ಹೆಚ್ಚಿದೆ ಚಳಿ, ಇರಲಿ ಆರೋಗ್ಯ ಕಳಕಳಿ

Team Udayavani, Dec 9, 2019, 10:57 AM IST

bng-tdy-2

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಕಾವು ಜೋರಿದೆ. ಆದರೆ, ಉದ್ಯಾನ ನಗರಿಯ ವಾತಾವರಣಇದಕ್ಕೆ ಭಿನ್ನವಾಗಿದ್ದು, ಸ್ಪಲ್ಪ ಯಾಮಾರಿದರು ಆಸ್ಪತ್ರೆ ಮೆಟ್ಟಿಲೇರಬಹುದು ಎಚ್ಚರ..!

ಡಿಸೆಂಬರ್‌ ಆರಂಭದಿಂದಲೇ ರಾಜ್ಯದಲ್ಲಿ ಚಳಿಗಾಲವೂ ಆರಂಭವಾಗಿದೆ. ಕಳೆದ ಕೆಲ ದಿನಗಳಿಂದ ಉದ್ಯಾನ ನಗರಿಯಲ್ಲಿ ಚಳಿ ತೀವ್ರವಾಗುತ್ತಿದ್ದು, ಶೀತಗಾಳಿ ಮೈ ಕೊರೆಯುತ್ತಿದೆ. ಕಳೆದ ಒಂದು ವಾರದಲ್ಲಿ ಗರಿಷ್ಠ ತಾಪಮಾನ ಶನಿವಾರ 24.9 ಡಿಗ್ರಿ, ಭಾನುವಾರ ಈ ಬಾರಿಯ ಕನಿಷ್ಠ ತಾಪಮಾನ 17.8 ಡಿಗ್ರಿ ದಾಖಲಾಗಿದೆ. ಹಗಲಿನಲ್ಲಿ ಕೂಡ ಮೋಡ ಮುಚ್ಚಿದ ವಾತಾವರಣ ಇದ್ದು, ನಾಲೈದು ದಿನಗಳಿಂದ ಬಿಸಿಲು ಸಹ ಮರೆಯಾಗಿದೆ. ಇನ್ನು ಸಂಜೆಯಾಗುತ್ತಿದ್ದಂತೆ ಶೀತಗಾಳಿ ಆರಂಭವಾಗುತ್ತದೆ. ಈ ಹವಾಮಾನ ಬದಲಾವಣೆಯಿಂದ ನಗರದಲ್ಲಿ ವೈರಾಣು ಸೋಂಕು ಉಲ್ಬಣಗೊಂಡಿದೆ. ಜತೆಗೆ ಹೃದ್ರೋಗ, ಶ್ವಾಸಕೋಶ ಸಂಬಂಧಿ ಸೋಂಕುಗಳು ಕಾಣಿಸಿಕೊಳ್ಳತೊಡಗಿವೆ. ಹೀಗಾಗಿ, ಚಳಿಗಾಲಕ್ಕೆ ತಕ್ಕಂತೆ ಜೀವನಶೈಲಿ ಬದಲಾವಣೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಖಂಡಿತಾ ಆಸ್ಪತ್ರೆ ಹಾದಿ ಹಿಡಿಯಬೇಕಾಗುತ್ತದೆ.

ಬೇಸಿಗೆ ಹಾಗೂ ಮಳೆಗಾಲಕ್ಕೆ ಹೋಲಿಕೆ ಮಾಡಿದರೆ ವೈರಾಣುಗಳು ಚಳಿಗಾಲದಲ್ಲಿ ಹೆಚ್ಚು ಕ್ರಿಯಾಶೀಲವಾಗಿರುತ್ತವೆ. ಈ ವೈರಾಣುಗಳಿಂದ ಕಾಣಿಸಿಕೊಳ್ಳುವ ಇನ್‌ಫ್ಲೊಯೆಂಜಾ ವ್ಯಾಪಕವಾಗಿ ಹರಡಿ, ಜ್ವರ, ನೆಗಡಿ, ಕೆಮ್ಮಿನಂತಹ ಸಮಸ್ಯೆಗಳು, ಶ್ವಾಸಕೋಶ ಸೋಂಕು, ತೀವ್ರ ಗಂಟಲಿನ ಸೋಂಕು ಕಾಣಿಸಿಕೊಳ್ಳುತ್ತಿವೆ. ಪ್ರಮುಖವಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಿರುವ ಮಕ್ಕಳು ಹಾಗೂ ವೃದ್ಧರು ಬಹುಬೇಗ ಈ ವೈರಾಣು ಸೋಂಕಿಗೆ ಒಳಗಾಗುತ್ತಿದ್ದಾರೆ. ಇದರಿಂದ ನಗರದ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಹಾಗೂ ಬಡಾವಣೆಗಳಲ್ಲಿನ ಕ್ಲಿನಿಕ್‌, ನರ್ಸಿಂಗ್‌ ಹೋಮ್‌ಗಳ ಮುಂದೆ ಚಿಕಿತ್ಸೆ ಪಡೆಯಲು ರೋಗಿಗಳು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಸಾಮಾನ್ಯವಾಗಿರುತ್ತವೆ.

