ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ


Team Udayavani, Mar 14, 2022, 11:48 AM IST

ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ

ಬೆಂಗಳೂರು: ಗ್ರಾಮೀಣ ಪ್ರದೇಶದ ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮತ್ತು ರೋಬೋಟಿಕ್ ತಂತ್ರಜ್ಞಾನ ಪಾರ್ಕ್ ಅನ್ನು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಉದ್ಘಾಟಿಸಿದರು.

ಇದಕ್ಕೆ ಪೂರಕವಾಗಿ ಏರ್ಪಡಿಸಲಾಗಿದ್ದ ಕೃತಕ ಬುದ್ಧಿಮತ್ತೆ ಆಧಾರಿತ ಅರ್ಥವ್ಯವಸ್ಥೆಯು 2030ರ ಹೊತ್ತಿಗೆ 15.7 ಟ್ರಿಲಿಯನ್ ಡಾಲರ್ ಸಾಮರ್ಥ್ಯವುಳ್ಳದ್ದಾಗಿದ್ದು, ದೇಶದ ಈಗಿನ ಜಿಡಿಪಿ ಮೊತ್ತಕ್ಕಿಂತ 6 ಪಟ್ಟು ಹೆಚ್ಚು ಶಕ್ತಿಯನ್ನು ತರಲಿದೆ ಎಂದರು. ಈ ಕೇಂದ್ರದ ಸ್ಥಾಪನೆಗೆ `ಎಐ ಫೌಂಡ್ರಿ’ಕೂಡ ನೆರವು ನೀಡಿದೆ.

ಆರ್ಟ್ ಪಾರ್ಕಿನಲ್ಲಿ ನಡೆಯಲಿರುವ ಸಂಶೋಧನೆಗಳು ಆರೋಗ್ಯಸೇವೆ, ಶಿಕ್ಷಣ, ಸಂಪರ್ಕ, ಮೂಲಸೌಲಭ್ಯ, ಕೃಷಿ, ಚಿಲ್ಲರೆ ವ್ಯಾಪಾರ ಮತ್ತು ಸೈಬರ್ ಸೆಕ್ಯುರಿಟಿ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಅತ್ಯಾಧುನಿಕ ಕೌಶಲ್ಯಗಳನ್ನು ಪೂರೈಸಲಿದೆ. ಈ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರವು 170 ಕೋಟಿ ರೂ. ಕೊಟ್ಟಿದ್ದು, ರಾಜ್ಯ ಸರಕಾರವು 60 ಕೋಟಿ ರೂ.ಗಳನ್ನು ಬೀಜಧನವಾಗಿ (ಸೀಡ್ ಕ್ಯಾಪಿಟಲ್) ನೀಡಿದೆ ಎಂದರು.

ಮಾಹಿತಿ ತಂತ್ರಜ್ಞಾನ ಮತ್ತು ಅದಕ್ಕೆ ಪೂರಕವಾಗಿ ಮುನ್ನೆಲೆಗೆ ಬಂದ ಬಿಪಿಒಗಳು ತಮ್ಮ ಬೆಳವಣಿಗೆಯ ತುತ್ತತುದಿಯನ್ನು ಈಗಾಗಲೇ ತಲುಪಿವೆ. ಮುಂಬರುವ ದಿನಗಳೆಲ್ಲ ಕೃತಕ ಬುದ್ಧಿಮತ್ತೆಯನ್ನು ಆಧರಿಸಿರಲಿವೆ. ಇದು ಶಿಕ್ಷಣ ಮತ್ತು ಕೌಶಲ್ಯಗಳ ನಡುವೆ ಇರುವ ಅಂತರವನ್ನು ತೊಡೆದು ಹಾಕಲಿದೆ. ಹೀಗಾಗಿಯೇ, ಆರ್ಟ್ ಪಾರ್ಕ್ ಸ್ಥಾಪನೆಗೆ ರಾಜ್ಯವು ಮುಂದಾಗಿದೆ ಎಂದು ಅವರು ಹೇಳಿದರು.

