ಯುಟ್ಯೂಬ್‌ ನೋಡಿ ಕಳವು ಕಲಿತ!

ಯುಟ್ಯೂಬ್‌ ನೋಡಿ ಕಳವು ಕಲಿತ! ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಯಿಂದ 4.76 ಲಕ್ಷ ರೂ. ಮೌಲ್ಯದ 92 ಗ್ರಾಂ ಚಿನ್ನಾಭರಣ ವಶ

Team Udayavani, Mar 15, 2021, 10:50 AM IST

ಯುಟ್ಯೂಬ್‌ ನೋಡಿ ಕಳವು ಕಲಿತ!

ಸಾಂದರ್ಭಿಕ ಚಿತ್ರ

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ ಹೊಂದಿದ್ದ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಯುಟ್ಯೂಬ್‌ ನೋಡಿ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಿ ಇದೀಗ ಮಲ್ಲೇ ಶ್ವರ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮಾಗಡಿ ರಸ್ತೆಯ ನಿವಾಸಿ ಸಂತೋಷ್‌ ಕುಮಾರ್‌ (23) ಬಂಧಿತ. ಆತ ನಿಂದ 4.76 ಲಕ್ಷ ರೂ. ಮೌಲ್ಯದ 92 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿ ಬಂಧನದಿಂದ ನಗರದ 2 ಚಿನ್ನದ ಮಳಿಗೆಗಳಲ್ಲಿ ನಡೆದಿದ್ದ ಚಿನ್ನಾಭರಣ ಪ್ರಕರಣಗಳು ಪತ್ತೆಯಾಗಿವೆ.

ಆರೋಪಿಯು ಫೈನಾನ್ಸ್‌ ಕಂಪನಿಯಲ್ಲಿ ಫೈನಾನ್ಸಿಯಲ್‌ ಅನಾಲಿಸ್ಟ್‌ ಆಗಿ ಕೆಲ ಸ ಮಾಡು ತ್ತಿದ್ದ. ಈ ವೇಳೆ ಬೇಗನೇ ಶ್ರೀಮಂತನಾಗಲು ಲಕ್ಷಾಂತರ ರೂ. ಅನ್ನು ಷೇರು ಮಾರು ಕ ಟ್ಟೆಯಲ್ಲಿ ಹೂಡಿಕೆ ಮಾಡಿದ್ದಾನೆ.ಆದರೆ, ಷೇರಿನಲ್ಲಿ ನಷ್ಟ ಉಂಟಾಗಿತ್ತು. ಇತ್ತ ಮನೆಯಜವಾಬ್ದಾರಿಯನ್ನು ತಾನೇ ನಿಭಾಯಿಸಬೇಕಿರುವುದರಿಂದ ಕಂಪನಿಯಲ್ಲಿ ಸಿಗುತ್ತಿದ್ದ ವೇತನ ಖರ್ಚಿಗೆ ಸಾಲುತ್ತಿರಲಿಲ್ಲ.

ಆಗ ಆರೋಪಿ ಸಂತೋಷ್‌ ಕಳ್ಳ ತನ ಮಾಡಲು ಸಿದ್ಧತೆ ನಡೆ ಸಿದ್ದ. ಅದ ಕ್ಕಾಗಿ ಯುಟ್ಯೂಬ್‌ನಲ್ಲಿ ಕಳ್ಳ ತನ ಮಾಡು ವು ದ ನ್ನು ಪರಿಶೀಲಿಸಿದ್ದ. ಚಿನ್ನಾಭರಣ ಗಳ ಮಳಿಗೆಗಳಲ್ಲಿ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಚಿನ್ನ ಕದಿಯುವುದನ್ನು ಯುಟ್ಯೂಬ್‌ನಲ್ಲಿ ವೀಕ್ಷಿಸಿದ್ದ. ಅದೇ ಮಾದರಿಯಲ್ಲಿ ನಗರದ ಚಿನ್ನಾಭರಣಮಳಿಗೆಗಳಲ್ಲಿ ಕದಿಯಲು ಸಂಚು ರೂಪಿಸಿದ್ದ ಎಂದು ಪೊಲೀಸರು ಹೇಳಿದರು.