ನಗರದ ಬೌರಿಂಗ್‌, ವಿಕ್ಟೋರಿಯಾ ಹಾಗೂ ಕೆಸಿ ಜನರಲ್‌ ಆಸ್ಪತ್ರೆಗಳಲ್ಲಿ ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಕಳೆದ ಒಂದು ವಾರದಿಂದ ವೈರಾಣು ಸೋಂಕಿಗೆ ಚಿಕಿತ್ಸೆ ಪಡೆದವರ ಸಂಖ್ಯೆ ಶೇ.10ರಷ್ಟು ಹೆಚ್ಚಾಗಿದ್ದು, ಖಾಸಗಿ ಕ್ಲಿನಿಕ್‌, ನರ್ಸಿಂಗ್‌ ಹೋಮ್‌ ಗಳಲ್ಲೂ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಸಂಖ್ಯೆ ಶೇ.50 ರಷ್ಟು ಹೆಚ್ಚಾಗಿದೆ.

ಹೃದ್ರೋಗಿಗಳು ಎಚ್ಚರ ವಹಿಸಿ: ಚಳಿಗಾಲದ ರಾತ್ರಿ ಗಳಲ್ಲಿ ತಾಪಮಾನ ಸಾಕಷ್ಟು ಕಡಿಮೆ ಇರುವುದರಿಂದರಕ್ತನಾಳಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪೊ›ಟೀನ್‌ ಪ್ರಮಾಣ ಹೆಚ್ಚಾಗಿ ರಕ್ತ ಹೆಪ್ಪುಗಟ್ಟಬಹುದು. ಇದರಿಂದ ರಕ್ತ ಸಂಚಾರಕ್ಕೆ ತೊಂದರೆಯಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ದೊರೆಯದೇ ಹೃದಯಾಘಾತವಾಗುವ ಸಾಧ್ಯತೆ ಅಧಿಕವಾಗಿರುತ್ತದೆ ಎನ್ನುತ್ತಾರೆ ಹೃದ್ರೋಗ ತಜ್ಞರು. ಹೀಗಾಗಿ, ಹೃದಯಸಂಬಂಧಿ ಕಾಯಿಲೆಯುಳ್ಳವರು ಉಸಿರಾಟ ಸಮಸ್ಯೆ, ಎದೆಯುರಿ, ಬೆವರುವಿಕೆ ಕಂಡಾಗ ಎಚ್ಚರ ವಹಿಸಬೇಕು. ಇನ್ನು ಅಸ್ತಮಾ, ಮಧುಮೇಹ, ಉಸಿರಾಟ ಮತ್ತಿತರ ಸಮಸ್ಯೆ ಇರುವವರೂ ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ವೈದ್ಯರು.

ಕಾಡಲಿದೆ ಅಸ್ತಮಾ, ಒಣ ಚರ್ಮ: ಚಳಿಗಾಲದಲ್ಲಿ ಧೂಳು ಮಂಜಿನೊಂದಿಗೆ ಸೇರುವುದರಿಂದ, ಮಂಜು ಮಿಶ್ರಿತ ಗಾಳಿ ಸೇವನೆ ಅಸ್ತಮಾ ತರುವಂತಹ ಅಪಾಯವಿರುತ್ತದೆ. ಉಷ್ಣಾಂಶ ಕೊರತೆಯಿಂದ ರಕ್ತ ಚಲನೆ ಕುಗ್ಗಿ ಶೀತ ಗಾಳಿಗೆ ಚರ್ಮ ಒಣಗುತ್ತದೆ. ಜತೆಗೆ ದೇಹದ ಸೂಕ್ಷ್ಮಭಾಗಗಳಲ್ಲಿ ತುರಿಕೆ ಕಾಣಿಸಿಕೊಳ್ಳುತ್ತದೆ. ಚರ್ಮದ ಮೇಲ್ಪದರದಲ್ಲಿ ನೀರಿನಾಂಶ ಕಡಿಮೆಯಾದಂತೆ ಚರ್ಮ ಒಣಗುತ್ತದೆ. ಚರ್ಮದಲ್ಲಿ ನಿರ್ಜಲೀಕರಣವಾದಂತೆ ಚರ್ಮದ ಕೋಶಗಳು ಸಾಯಲಾರಂಭಿಸುತ್ತವೆ. ಪರಿಣಾಮ ಚರ್ಮ ಸಂಕುಚಿತಗೊಂಡು ಒಡೆಯಲು ಆರಂಭಿಸುತ್ತದೆ. ಇದು ಚರ್ಮದ ಸೋಂಕಿಗೂ ಕಾರಣವಾಗುತ್ತದೆ.

-ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.