ಸ್ತ್ರೀಯರಲ್ಲಿ ಹೆಚ್ಚುತ್ತಿದೆ ಗರ್ಭಕೋಶ ಕಂಠ ಕ್ಯಾನ್ಸರ್‌


Team Udayavani, Nov 3, 2018, 12:17 PM IST

striyaralli.jpg

ಬೆಂಗಳೂರು: ಗ್ರಾಮೀಣ ಭಾಗದ ಮಹಿಳೆಯರಲ್ಲಿ ಗರ್ಭಕೋಶ ಕಂಠ (ಸರ್ವಿಕಲ್‌) ಕ್ಯಾನ್ಸರ್‌ ಹೆಚ್ಚು ಕಂಡುಬರುತ್ತಿದ್ದು, ಆ ಪೈಕಿ ಶೇ.60 ರಷ್ಟು ಮಹಿಳೆಯರು ಚಿಕಿತ್ಸೆ ಫ‌ಲಕಾರಿಯಾಗದೆ ಸಾವಿಗೀಡಾಗುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಚಿಕ್ಕ ವಯಸ್ಸಿನಲ್ಲಿ ಮದುವೆ, ಅಸುರಕ್ಷಿತ ಹಾಗೂ ಹೆಚ್ಚಿನ ಜನರೊಂದಿಗೆ ಲೈಗಿಂಕ ಸಂಪರ್ಕ ನಡೆಸುವುದರಿಂದ ಮಹಿಳೆಯರಲ್ಲಿ ಗರ್ಭಕೋಶ ಕಂಠ ಕ್ಯಾನ್ಸರ್‌ ಕಾಣಿಸಿಕೊಳ್ಳುತ್ತಿದೆ. ಆದರೆ, ಕ್ಯಾನ್ಸರ್‌ ಕೊನೆಯ ಹಂತದಲ್ಲಿರುವಾಗ ಶೇ.63ರಷ್ಟು ಮಹಿಳೆಯರು ಆಸ್ಪತ್ರೆಗಳ ಕಡೆಗೆ ಮುಖ ಮಾಡುತ್ತಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ಮರಣ ಹೊಂದುತ್ತಿರುವುದು ವರದಿಯಿಂದ ತಿಳಿದುಬಂದಿದೆ.

ರಾಷ್ಟೀಯ ಕ್ಯಾನ್ಸರ್‌ ನಿಯಂತ್ರಣ ಹಾಗೂ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ ಗರ್ಭಕೋಶ ಕಂಠ ಕ್ಯಾನ್ಸರ್‌ ಪ್ರಕರಣಗಳ ಲೆಕ್ಕಾಚಾರದಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ಪ್ರತಿ ಎಂಟು ನಿಮಿಷಕ್ಕೆ ಒಬ್ಬ ಮಹಿಳೆ ಇದಕ್ಕೆ ಬಲಿಯಾಗುತ್ತಿದ್ದಾರೆ. ಪ್ರಸಕ್ತ ವರ್ಷ ಕ್ಯಾನ್ಸರ್‌ನಿಂದ 3,71,302 ಮಹಿಳೆಯರು ಮೃತಪಟ್ಟಿದ್ದು, ಆ ಪೈಕಿ ಗರ್ಭಕೋಶ ಸಂಬಂಧಿ ಕ್ಯಾನ್ಸರ್‌ಗೆ ತುತ್ತಾದವರ ಪ್ರಮಾಣ ಶೇ.16ರಷ್ಟಿದೆ. ಪ್ರಸಕ್ತ ವರ್ಷ ಸುಮಾರು 97 ಸಾವಿರ ಮಹಿಳೆಯರು ಈ ಕ್ಯಾನ್ಸರ್‌ಗೆ ಒಳಗಾಗುತ್ತಿದ್ದು, ಆ ಪೈಕಿ 60 ಸಾವಿರಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿದ್ದಾರೆ. 

ಕರ್ನಾಟಕದಲ್ಲಿ ಪ್ರಸ್ತುತ ಎಂಟು ಸಾವಿರ ಮಂದಿ ಮಹಿಳೆಯರು ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆ ಪೈಕಿ ಗ್ರಾಮೀಣ ಮಹಿಳೆಯರ ಸಂಖ್ಯೆ ಹೆಚ್ಚಿದೆ. ವರದಿಯಂತೆ ನಗರ ಭಾಗದಲ್ಲಿ ಒಂದು ಲಕ್ಷ ಜನರ ಪೈಕಿ 16 ಮಂದಿಯಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಗ್ರಾಮೀಣ ಭಾಗದ ಒಂದು ಲಕ್ಷ ಮಹಿಳೆಯಲ್ಲಿ 21 ರಿಂದ 22 ಸ್ತ್ರೀಯರು ಸರ್ವಿಕಲ್‌ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ.

