ಠಾಣೆಯಲ್ಲಿ ವಿದ್ಯಾರ್ಥಿನಿ ಜತೆ ಅಸಭ್ಯ ನಡೆ; ಪಿಎಸ್‌ಐ ಅಮಾನತು, ಕೇಸ್
Team Udayavani, Apr 13, 2023, 1:54 PM IST
ಬೆಂಗಳೂರು: ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ಸುದ್ದುಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥಸ್ವಾಮಿಯನ್ನು ಅಮಾನತುಗೊಳಿಸಿದ್ದು, ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ. ಜತೆಗೆ ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದರು.
ಏ.8ರಂದು ಸಂತ್ರಸ್ತೆ ಸಹೋದರನ ಸ್ನೇಹಿತನ ವರದಕ್ಷಿಣೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ಠಾಣೆಗೆ ಬಂದಿದ್ದರು. ಆಗ ಪಿಎಸ್‌ಐ ಮಂಜುನಾಥಸ್ವಾಮಿ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಹೇಳಿಕೆ ಪಡೆಯುವ ವೇಳೆ ತನ್ನ ಸೊಂಟ ಮತ್ತು ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆ, ತಡರಾತ್ರಿ ವಾಟ್ಸ್‌ಆ್ಯಪ್ ಚಾಟ್ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ.
ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿ ಎಂದು ಹೇಳಲಾಗಿದ್ದು, ವರದಕ್ಷಿಣೆ ಮತ್ತು ವಿಚ್ಛೇದನ ಪ್ರಕರಣ ಸಂಬಂಧ ಸಾಕ್ಷ್ಯ ಹೇಳಿಕೆ ನೀಡಲು ಹೋದಾಗ ದುರ್ಘಟನೆ ನಡೆದಿದೆ ಎಂದು ಸಂತ್ರಸ್ತೆ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದಾಗ ಮಂಜುನಾಥಸ್ವಾಮಿ ಸಂತ್ರಸ್ತೆ ಜತೆ ಅಸಭ್ಯವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸದ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ.
ಜತೆಗೆ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.