“ಪ್ರವಾಸಿ ಭಾರತ ದಿವಸ್’ ಗಣ್ಯರ ಓಡಾಟಕ್ಕೆ ಕಾಪ್ಟರ್
Team Udayavani, Jan 1, 2017, 3:45 AM IST
ಬೆಂಗಳೂರು: ಜನವರಿ 7ರಿಂದ ಮೂರು ದಿನಗಳ ಕಾಲ ರಾಜಧಾನಿಯಲ್ಲಿ ನಡೆಯುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ “ಪ್ರವಾಸಿ ಭಾರತ ದಿವಸ್’ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆದೊಯ್ಯಲು ಹೆಲಿಕಾಫ್ಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
“ಪ್ರವಾಸಿ ದಿವಸ್’ ನಡೆಯುವ ನಗರದ ತುಮಕೂರು ರಸ್ತೆಯ “ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ(ಬಿಐಇಸಿ)’ಕ್ಕೆ ಶನಿವಾರ ಭೇಟಿ ನೀಡಿ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಪೋರ್ಚುಗಲ್ ಪ್ರಧಾನಿ ಆ್ಯಂಟೋನಿಯಾ ಗಟ್ಟೆರೆಸ್ ಸೇರಿದಂತೆ ದೇಶ ವಿದೇಶಗಳಿಂದ ನಾನಾ ಗಣ್ಯರು ಆಗಮಿಸಲಿದ್ದಾರೆ. ನಗರದ ಎಚ್‌ಎಎಲ್ ಅಥವಾ ಬಿಐಎಎಲ್ ವಿಮಾನ ನಿಲ್ದಾಣಗಳಿಗೆ ಆಗಮಿಸುವ ಗಣ್ಯರನ್ನು ಅಲ್ಲಿಂದ ಕಾರ್ಯಕ್ರಮ ನಡೆಯುವ ಬಿಐಇಸಿಗೆ ಕರೆದೊಯ್ಯಬೇಕಿದೆ. ಅವರನ್ನು ರಸ್ತೆ ಮಾರ್ಗಗಳ ಮೂಲಕ ಕರೆದೊಯ್ಯಲು ವ್ಯವಸ್ಥೆ ಮಾಡಿದರೆ ನಗರದ ವಿವಿಧೆಡೆ ಸಂಚಾರ ದಟ್ಟಣೆಯ ಸಮಸ್ಯೆಯಾಗಬಹುದು. ಹಾಗಾಗಿ ನೇರವಾಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕರೆದೊಯ್ಯಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಬಿಐಇಸಿ ಆವರಣದಲ್ಲಿ ನಾಲ್ಕು ಎಲಿಪ್ಯಾಡ್‌ಗಳ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ಜ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಪ್ರವಾಸಿ ಭಾರತ ದಿವಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜ.8ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪೋರ್ಚುಗಲ್ ಪ್ರಧಾನಿ ಆ್ಯಂಟೋನಿಯೊ ಗಟ್ಟೆರೆಸ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜ.9ರಂದು ನಡೆಯುವ ಸಮಾರೋಪದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪಾಲ್ಗೊಳ್ಳುವರು. ವಿವಿಧ ರಾಜ್ಯಗಳ ಎಂಟು ಜನ ಮುಖ್ಯಮಂತ್ರಿಗಳೂ ಆಗಮಿಸಲಿದ್ದಾರೆ ಎಂದರು.
3900 ಮಂದಿ ಭಾಗಿ: ಪ್ರವಾಸಿ ಭಾರತ ದಿವಸದಲ್ಲಿ ಪಾಲ್ಗೊಳ್ಳಲು 1500 ಜನ ಅನಿವಾಸಿ ಭಾರತೀಯರೂ ಸೇರಿದಂತೆ ಒಟ್ಟು 3,900 ಜನ ಹೆಸರು ನೋಂದಾಯಿಸಿದ್ದಾರೆ. 14 ರಾಜ್ಯಗಳು ಕಾರ್ಯಕ್ರಮದಲ್ಲಿ ಪ್ರದರ್ಶನ ಮಳಿಗೆಗಳನ್ನು ತೆರದು ತಮ್ಮ ರಾಜ್ಯಗಳ ವೈಶಿಷ್ಟéತೆಯನ್ನು ಅನಾವರಣಗೊಳಿಸಲಿವೆ. ಬಿಐಇಸಿಯ 1 ಮತ್ತು 2ನೇ ಬೃಹತ್ ಪ್ರದರ್ಶನ ಕೇಂದ್ರಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಲು ಅವಕಾಶ ನೀಡಲಾಗಿದೆ. ಒಟ್ಟಾರೆ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದ್ದು, ಜ.5ರೊಳಗೆ ಪೂರ್ಣ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ದೇಶಪಾಂಡೆ ಹೇಳಿದರು.