ಗರ್ಭಕೋಶ ಕಂಠ ಕ್ಯಾನ್ಸರ್‌ ನಿಯಂತ್ರಣ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಹಲವಾರು ಕ್ರಮ ಕೈಗೊಂಡರೂ ಗ್ರಾಮೀಣ ಭಾಗದಲ್ಲಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬದಲಿಗೆ ಪ್ರತಿ ವರ್ಷ ಒಂದು ಸಾವಿರ ಹೊಸ ರೋಗಿಗಳು ಸೇರ್ಪಡೆಯಾಗುತ್ತಿದ್ದಾರೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ವಾರ್ಷಿಕ ದಾಖಲಾಗುತ್ತಿರುವ 6 ಸಾವಿರ ಹೊಸ ಮಹಿಳಾ ಕ್ಯಾನ್ಸರ್‌ ರೋಗಿಗಳ ಪೈಕಿ 1,500 ಗರ್ಭಕೋಶ ಕ್ಯಾನ್ಸರ್‌ ಪ್ರಕರಣಗಳಿರುತ್ತವೆ. ಕ್ಯಾನ್ಸರ್‌ 3ನೇ ಹಂತ ತಲುಪಿದ ಬಳಿಕ ಆಸ್ಪತ್ರೆ ಸೇರಿದರೆ ಚಿಕಿತ್ಸೆ ಫ‌ಲಕಾರಿಯಾಗುವುದು ತೀರಾ ಕಡಿಮೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ ರಾಮಚಂದ್ರ ಹೇಳುತ್ತಾರೆ.

ಗರ್ಭಕೋಶ ಕಂಠ ಕ್ಯಾನ್ಸರ್‌ಗೆ ಕಾರಣವೇನು?
-ಸಣ್ಣ ಪ್ರಾಯದಲ್ಲಿ ಲೈಂಗಿಕ ಚಟುವಟಿಕೆಯಲ್ಲಿ ತೊಡಗುವುದು
-ಒಬ್ಬರಿಗಿಂತ ಹೆಚ್ಚು ಜನರ ಜತೆಗಿನ ಲೈಂಗಿಕ ಸಂಪರ್ಕ
-ಅಸುರಕ್ಷಿತ ಲೈಂಗಿಕ ಕ್ರಿಯೆ ನಡೆಸುವುದು
-ತಂಬಾಕು ಸೇವನೆ
-ಮುಟ್ಟಿನ ಸಂದರ್ಭದಲ್ಲಿ ಶುಚಿತ್ವಕ್ಕೆ ಒತ್ತು ನೀಡದಿರುವುದು

ಲಕ್ಷಣಗಳೇನು?: ಋತು ಚಕ್ರ ಸಮಯ ಹೊರತು ಪಡಿಸಿ ಬೇರೆ ಸಮಯದಲ್ಲಿ ರಕ್ತ ಸ್ರಾವ, ಅಂಡಾಣುವಿನಲ್ಲಿ ಕೆಟ್ಟ ವಾಸನೆ, ಅತ್ಯಧಿಕ ಹೊಟ್ಟೆ ನೋವು

ಕ್ವಿದ್ವಾಯಿಯಲ್ಲಿ ಜಾಗೃತಿ ಮಾಸ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಗರ್ಭಕೋಶ ಕಂಠ ಕ್ಯಾನ್ಸರ್‌ ಜಾಗೃತಿ ಮಾಸ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದ ಬಯಾಸಿ, ಸಿ.ಟಿ ಸ್ಕ್ಯಾನ್‌ ಪರೀಕ್ಷೆಯನ್ನು ನವೆಂಬರ್‌ ತಿಂಗಳಾದ್ಯಂತ ಉಚಿತವಾಗಿ ಮಾಡಲಾಗುತ್ತಿದೆ. ಜತೆಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಸಂಸ್ಥೆ ಹಮ್ಮಿಕೊಂಡಿದೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ ಡಾ.ರಾಮಚಂದ್ರ ತಿಳಿಸಿದ್ದಾರೆ.

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.