ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ
Team Udayavani, Oct 23, 2021, 10:00 PM IST
ಬೆಂಗಳೂರು: ಹಣಕಾಸು ಮತ್ತು ಅನೈತಿಕ ಸಂಬಂಧ ವಿಚಾರಕ್ಕೆ ಪರಿಚಯಸ್ಥರೇ ಟೆಂಪೋ ಟಾವೆಲ್ಲರ್ ಚಾಲಕನನ್ನು ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಆರ್.ಆರ್.ನಗರ ನಿವಾಸಿ ಚಂದ್ರಶೇಖರ್ (42) ಕೊಲೆಯಾದ ಚಾಲಕ. ಈ ಸಂಬಂಧ ಹನುಮಂತನಗರ ನಿವಾಸಿ ಭಾಸ್ಕರ್ ಹಾಗೂ ಆತನ ಸಹಚರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಮಂಡ್ಯ ಮೂಲದ ಚಂದ್ರಶೇಖರ್ ಈ ಮೊದಲು ಮಾರುಕಟ್ಟೆಯಲ್ಲಿ ಹೂ ವ್ಯಾಪಾರ ಮಾಡಿಕೊಂಡಿದ್ದು, ಶ್ರೀನಗರದಲ್ಲಿ ವಾಸವಾಗಿದ್ದ. ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ವ್ಯಾಪಾರದಲ್ಲಿ ನಷ್ಟ ಹೊಂದಿದ್ದರಿಂದ ಸ್ವಂತ ಊರಿಗೆ ತೆರಳಿದ್ದ. ಲಾಕ್‌ಡೌನ್ ತೆರವು ಬಳಿಕ ಬೆಂಗಳೂರಿಗೆ ಬಂದು, ಆರ್.ಆರ್.ನಗರದಲ್ಲಿ ಮನೆ ಮಾಡಿಕೊಂಡಿದ್ದ. ಜತೆಗೆ ಸಹೋದರನ ಟೆಂಪೋ ಟ್ರಾವೆಲ್ಲರ್‌ನ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಪರಿಚಯಸ್ಥ ಭಾಸ್ಕರ್ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದಿದ್ದ ಭಾಸ್ಕರ್, ಚಂದ್ರಶೇಖರ್‌ಗೆ ಬಹಳಷ್ಟು ಬಾರಿ ಎಚ್ಚರಿಕೆ ನೀಡಿದ್ದ. ಒಂದೆರಡು ಬಾರಿ ಹಲ್ಲೆ ಕೂಡ ನಡೆಸಿದ್ದ. ಈ ಸಂಬಂಧ ಕೆಲ ದಿನಗಳ ಹಿಂದೆ ಹನುಮಂತನಗರ ಠಾಣೆಯಲ್ಲಿ ಚಂದ್ರಶೇಖರ್ ಪ್ರಾಣ ರಕ್ಷಣೆ ಕೋರಿ ದೂರು ನೀಡಿದ್ದು, ತನ್ನ ಪ್ರಾಣಕ್ಕೆ ಹಾನಿಯಾದರೆ ಅದಕ್ಕೆ ಭಾಸ್ಕರ್ ಮತ್ತು ಆತನ ಸ್ನೇಹಿತರೇ ಕಾರಣ ಎಂದು ದೂರಿನಲ್ಲಿ ಉಲ್ಲೇಖೀಸಿದ್ದ. ನಂತರ ಆರೋಪಿ ಠಾಣೆಗೆ ಬಂದು ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದ ಎಂಬುದು ಗೊತ್ತಾಗಿದೆ ಎಂದು ಪಶ್ಚಿಮ ವಿಭಾಗ ಪೊಲೀಸರು ಹೇಳಿದರು.
ಮತ್ತೂಂದೆಡೆ ಭಾಸ್ಕರ್ ಜತೆಯೂ ಚಂದ್ರಶೇಖರ್ ಹಣಕಾಸಿನ ವ್ಯವಹಾರ ನಡೆಸಿದ್ದ. ಹೀಗಾಗಿ ಹಣ ಕೊಡುವಂತೆ ಪದೇ ಪದೇ ಕರೆ ಮಾಡಿ ಪೀಡಿಸುತ್ತಿದ್ದ. ಶುಕ್ರವಾರ ರಾತ್ರಿ ಭಾಸ್ಕರ್ ಮತ್ತು ತಂಡ ಮದ್ಯ ಸೇವಿಸುವ ನೆಪದಲ್ಲಿ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಮಹಾವೀರ್ ಜೈನ್ ಆಸ್ಪತ್ರೆಯ ಹಿಂಭಾಗದ ನೈಸ್ ರಸ್ತೆಗೆ ಚಂದ್ರಶೇಖರ್‌ನನ್ನು ಕರೆಸಿಕೊಂಡಿದ್ದಾರೆ. ಬಳಿಕ ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ. ಈ ವೇಳೆ ಆರೋಪಿಗಳು ಹಾಗೂ ಚಂದ್ರಶೇಖರ್ ನಡುವೆ ಗಲಾಟೆಯಾಗಿದ್ದು, ಅದು ವಿಕೋಪಕ್ಕೆ ಹೋಗಿದೆ. ಈ ವೇಳೆ ಆರೋಪಿಗಳು, ಮೊದಲಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಶನಿವಾರ ಬೆಳಗ್ಗೆ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.ಚಂದ್ರಶೇಖರ್ ಸಹೋದರ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.