ಬಿಪಿಎಲ್ ಕಾರ್ಡ್‌ಗೆ ಆದಾಯ ದೃಢೀಕರಣ ಪತ್ರ ಸಾಕು: ಖಾದರ್
Team Udayavani, Feb 16, 2018, 6:35 AM IST
ಬೆಂಗಳೂರು:ಹೊಸದಾಗಿ ಬಿಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿರುವವರು ಆದಾಯ ದೃಢೀಕರಣ ಪತ್ರ ಸಲ್ಲಿಸಿದರೆ ಸಾಕು ಸ್ಥಳದಲ್ಲೇ ಪಡಿತರ ಚೀಟಿ ದೊರೆಯಲಿದೆ.
ಬಿಪಿಎಲ್ ಕಾರ್ಡ್‌ಗಾಗಿ ಹಲವಾರು ಪ್ರಮಾಣಪತ್ರ ಹೊಂದಿಸಲು ಸಾರ್ವಜನಿಕರಿಗೆ ಕಷ್ಟವಾಗುತ್ತಿರುದೆ ಎಂಬ ಹಿನ್ನೆಲೆಯಲ್ಲಿ ಹೊಸ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.
ಕುಟುಂಬದ ಆದಾಯ ದೃಢೀಕರಣ ಪತ್ರ ಆಹಾರ ನಿರೀಕ್ಷಕರಿಗೆ ಸಲ್ಲಿಸಿದರೆ ಸ್ಥಳದಲ್ಲೇ ಪಡಿತರ ಚೀಟಿ ವಿತರಿಸುವ ಯೋಜನೆಗೆ ಫೆ. 20 ರಂದು ಚಾಲನೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರ ಚೀಟಿ ವಿತರಣೆ ಪ್ರಕ್ರಿಯೆ ಸರಳ ಹಾಗೂ ತ್ವರಿತಗೊಳಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.
1.20ಲಕ್ಷ ರೂ.ಮಿತಿಯ ಆದಾಯ ದೃಢೀಕರಣ ಪತ್ರ ನೀಡಿದರೆ ಆಹಾರ ನಿರೀಕ್ಷಕರು ಸ್ಥಳದಲ್ಲೆ ಪಡಿತರ ಚೀಟಿ ನೀಡಲಿದ್ದಾರೆ. ಬೇರೆ ಯಾವುದೇ ದಾಖಲೆಯ ಅಗತ್ಯ ಇರುವುದಿಲ್ಲ ಎಂದು ತಿಳಿಸಿದರು.
ಈಗಾಗಲೇ ಅರ್ಜಿ ಸಲ್ಲಿಸಿರುವವರು ಹೊಸ ಪಡಿತರ ಚೀಟಿಗೆ ಅರ್ಜಿಯ ಪ್ರತಿ ನೀಡಬೇಕು. ಪಡಿತರ ಚೀಟಿ ವಿತರಣೆ ನಂತರ ಪರಿಶೀಲನೆ ನಡೆಸಲಾಗುವುದು. ಒಂದು ವೇಳೆ ಅನರ್ಹರು ಎಂಬುದು ದೃಢಪಟ್ಟರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ನಿರೀಕ್ಷಕರಿಗೆ ಲಾಪ್‌ಟಾಪ್
ತ್ವರಿತಗತಿಯಲ್ಲಿ ಹೊಸ ಪಡಿತರ ಚೀಟಿ ವಿತರಣೆ ಮಾಡುವ ಉದ್ದೇಶದಿಂದ ಆಹಾರ ನಿರೀಕ್ಷಕರಿಗೆ ಲ್ಯಾಪ್‌ಟಾಪ್ ಮತ್ತು ಕಲರ್ ಪ್ರಿಂಟರ್ ನೀಡಲಾಗುವುದು. ಅಲ್ಲದೆ, ಗುತ್ತಿಗೆ ಆಧಾರದ ಮೇಲೆ ಓರ್ವ ಡೇಟಾ ಎಂಟ್ರಿ ಆಪರೇಟರ್ ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಹೊಸ ಪಡಿತರ ಚೀಟಿಗೆ ಎರಡು ಹಂತಗಳಲ್ಲಿ ಒಟ್ಟು 15ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು, ಆಪೈಕಿ ಈಗಾಗಲೇ 13.50ಲಕ್ಷ ಕಾರ್ಡ್‌ಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ. ಉಳಿದ ಕಾರ್ಡುಗಳು ಮುದ್ರಣವಾಗಿದ್ದು, ಆಧಾರ್ ವಿಳಾಸ ತಾಳೆಯಾಗದೆ ವಾಪಸ್ ಬಂದಿವೆ. ಆ ಕಾರ್ಡುಗಳನ್ನು ಗ್ರಾಮ ಪಂಚಾಯಿತಿ ನೆರವು ಪಡೆದು ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.
ಮೂರನೆ ಹಂತದಲ್ಲಿ ಹೊಸ ಪಡಿತರ ಚೀಟಿಗೆ 8ಲಕ್ಷ ಅರ್ಜಿಗಳು ಬಂದಿದ್ದು, ಫೆ.20ರಿಂದ 1.20 ಲಕ್ಷ ರೂ.ಮಿತಿಯೊಳಗೆ ಆದಾಯ ದೃಢೀಕರಣ ಸಲ್ಲಿಸಿದವರಿಗೆ ಸ್ಥಳದಲ್ಲೇ ಪಡಿತರ ಚೀಟಿ ನೀಡಲಾಗುವುದು ಎಂದು ಹೇಳಿದರು.
“ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು. ಫಲಾನುಭವಿಗಳಿಗೆ ಉಚಿತವಾಗಿ ಸ್ಟೌವ್, ಜತೆಗೆ ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ನೀಡಲಿದ್ದು, ಅದನ್ನು ಅಡುಗೆ ಅನಿಲ ವಿತರಕರಿಗೆ ನೀಡದ 3 ದಿನಗಳೊಳಗೆ ಅನಿಲ ಸಂಪರ್ಕ ಸಿಗಲಿದೆ. ಈ ಯೋಜನೆಗೆ ರಾಜ್ಯ ಸರಕಾರ ಹಣ ನೀಡುತ್ತಿದೆ. ಆದರೆ, ಹಣ ಮತ್ತು ಫಲಾನುಭವಿಗಳ ಪಟ್ಟಿಯನ್ನು ಅನಿಲ ವಿತರಕ ಕಂಪೆನಿಗಳಿಗೆ ನೀಡಲು ಕೇಂದ್ರ ವಿಧಿಸಿದ್ದ ಷರತ್ತಿಗೆ ನಮ್ಮ ವಿರೋಧವಿದೆ. ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಅನಿಲ ಬಂಕ್‌ಗಳು ಇನ್ನು ಮುಂದೆ ರಾಜ್ಯ ಸರ್ಕಾರದಿಂದ ಅನುಮತಿ ಪಡೆಯಬೇಕು. ಈ ಸಂಬಂಧ ಕಾನೂನಿಗೆ ಅಗತ್ಯ ತಿದ್ದುಪಡಿ ತರಲಾಗುವುದು.
– ಯು.ಟಿ. ಖಾದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.