ಕಳೆದ 20 ವರ್ಷಗಳಲ್ಲಿ ತಂತ್ರಜ್ಞಾನವು ಬದುಕನ್ನು ಅಗಾಧವಾಗಿ ಪ್ರಭಾವಿಸಿದೆ. ಡಿಜಿಟಲೀಕರಣವು ಅಗಾಧ ಅವಕಾಶಗಳನ್ನು ಸೃಷ್ಟಿಸುತ್ತಿದ್ದು, ಆರೋಗ್ಯ ಮತ್ತು ಆರ್ಥಿಕ ಸೇವೆಗಳ ಪೂರೈಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಕರ್ನಾಟಕದಲ್ಲಿರುವ ಸಂಶೋಧನೆ ಮತ್ತು ನಾವೀನ್ಯತೆಯ ಕಾರ್ಯ ಪರಿಸರವು ಎಐ ಮತ್ತು ರೋಬೋಟಿಕ್ಸ್ ಆಧಾರಿತ ಉದ್ದಿಮೆಗಳ ಬೆಳವಣಿಗೆಗೆ ಹೇಳಿ ಮಾಡಿಸಿದಂತಿದ್ದು, ಡೇಟಾ ವಿಜ್ಞಾನವು ಉಜ್ವಲ ಅವಕಾಶಗಳ ಚಿನ್ನದ ಗಣಿಯಂತಿದೆ ಎಂದು ಸಚಿವರು ಬಣ್ಣಿಸಿದರು.

ಸಮಾವೇಶವನ್ನು ಉದ್ದೇಶಿಸಿ ವರ್ಚುಯಲ್ ಆಗಿ ಮಾತನಾಡಿದ ನೀತಿ ಆಯೋಗದ ಉಪಾಧ್ಯಕ್ಷ ಡಾ.ರಾಜೀವ್ ಕುಮಾರ್, `ಗ್ರಾಮೀಣ ಪ್ರದೇಶಗಳಲ್ಲಿ ಹುದುಗಿರುವ ಆರ್ಥಿಕ ಶಕ್ತಿಯನ್ನು ಗರಿಷ್ಠ ಮಟ್ಟದಲ್ಲಿ ಉಪಯೋಗಿಸಿಕೊಂಡರೆ ಭಾರತವು ಜಗತ್ತಿನಲ್ಲಿ ಅಗ್ರಸ್ಥಾನಕ್ಕೆ ಏರಬಹುದು. ಈ ನಿಟ್ಟಿನಲ್ಲಿ ಅಟಲ್ ಇನ್ನೋವೇಶನ್ ಮಿಶನ್ ಮತ್ತು ನವೋದ್ಯಮಗಳೊಂದಿಗೆ ಜತೆಗೂಡಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ’ ಎಂದರು.

ಐಐಎಸ್ ಸಭಾಂಗಣದಲ್ಲಿ ಇದೇ ಸಂದರ್ಭದಲ್ಲಿ ಐಎ ಮತ್ತು ರೋಬೋಟಿಕ್ಸ್ ಕುರಿತ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ಅಲ್ಲಿ ವಿವಿಧ ರೀತಿಯ ರೋಬೊಟ್, ಡ್ರೋಣ್ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಸ್ತುಗಳನ್ನು ಸಾಗಿಸಬಲ್ಲ‌ ವಾಕಿಂಗ್ ಡ್ರೋಣ್ ಗಳ ಪ್ರದರ್ಶನ ಕೂಡ ಇದೆ.

ಕಾರ್ಯಕ್ರಮದಲ್ಲಿ ಆರ್ಟ್ ಪಾರ್ಕ್ ಸಿಇಒ ಉಮಾಕಾಂತ್ ಸೋನಿ, ನಿರ್ದೇಶಕ ಪ್ರೊ.ರಂಗರಾಜನ್, ಸಿಐಒ ಶುಭಶಿಶ್ ಬ್ಯಾನರ್ಜಿ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಎಸ್. ಚಂದ್ರಶೇಖರ್, ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಉದ್ಯಮಿ ವಿವೇಕ್ ರಾಘವನ್, ಮೋಹನ್ ದಾಸ್ ಪೈ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.