ಬ್ರೇಸ್‌ಲೆಟ್‌ ಲಪಟಾಯಿಸಿದ: ಫೆ.21ರಂದು ಸಂಜೆ 7 ಗಂಟೆಗೆ ಮಲ್ಲೇಶ್ವರದ ಪ್ರತಿ ಷ್ಠಿತ ಚಿನ್ನಾ ಭ ರಣ ಮಳಿಗೆಗೆ ಗ್ರಾಹ ಕರ ಸೋಗಿ ನಲ್ಲಿ ಬಂದಿದ್ದ ಸಂತೋಷ್‌, ಅಲ್ಲಿನ ಸಿಬ್ಬಂದಿ ಸೈಯ್ಯದ್‌ ಸೈಫ್‌ವುದ್ದೀನ್‌ ಅವರಿಗೆಬ್ರೇಸ್‌ಲೆಟ್‌ ತೋರಿಸುವಂತೆ ಸೂಚಿಸಿದ್ದ. ಅದರಂತೆ ಸಿಬ್ಬಂದಿ ಬ್ರೇಸ್‌ಲೇಟ್‌ ತೋರಿಸಿ, ಪಕ್ಕದ ಕೌಂಟರ್‌ನಲ್ಲಿದ್ದ ಬೇರೆ ಗ್ರಾಹಕರ ಬಳಿ ಹೋಗಿದ್ದರು. ಕೆಲಸಮಯದ ಬಳಿಕ ಸಿಬ್ಬಂದಿ ಇತ್ತ ಬಂದಾಗ ಸಂತೋಷ್‌ 42.99 ಗ್ರಾಂ ಬ್ರಾಸ್‌ಲೇಟ್‌ನೊಂದಿಗೆಪರಾರಿಯಾಗಿದ್ದ. ಸೈಯ್ಯದ್‌ ಈ ಕುರಿತು ಮಲ್ಲೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣದಾಖಲಿಸಿಕೊಂಡ ಮಲ್ಲೇಶ್ವರ ಪೊಲೀಸರು ಚಿನ್ನಾಭರಣ ಮಳಿಗೆಯಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಆರೋಪಿಯ ಸುಳಿವು ಪತ್ತೆಯಾಗಿತ್ತು. ಆದರೆ, ಆರೋಪಿ ಸಂತೋಷ್‌ ಮಳಿಗೆಯೊಳಗೆ ಬಂದಾಗ ಮಂಕಿಕ್ಯಾಪ್‌, ಕನ್ನಡಕ, ಮಾಸ್ಕ್ ಧರಿಸಿದ್ದರಿಂದ ಮುಖ ಚಹರೆ ಕಂಡು ಬಂದಿರಲಿಲ್ಲ ಎಂದು ಪೊಲೀಸರು ಹೇಳಿದರು.

ಆರೋಪಿ ಸಿಕ್ಕಿಬಿದ್ದಿದ್ದು  ಹೇಗೆ ? :

ಮಾ.11ರಂದು ಮಾರ್ಗೋಸಾ ರಸ್ತೆಯಲ್ಲಿರುವ ಪ್ರತಿ ಷ್ಠಿ ತ ಜುವೆಲ್ಲರ್ ಬಳಿ ಆರೋಪಿ ಸಂತೋಷ್‌ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ. ಅನುಮಾನದ ಮೇರೆಗೆ ಗಸ್ತಿನಲ್ಲಿದ್ದ ಮಲ್ಲೇಶ್ವರ ಪೊಲೀಸರು ಈತನನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದಾಗ ಆರಂಭ ದಲ್ಲಿ ಯಾವುದೇ ಮಾಹಿತಿ ನೀಡಿ ರ ಲಿಲ್ಲ. ಬಳಿಕ ಚಿನ್ನಾ ಭ ರಣ ಮಳಿಗೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಕಳ್ಳ ಧರಿಸಿದ್ದ ಮಾದರಿಯ ಮಂಕಿ ಕ್ಯಾಪ್‌, ಕನ್ನಡಕ, ಮಾಸ್ಕ್ ನ್ನು ಈತನಿಗೆ ತೊಡಿಸಿದ ಪೊಲೀಸರು ಹೋಲಿಕೆ ಮಾಡಿ ನೋಡಿದಾಗಈತನನ್ನೇ ಹೋಲುತ್ತಿತ್ತು. ಬಳಿಕ ವಿಚಾ ರಣೆ ತೀವ್ರ ಗೊ ಳಿ ಸಿ ದಾಗ ತಪ್ಪೊ ಪ್ಪಿ ಕೊಂಡಿ ದ್ದಾ ನೆ. ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂಬ ಉದ್ದೇಶದಿಂದ ಚಿನ್ನಾಭರಣ ಮಳಿಗೆಯೊಳಗೆ ತೆರಳುವ ವೇಳೆ ಮಂಕಿಕ್ಯಾಪ್‌, ಮಾಸ್ಕ್ ಜತೆಗೆ ಮೇಲ್ಭಾಗದಲ್ಲಿ ಬೇರೆ ಬಟ್ಟೆಗಳನ್ನು ಧರಿಸುತ್ತಿದ್ದೆ. ಹೊರ ಬಂದ ಕೂಡಲೇ ಅವುಗಳನ್ನು ತೆಗೆಯುತ್ತಿದ್ದೆ. ಹೀಗಾಗಿ ತನ್ನ ಮೇಲೆ ಯಾರಿಗೂ ಅನುಮಾನ ಬರುತ್ತಿರಲಿಲ್ಲ. ಕದ್ದ ಚಿನ್ನಾಭರಣಮಾರಾಟ ಮಾಡಿ ಬಂದ ಹಣವನ್ನು ಮತ್ತೆ ಷೇರು ಪೇಟೆ ಯಲ್ಲಿ ಹೂಡಿಕೆ ಮಾಡು ತ್ತಿದ್ದೆ ಎಂದು ಆರೋಪಿ ವಿಚಾರಣೆಯಲ್ಲಿ ಒಪ್ಪಿ ಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.