ಕಾವೇರಿ ವಿಷಯದಲ್ಲಿ ಕೇಂದ್ರದಿಂದ ಅನ್ಯಾಯ
Team Udayavani, Jun 29, 2018, 6:25 AM IST
ಬೆಂಗಳೂರು: ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ
ಎಂದು ಮಾಜಿ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಹೇಳಿರಲಿಲ್ಲ. ಅಂತಾರಾಷ್ಟ್ರೀಯ ಜಲ ವಿವಾದ ಕಾಯ್ದೆ ಸೆಕ್ಷನ್ 6ಎ ಪ್ರಕಾರ ಒಂದು ಸಮಿತಿ ರಚಿಸಬೇಕೆಂದು ಹೇಳಿತ್ತು. ರಾಜ್ಯದ ನಿಲುವನ್ನು ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.
ಆಮೇಲೆ ರಾಜ್ಯದ ನಾಯಕರು ಕೇಂದ್ರದ ಮೇಲೆ ಒತ್ತಡ ಹೇರಲು ವಿಫಲರಾಗಿದ್ದಾರೆ ಎನಿಸುತ್ತಿದೆ. ಹೀಗಾಗಿ, ಕೇಂದ್ರ
ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ.
ಜಲಾಶಯಗಳಲ್ಲಿ ನೀರಿನ ಕೊರತೆ ಇದ್ದಾಗ ಮಾತ್ರ ಸಮಸ್ಯೆ ಎದುರಾಗುತ್ತದೆ. ಇದಕ್ಕೆ ನಿರ್ವಹಣಾ ಪ್ರಾಧಿಕಾರಕ್ಕಿಂತ
ಒಂದು ಸಮಿತಿ ರಚಿಸಿದ್ದರೆ ಸಾಕಾಗಿತ್ತು. ಈಗ ರಾಜ್ಯ ಸರ್ಕಾರದ ಕೈಯಲ್ಲಿ ಏನೂ ಇಲ್ಲ. ಸರ್ಕಾರ ಸರ್ವಪಕ್ಷ ಸಭೆ
ಕರೆದಿದ್ದು, ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.