ಹೆದ್ದಾರಿಗಳ ಡಿನೋಟಿಫೈ ವಿಚಾರ ಪರಿಶೀಲನೆಯಲ್ಲಿ
Team Udayavani, Jul 28, 2017, 6:00 AM IST
ಬೆಂಗಳೂರು: ನಗರ ಪ್ರದೇಶದ ಮಧ್ಯೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಡಿನೋಟಿಫೈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾವನೆ ಕೇಂದ್ರ ಕಾನೂನು ಸಚಿವಾಲಯದ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಸಂಬಂಧದ ಪ್ರಕರಣದ ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, “ನಗರ ವ್ಯಾಪ್ತಿಯಲ್ಲಿರುವ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವ ಸಂಬಂಧ ರಾಜ್ಯಸರ್ಕಾರ ಸಲ್ಲಿಸಿರುವ ಪ್ರಸ್ತಾವನೆ ಕೇಂದ್ರ ಕಾನೂನು ಸಚಿವಾಲಯ ಪರಿಶೀಲಿಸುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದಿಂದ ಪೂರ್ಣ ವಿವರಣೆ ದೊರೆತ ನಂತರ ಕೇಂದ್ರದ ನಿಲುವು ತಿಳಿಸಲಾಗುತ್ತದೆ,’ ಎಂಬ ಅಂಶಗಳನ್ನೊಳಗೊಂಡ ಜ್ಞಾಪನಾಪತ್ರವನ್ನು ನ್ಯಾ. ವಿನೀತ್ ಕೊಠಾರಿ ಅವರ ನ್ಯಾಯಪೀಠಕ್ಕೆ ಸಲ್ಲಿಸಿದರು.
ಈ ಕುರಿತಂತೆ ವಾದ – ಪ್ರತಿವಾದ ಆಲಿಸಿದ ನ್ಯಾಯ ಪೀಠ ಆಗಸ್ಟ್ 3ಕ್ಕೆ ವಿಚಾರಣೆ ಮುಂದೂಡಿತು.ಕಂದಾಯ ಇಲಾಖೆ ದಾಖಲೆಗಳಲ್ಲಿ ಹೆದ್ದಾರಿ ವ್ಯಾಪ್ತಿಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ನಗರದ ಮಹಾತ್ಮಗಾಂಧಿ ರಸ್ತೆ, ರೆಸಿಡೆನ್ಸಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳ ಬಾರ್ ಮತ್ತು ರೆಸ್ಟೋರೆಂಟ್‌ಗಳ ಪರವಾನಗಿ ನವೀಕರಣ ಮಾಡಲು ನಿರಾಕರಿಸಿರುವ ರಾಜ್ಯ ಅಬಕಾರಿ ಇಲಾಖೆಯ ಕ್ರಮ ಪ್ರಶ್ನಿಸಿ, ಬ್ರಿಗೇಡ್ ರಸ್ತೆಯ ಫ್ಯೂಷನ್ ಲಾಂಜ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ 20ಕ್ಕೂ ಹೆಚ್ಚು ಬಾರ್ ಮಾಲೀಕರು ಸಲ್ಲಿಸಿರುವ ಅರ್ಜಿ ವಿಚಾರಣೆ ಗುರುವಾರ ನಡೆಯಿತು.
ರಾಜ್ಯ ಸರ್ಕಾರದ ವಾದವೇನು?
ನಗರ ಪ್ರದೇಶಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಡಿನೋಟಿಫೈ ಮಾಡಿದೆ. ಸ್ಥಳೀಯ ಪ್ರಾಧಿಕಾರಿಗಳು ನಿರ್ವಹಣೆ ಮಾಡುತ್ತಿರುವ ರಸ್ತೆಗಳನ್ನು ರಾಜ್ಯ ಸರ್ಕಾರ ಡಿನೋಟಿಫೈ ಮಾಡಿದೆ. ಕಂದಾಯ ಇಲಾಖೆಯ ದಾಖಲೆಗಳ ಪ್ರಕಾರ ಇನ್ನೂ ಹೆದ್ದಾರಿ ಎಂದೇ ಗುರುತಿಸಲ್ಪಟ್ಟಿರುವ ರಾಷ್ಟ್ರೀಯ ಹೆದ್ದಾರಿ-4 ಹಾಗೂ ರಾಷ್ಟ್ರೀಯ ಹೆದ್ದಾರಿ- 77 ಕೇಂದ್ರ ಸರ್ಕಾರದ ಡಿನೋಟಿಫೈ ಅಧಿಸೂಚನೆಯಲ್ಲಿ ಉಲ್ಲೇಖೀಸಲಾಗಿಲ್ಲ.
ಈ ರಸ್ತೆಗಳನ್ನು ಡಿನೋಟಿಫೈ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಾಗಿ ಕೇಂದ್ರ ಸರ್ಕಾರವೇ ಡಿನೋಟಿಫೈ ಮಾಡಬೇಕು ಎಂಬುದು ರಾಜ್ಯಸರ್ಕಾರದ ವಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.