Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Team Udayavani, Nov 5, 2024, 2:12 PM IST

9

ಬೆಂಗಳೂರು: ಈಗಾಗಲೇ ಸಚಿವ ಸಂಪುಟದ ಒಪ್ಪಿಗೆ ಪಡೆದಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಮಹತ್ವಾಕಾಂಕ್ಷೆಯ ಬೆಂಗಳೂರು ಸುರಂಗ ರಸ್ತೆ ಕಾಮಗಾರಿ ವೇಗ ಪಡೆದುಕೊಳ್ಳುವುದಕ್ಕೆ “ಭಾರತ-ಚೀನಾ’ ದ್ವಿಪಕ್ಷೀಯ ಸಂಬಂಧದ ಸಮಸ್ಯೆ ಎದುರಾಗಿದೆ. ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರಿ ಬಾಂಧವ್ಯ ತೆರೆದುಕೊಳ್ಳುವುದನ್ನು ರಾಜ್ಯ ಸರ್ಕಾರ ಈಗ ಎದುರು ನೋಡುತ್ತಿದೆ.

ಸರ್ಕಾರದ ಉನ್ನತ ಮೂಲಗಳು ಈ ವಿಚಾರವನ್ನು ಖಚಿತಪಡಿಸಿವೆ. ಮೊದಲ ಹಂತದಲ್ಲಿ ಹೆಬ್ಟಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ನಾಲ್ಕು ಟ್ರ್ಯಾಕ್‌ ಸುರಂಗ ಮಾರ್ಗ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಕಳೆದ ಜುಲೈ ತಿಂಗಳಲ್ಲಿಯೇ ಅನುಮತಿ ನೀಡಿದೆ. ಒಟ್ಟು 6 ಹಂತದ ಯೋಜನೆಗೆ ಈಗಾಗಲೇ “ಬ್ಲೂ ಪ್ರಿಂಟ್‌ ‘ ಹಾಗೂ ಮಾರ್ಗಗಳನ್ನೂ ಗುರುತಿಸಲಾಗಿದೆ.

ಆದರೆ, ಈ ಕಾಮಗಾರಿ ವೇಗ ಪಡೆಯುವುದಕ್ಕೆ ಚೀನಾ ನಿರ್ಮಿತ ಬೋರಿಂಗ್‌ ಯಂತ್ರದ ಅಗತ್ಯ ವಿದೆ. ನಮ್ಮ ಮೆಟ್ರೋ ನಿರ್ಮಾಣಕ್ಕೆ ಆರಂಭದಲ್ಲಿ ಚೀನಾ ನಿರ್ಮಿತ ಯಂತ್ರೋಪಕರಣಗಳನ್ನೇ ಬಳಸಲಾಗಿತ್ತು. ಆದರೆ, ಕಳೆದ ಎರಡು ವರ್ಷದಿಂದ ಎರಡು ರಾಷ್ಟ್ರಗಳ ಮಧ್ಯೆ ವ್ಯಾಪಾರ ವಹಿವಾಟು ಕ್ಷೀಣಿಸಿದೆ. ಹೀಗಾಗಿ ಬೋರಿಂಗ್‌ ಯಂತ್ರಗಳ ಆಮದು ಸದ್ಯಕ್ಕೆ ಸಾಧ್ಯವಿಲ್ಲ.

ಹೀಗಾಗಿ ಸುರಂಗ ಮಾರ್ಗ ಕಾಮಗಾರಿ ಶೀಘ್ರ ಪ್ರಾರಂಭವಾಗುವುದಕ್ಕೆ ಈಗ ಭಾರತ-ಚೀನಾ ಬಾಂಧವ್ಯ ವೃದ್ಧಿ ತೀರಾ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಅವರು ಇತ್ತೀಚೆಗೆ ಬ್ರಿಕ್ಸ್‌ ಸಮ್ಮೇಳನದ ನೇಪಥ್ಯದಲ್ಲಿ ಚೀನಾ ಅಧ್ಯಕ್ಷ ಷಿ ಜಿಂಪಿಂಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ವ್ಯವಹಾರಿಕ ಸಂಬಂಧ ಜಿಗಿತುಕೊಳ್ಳುವುದರ ಮುನ್ಸೂಚನೆ ಎಂದು ಭಾವಿಸಲಾಗಿದೆ. ಎಷ್ಟು ಬೇಗ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಗೊಳಿ ಸುತ್ತದೆಯೋ, ಅಷ್ಟು ಬೇಗ ಸುರಂಗ ಮಾರ್ಗ ಕಾಮಗಾರಿ ವೇಗ ಪಡೆದುಕೊಳ್ಳುತ್ತದೆ ಎಂದು ವ್ಯಾಖ್ಯಾನಿಸಲಾಗಿದೆ.

ಈ ಮಾರ್ಗದಲ್ಲಿ ಒಟ್ಟು ನಾಲ್ಕು ಮಾರ್ಗಗಳು ಇರಲಿದ್ದು, ಮೂರು ಮಾತ್ರ ವಾಹನ ಓಡಾಟಕ್ಕೆ ತೆರೆದಿರುತ್ತದೆ. ಒಂದು ಮಾರ್ಗವನ್ನು ಮುಕ್ತವಾಗಿಡಲಾಗುತ್ತದೆ. ಭೂ ಸ್ವಾಧೀನ ಹಾಗೂ ಪರಿಹಾರ ಪ್ರಮಾಣ ಕಡಿಮೆ ಇರುವುದರಿಂದ ಕಾಮಗಾರಿ ಪ್ರಾರಂಭಕ್ಕೆ ವಿಳಂಭವಾಗುವುದಿಲ್ಲ ಎಂಬುದು ಬಿಬಿಎಂಪಿಯ ಲೆಕ್ಕಾಚಾರ.

ವಿಧಾನಸೌಧ ಸುತ್ತಲಿನ 1 ಕಿ.ಮೀ. ಪ್ರದೇಶದೊಳಗೆ ಸುರಂಗ ಮಾರ್ಗದ ಯಾವುದೇ ಪ್ರವೇಶದ್ವಾರ ಇರದಂತೆ ಸೂಚನೆ ನೀಡಲಾಗಿದೆ. ಈ ಮಾರ್ಗದಲ್ಲಿ ಪ್ರಾರಂಭವಾಗುವ ರಸ್ತೆಯ ಪ್ರವೇಶ ಹಾಗೂ ನಿರ್ಗಮನ ದ್ವಾರಗಳು ಚಿನ್ನಸ್ವಾಮಿ ಸ್ಟೇಡಿಯಂ ಹಾಗೂ ರೇಸ್‌ಕೋರ್ಸ್‌ ಬಳಿ ಇರಲಿವೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.