ಎಲೆಕ್ಟ್ರಾನಿಕ್ ಸಮರ ವ್ಯವಸ್ಥೆಯಲ್ಲಿ ಭಾರತ ಮುಂದೆ
Team Udayavani, Feb 15, 2018, 3:17 PM IST
ಬೆಂಗಳೂರು: ರಕ್ಷಣಾ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಭಾರತ ಎಲೆಕ್ಟ್ರಾನಿಕ್ ಸಮರದ ವೃತ್ತಿಪರತೆಯಲ್ಲಿ ವಿಶ್ವದಲ್ಲೇ ಯಶಸ್ವಿ ಹಾಗೂ ಕ್ರಿಯಾಶೀಲ ಬಲವಾಗಿ ಹೊರಹೊಮ್ಮಿದೆ ಎಂದು ಅಮೆರಿಕದ ಅಸೋಸಿಯೇಷನ್ ಆಫ್ ಓಲ್ಡ್ ಕ್ರೌಸ್ (ಎಒಸಿ) ಅಂತಾರಾಷ್ಟ್ರೀಯ ಅಧ್ಯಕ್ಷರಾದ ಲಿಸಾ ಕೆ. ಫ್ರಗ್ ಹೇಳಿದರು.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್), ಎಒಸಿ ಸೇರಿದಂತೆ ಇತರೆ ಸಂಸ್ಥೆಗಳು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಎಲೆಕ್ಟ್ರಾನಿಕ್ ಸಮರ’ ಕುರಿತ ಐದನೇ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಸಂವಹನ ಕ್ಷೇತ್ರದಲ್ಲಿ ಸುಧಾರಿತ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಸಮನ್ವಯತೆ ಇತರೆ ಯಶಸ್ವಿ ಕಾರ್ಯ ನಿರ್ವಹಣೆಗೂ ಎಲೆಕ್ಟ್ರಾನಿಕ್ ತಂತ್ರಜ್ಞಾನದ ಬಳಕೆ ಉಪಯುಕ್ತವೆನಿಸಿದೆ. ಸೇನಾ ಬಲದ ನಾನಾ ವಿಭಾಗಗಳ ಮಾಹಿತಿ ಒಂದೇ ವೇದಿಕೆಯಡಿ ಸಿಗುವ ವ್ಯವಸ್ಥೆ ಕಲ್ಪಿಸುವುದು ಅತ್ಯವಶ್ಯಕವಾಗಿದೆ. ಏಕೆಂದರೆ ಭವಿಷ್ಯದಲ್ಲಿ ಯುದ್ಧ ಸಂಭವಿಸಿದರೆ ಅದು ಎಲೆಕ್ಟ್ರಾನಿಕ್ ತಂತ್ರಜ್ಞಾನ ಆಧಾರಿತವಾಗಿದ್ದು, ಎಲ್ಲ ಸೇನಾ ಬಲಗಳ ಮಾಹಿತಿ ಒಂದೇ ವೇದಿಕೆಯಡಿ ಸಿಗುವ ವ್ಯವಸ್ಥೆ ಕಲ್ಪಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ಎಲೆಕ್ಟ್ರಾನಿಕ್ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಅಗತ್ಯವಿದ್ದು, ಈ ಕ್ಷೇತ್ರದಲ್ಲಿ ವೃತ್ತಿಪರ ಯುವಜನತೆ ತೊಡಗಿಸಿಕೊಳ್ಳಲು ಮುಂದಾಗಬೇಕು. ಆಗ ಇನ್ನಷ್ಟು ವೈವಿಧ್ಯವಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ಬಳಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಬಿಇಎಲ್ ಬೆಂಗಳೂರು ಘಟಕದ ವ್ಯವಸ್ಥಾಪಕ ನಿರ್ದೇಶಕರೂ ಆದ ಅಧ್ಯಕ್ಷ ಎಂ.ವಿ.ಗೌತಮ, “ಎಲೆಕ್ಟ್ರಾನಿಕ್ ಸಮರ ವ್ಯವಸ್ಥೆಯಲ್ಲಿ ಬಲವರ್ಧನೆ ಸಾಧಿಸುವುದು ಜಗತ್ತಿನ ಎಲ್ಲ ರಾಷ್ಟ್ರಗಳಿಗೂ ಅನಿವಾರ್ಯವಾಗಿದೆ. ಹಾಗೆಯೇ ಈ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ ಹಾಗೂ ಅನ್ವೇಷಣೆಗೂ ವಿಫುಲ ಅವಕಾಶವಿದ್ದು, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕಿದೆ ಎಂದು
ಹೇಳಿದರು.
ಎಲೆಕ್ಟ್ರಾನಿಕ್ ಸಮರ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದರೆ ಭವಿಷ್ಯದಲ್ಲಿ ಯುದ್ಧ ಸಂಭವಿಸಿದರೂ ಎದುರಿಸಲು ಸಜ್ಜಾಗಲು ನೆರವಾಗುವ ಜತೆಗೆ ನೆರೆಹೊರೆಯ ರಾಷ್ಟ್ರಗಳೊಂದಿಗೆ ಸೌಹಾರ್ದ ಕಾಪಾಡಿ ಕೊಳ್ಳಲು ಸಹಕಾರಿಯಾಗಲಿದೆ. ಸೇನಾಬಲದ ನಾನಾ ವಿಭಾಗಗಳ ಅಗತ್ಯಗಳು ಸಂಕೀರ್ಣವೆನಿಸುವ ಸಂದರ್ಭದಲ್ಲಿ ಪರಸ್ಪರ ಒಗ್ಗೂಡಿಸಲು ಹಾಗೂ ಜಂಟಿ ನಿರ್ವಹಣೆಗೂ ಪೂರಕವಾಗಿರಲಿದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿಗಳ “ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಯು ದೇಶೀಯ ಉತ್ಪನ್ನಗಳ ತಯಾರಿಕೆ ಹಾಗೂ ಬಳಕೆಗೂ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ನೀಡಿದೆ. ಬಿಇಎಲ್ ಸಂಸ್ಥೆಯು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೆ ಕಾಯ್ದಿರಿಸಿರುವ ಅನುದಾನದಲ್ಲಿ ಶೇ.15ರಷ್ಟನ್ನು ಎಲೆಕ್ಟ್ರಾನಿಕ್ ಸಮರ ವ್ಯವಸ್ಥೆಗೆ ಮೀಸಲಿರಿಸಿದೆ ಎಂದು ಹೇಳಿದರು. ಎಒಸಿ ಭಾರತ
ಶಾಖೆ ಅಧ್ಯಕ್ಷ ಡಾ.ಯು.ಕೆ.ರೇವಂಕರ್, ಸಮ್ಮೇಳನ ತಾಂತ್ರಿಕ ಸಮಿತಿಯ ಜೆ.ಶಂಕರ್‌ರಾವ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.