ಸ್ಟ್ರಾರ್ಟ್ ಅಪ್ ಮತ್ತು ಅವಿಷ್ಕಾರಗಳು ಹಾಗೂ ಇನ್ವೆಸ್ಟ್ ಕರ್ನಾಟಕದ ಕುರಿತಾದಂತೆ ಗೋಷ್ಠಿಗಳು ಕೂಡ ಕಾರ್ಯಕ್ರಮದಲ್ಲಿ ನಡೆಯಲಿವೆ. ಕರ್ನಾಟಕದ ಕೈಗಾರಿಕ ಕ್ಷೇತ್ರದ ಬೆಳವಣಿಗೆ ಕುರಿತು ಅನಿವಾಸಿ ಭಾರತೀಯರು ಮತ್ತು ಉದ್ಯಮಿಗಳಿಗೆ ತಿಳಿಸಿಕೊಡಲಿದ್ದಾರೆ ಎಂದರು.
ಕೈಗಾರಿಕೆ ಇಲಾಖೆಯ ಆಯುಕ್ತ ಗೌರವ ಗುಪ್ತ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆಯ ಲಕ್ಷ್ಮೀನಾರಾಯಣ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಿ.ವಿ.ಪ್ರಸಾದ್ ಸಿಐಡಿ ಡಿಐಜಿ ಸೋನಿಯಾ ನಾರಂಗ್ ಮತ್ತಿತತರರು ಉಪಸ್ಥಿತರಿದ್ದರು.
ಮೋದಿಜಿ ಜತೆ 250 ಜನರ ಊಟ : ಜ.8 ರಂದು ಕಾರ್ಯಕ್ರಮ ಉದ್ಘಾಟಿಸುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 250 ಗಣ್ಯರ ಔತಣಕೂಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲ ಅನಿವಾಸಿ ಭಾರತೀಯರು ಸೇರಿದಂತೆ ಪ್ರಮುಖರಿಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ. ಸಾಧ್ಯವಾದಷ್ಟೂ ರಾಜ್ಯದ ಅನಿವಾಸಿ ಭಾರತೀಯರಿಗೆ ಹೆಚ್ಚಿನ ಅವಕಾಶ ಮಾಡಿಕೊಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸ್ವಚ್ಚತೆ ಕಾಪಾಡಿ: ಇದಕ್ಕೂ ಮುನ್ನ ಬೆಳಗ್ಗೆ ಬಿಐಇಸಿಗೆ ಭೇಟಿ ನೀಡುವ ಮುನ್ನ ಹಬ್ಟಾಳ ರಸ್ತೆಯಲ್ಲಿ ಪರಿಶೀಲನೆ ನಡೆಸಿದ ಸಚಿವರು ರಸ್ತೆ ಬದಿಯಲ್ಲಿ ಕಸ, ಮರಳಿನ ಲಾರಿಗಳು ನಿಲ್ಲದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ವಿಮಾನ ನಿಲ್ದಾಣ ರಸ್ತೆಯ ಮೇಲ್ಸೇತುವೆ ಕಂಬಗಳಿಗೆ ಬಣ್ಣ ಬಳಿಯಬೇಕು. ಕೆಳಭಾಗದಲ್ಲಿರುವ ಕಸವನ್ನು ತೆರವು ಮಾಡಬೇಕು. ಪ್ರಧಾನಿ ಅವರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಾರೆ. ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡುವಂತೆ ಬಿಡಿಎ ಅಧಿಕಾರಿಗಳಿಗೆ ಕಟ್ಟಾಜ್ಞೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.