ದೇಗುಲದಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ


Team Udayavani, Jan 7, 2023, 10:53 AM IST

tdy-7

ಬೆಂಗಳೂರು: ದೇವಾಲಯದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿರುವ ಆರೋಪದ ಮೇಲೆ ದೇವಾಲಯದ ಧರ್ಮದರ್ಶಿ ಮುನಿಕೃಷ್ಣಪ್ಪ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ಹಲ್ಲೆ ನಡೆಸಿ ರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿವೆ. ಡಿ.21ರಂದು ಅಮೃತಹಳ್ಳಿಯ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಹೇಮಾವತಿ ಎಂಬಾಕೆ ಬಂದಿದ್ದರು. ನನ್ನ ಮೈ ಮೇಲೆ ದೇವರು ಬರುತ್ತೆ, ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕೂರಬೇಕು ಎಂದು ಹಠಕ್ಕೆ ಬಿದ್ದಿದ್ದರು. ಈ ವೇಳೆ ಅರ್ಚಕರು ಈ ರೀತಿಯಾಗಿ ವರ್ತಿಸದಂತೆ ಮಹಿಳೆಗೆ ತಿಳಿ ಹೇಳಿದ್ದರು. ಆದರೂ, ಕೇಳದೆ ಹೇಮಾವತಿ ಗರ್ಭಗುಡಿಯ ಒಳಗೆ ಹೋಗಲು ಯತ್ನಿಸಿದ್ದರು. ಈ ವೇಳೆ ದೇವಾಲಯದ ಸಿಬ್ಬಂದಿ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಅವರಿಗೆ ಫೋನ್‌ ಮಾಡಿ ವಿಚಾರ ತಿಳಿಸಿದ್ದರು. ಸ್ಥಳಕ್ಕೆ ಬಂದ ಧರ್ಮದರ್ಶಿ ಮುನಿಕೃಷ್ಣ ಈ ಬಗ್ಗೆ ಪ್ರಶ್ನಿಸಿದಾಗ ಮಹಿಳೆ ಅವರಿಗೂ ನಿಂದಿಸಿ ದ್ದಾರೆ.  ಇದರಿಂದ ಕೋಪಗೊಂಡ ಮುನಿ ಕೃಷ್ಣ, ಮಹಿಳೆಯನ್ನು ಎಳೆದು ಹೊರಹಾಕಿ ದ್ದರು ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಬಳಿಕ ನಿಜ ಸಂಗತಿ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಆರೋಪ ಏನು?: ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದೆ. ಅಲ್ಲಿ ಮುನಿಕೃಷ್ಣಪ್ಪ ಎಂಬು ವರು ನನ್ನ ಜೊತೆ ಅಸಭ್ಯವಾಗಿ ವರ್ತಿಸಿ ದ್ದಾರೆ. ಸ್ನಾನ ಮಾಡದೇ, ಶುದ್ಧಿ ಇಲ್ಲದೇ ದೇವಸ್ಥಾನಕ್ಕೆ ಬರುತ್ತೀರಾ, ನಿನಗೆ ಇಲ್ಲಿ ದರ್ಶನ ಮಾಡಲು ಅವಕಾಶ ಕಲ್ಪಿಸುವು ದಿಲ್ಲ ಎಂದು ಹೇಳಿದ್ದರು. ನಂತರ ತಲೆ ಕೂದಲು ಹಿಡಿದು ಮನಸೋಇಚ್ಛೆ ಥಳಿಸಿದರು. ಅಲ್ಲೇ ಇದ್ದ ಕಬ್ಬಿಣದ ರಾಡ್‌ ತೆಗೆದುಕೊಂಡು ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಮಹಿಳೆಯು ಆರೋಪಿಸಿದ್ದಾರೆ.

ಸಿಸಿ ಕ್ಯಾಮೆರಾ ದೃಶ್ಯದಲ್ಲಿ ಏನಿದೆ?: ದೇವಸ್ಥಾನದಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಹಿಡಿದು ಥಳಿಸಿದ್ದಾರೆ. ಆ ವ್ಯಕ್ತಿಯು ಮಹಿಳೆಯನ್ನು ಧರಧರನೆ ಎಳೆದು ಗುಡಿಯೊಳಗಿ ನಿಂದ ಹೊರ ಹಾಕುತ್ತಿರುತ್ತಾನೆ. ಆತ ಕಬ್ಬಿಣದ ರಾಡ್‌ನಿಂದ ಹಲ್ಲೆಗೆ ಮುಂದಾದಾಗ ಅರ್ಚಕರು ಮಹಿಳೆಯ ಸಹಾಯಕ್ಕೆ ಬಂದಿದ್ದಾರೆ.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.