ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿ

Team Udayavani, Oct 31, 2022, 1:05 PM IST

tdy-3

ಯಲಹಂಕ: ನಗರದ ರಕ್ಕಸ ರಸ್ತೆ ಗುಂಡಿಗೆ ಮತ್ತೂಂದು ಜೀವ ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸುವ ಭರದಲ್ಲಿ ಕಾರು ಚಾಲಕನೊಬ್ಬ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹರ್ಷದ್‌ (23) ಮೃತ ಬೈಕ್‌ನ ಹಿಂಬದಿ ಸವಾರ. ಘಟನೆಯಲ್ಲಿ ಬೈಕ್‌ ಸವಾರ ರಾಹುಲ್‌ ಗಾಯಗೊಂಡಿದ್ದಾನೆ. ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ರಾಹುಲ್‌ ತನ್ನ ಬೈಕ್‌ನಲ್ಲಿ ಹರ್ಷದ್‌ನನ್ನು ಹಿಂಬದಿ ಕೂರಿಸಿಕೊಂಡು ಅಟ್ಟೂರು ಗ್ರಾಮದ ಕಡೆಯಿಂದ ಜಾಲಹಳ್ಳಿ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ. ಇದೇ ವೇಳೆ ಎದುರಿಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಗೆ ಉರುಳಿ ಬಿದ್ದ ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ.

ಕೂಡಲೇ ಸ್ಥಳೀಯರು ಇಬ್ಬರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಹರ್ಷದ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ. ರಾಹುಲ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.

ಯಲಹಂಕದ ರಾಯನ್‌ ಕಾನ್‌ಕಾರ್ಡ್‌ ಶಾಲೆ ರಸ್ತೆ ಗುಂಡಿಮಯವಾಗಿದ್ದು, ಕಳೆದ ತಡರಾತ್ರಿ 11 ಗಂಟೆ ಸುಮಾರಿಗೆ ಕಾರು ಚಾಲಕ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದಿದ್ದಾನೆ. ಈ ವೇಳೆ ಎದುರು ಸಿಕ್ಕ ಗುಂಡಿಯನ್ನು ತಪ್ಪಿಸುವ ಭರದಲ್ಲಿ ಎದುರು ಬರುತ್ತಿದ್ದ ರಾಹುಲ್‌ ಮತ್ತು ಹರ್ಷದ್‌ ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ದುರ್ಘ‌ಟನೆ ನಡೆದಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಮತ್ತೂಂದೆಡೆ ಘಟನೆಗೆ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಕಾರಣನಾದ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ದುರ್ಘ‌ಟನೆಗೆ ಬಿಬಿಎಂಪಿ ಮತ್ತು ಕಾರುಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಮತ್ತೂಂದೆಡೆ ಬೈಕ್‌ ಚಾಲಕ ಮದ್ಯ ಸೇವಿಸಿದ್ದ ಎಂದು ಹೇಳಲಾಗಿದೆ. ಹೀಗಾಗಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.