರಾಮನ ವಿಗ್ರಹವನ್ನು ಮೆರೆವಣಿಗೆ ಮಾಡಿದರು. ಅಲ್ಲದೆ, ಬೈಕ್ ರ್ಯಾಲಿಯನ್ನೂ ನಡೆಸಿದರು. ಮೆರವಣಿಗೆ ಹೂಡಿ, ಹೋಪ್ ಫಾರ್ಮ್, ವೈಟ್‌ಫೀಲ್ಡ್, ವರ್ತೂರು ಕೋಡಿ, ಮಾರತ್ತಹಳ್ಳಿ, ದೊಡ್ಡನಕುಂದಿ, ಟಿನ್‌ಪಾಕ್ಟರಿ, ಕೆಆರ್‌ಪುರ ಸೇರಿದಂತೆ ಪ್ರಮುಖ ಕಡೆ ತೆರಳಿತು. ಕೆಆರ್‌ಪುರ ಮತ್ತು ಮಹದೇವಪುರಗಳಲ್ಲೂ ಹಬ್ಬದ ಸಡಗರ ಮನೆ ಮಾಡಿತ್ತು. ರಸ್ತೆ ಬದಿಯಲ್ಲಿ ಅರವಟಿಕೆಗಳನ್ನು ತೆರದು ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ ಮತ್ತು ಕೋಸುಂಬರಿ ವಿತರಿಸಲಾಯಿತು. ರಾಮ ಮತ್ತು ಹನುಮನ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.