Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Team Udayavani, Apr 29, 2024, 12:12 PM IST
ಬೆಂಗಳೂರು: ನಗರದಲ್ಲಿ ಅಪರಾಧ ನಿಯಂತ್ರಣಕ್ಕಾಗಿ ರಾತ್ರಿ ಗಸ್ತು ಹೆಚ್ಚಳ ಮಾಡು ವುದರ ಜತೆಗೆ ಅಗತ್ಯವಿರುವ ಕಡೆ ಇನ್ನಷ್ಟು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಹೇಳಿದರು.
ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮಾಸಿಕ ಜನಸಂಪರ್ಕ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ವಸಂತನಗರದಲ್ಲಿ ಮಹಿಳಾ ಪಿಜಿಗಳೇ ಹೆಚ್ಚಾಗಿರುವುದರಿಂದ ಕೆಲಸ ಮುಗಿಸಿ ತಡರಾತ್ರಿ ಪಿಜಿಗೆ ಬರುವ ಯುವತಿಯರನ್ನು ಕೆಲವು ಯುವಕರು ಚುಡಾಯಿಸುತ್ತಾರೆ. ಅದರಿಂದ ಈ ಪ್ರದೇಶಗಳಲ್ಲಿ ಹೆಚ್ಚಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ರಾತ್ರಿ ಗಸ್ತನ್ನು ಹೆಚ್ಚಳ ಮಾಡಬೇಕು. ಹಾಗೆಯೇ ವೈಯಲಿಕಾವಲ್‌ನಲ್ಲಿ ಕೆಲ ಪುಂಡರು ರಾತ್ರಿ ವೇಳೆ ತೊಂದರೆ ನೀಡುತ್ತಾರೆ. ಎಲ್ಲೆಂದರಲ್ಲಿ ನಿಂತು ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಕೆಲ ಸಾರ್ವಜನಿಕರು ದೂರು ನೀಡಿದರು.
ಅದಕ್ಕೆ ಉತ್ತರಿಸಿದ ಆಯುಕ್ತರು, ಅಪ ರಾಧ ನಿಯಂತ್ರಣಕ್ಕೆ ರಾತ್ರಿ ಗಸ್ತು ಹೆಚ್ಚಳ ಮಾಡ ಲಾಗುತ್ತದೆ. ಜತೆಗೆ ಸಿಸಿ ಕ್ಯಾಮೆರಾಗಳನ್ನು ಎಲ್ಲೆಲ್ಲಿ ಅಳವಡಿಸಬೇಕು ಎಂಬುದನ್ನು ಗುರುತಿಸಿ ಹೆಚ್ಚುವರಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದರು.
ಸಂಚಾರ ದಟ್ಟಣೆ ನಿಯಂತ್ರಣಕ್ಕೂ ಕ್ರಮ: ಪ್ಯಾಲೆಸ್ ಗುಟ್ಟಹಳ್ಳಿಯ ವಿನಾಯಕ ಸರ್ಕಲ್‌ನ ಎರಡೂ ಕಡೆಗಳಲ್ಲಿ ವಾಹನ ಗಳನ್ನು ಪಾರ್ಕಿಂಗ್ ಮಾಡುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಿ ಕಂಡುಬರುತ್ತಿದೆ. ಅದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು.ಬಹುತೇಕ ಪ್ರದೇಶ ಗಳಲ್ಲಿ ಬೀದಿ ದೀಪಗಳು ಇಲ್ಲ. ಹೀಗಾಗಿ ರಾತ್ರಿ ವೇಳೆ ಓಡಾಡಲು ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಆಯುಕ್ತರಲ್ಲಿ ಮನವಿ ಮಾಡಿಕೊಂಡರು.
ಅದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಚಾರ ವಿಭಾಗದ ಡಿಸಿಪಿಗೆ ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ಇನ್ನು ಬೀದಿ ದೀಪಗಳ ಅಳವಡಿಕೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಆಯುಕ್ತರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ವಿಭಾಗದ ಡಿಸಿಪಿ ಎಚ್.ಶೇಖರ್, ಸಂಚಾರ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ಹಾಗೂ ಕೇಂದ್ರ ವಿಭಾಗದ ಎಲ್ಲ ಹಿರಿಯ-ಕಿರಿಯ ಪೊಲೀಸ್ ಅಧಿಕಾರಿಗಳು ಇದ್ದರು. ಇದೇ ವೇಳೆ ನಗರದ ಎಲ್ಲಾ ಕಾನೂನು ಸುವ್ಯವಸ್ಥೆ ಡಿಸಿಪಿಗಳು ತಮ್ಮ ವ್ಯಾಪ್ತಿಯಲ್ಲಿ ಮಾಸಿಕ ಜನಸಂಪರ್ಕ ದಿವಸ ಸಭೆ ಆಯೋಜಿಸಿ, ಸಾರ್ವಜನಿಕರ ಅಹವಾಲು ಇದೇವೇಳೆ ಸ್ವೀಕರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.