ಭಾರತೀಯರಿಗೆ ಸಂಪರ್ಕ ಭಾಷೆ ಅಗತ್ಯ
Team Udayavani, Jul 15, 2019, 3:04 AM IST
ಬೆಂಗಳೂರು: ಭಾರತೀಯರು ಪರಸ್ಪರ ಸಂವಹನ ಸಾಧಿಸಲು ಸಂಪರ್ಕ ಭಾಷೆಯೊಂದರ ಅಗತ್ಯವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.
ರತ್ನ ಬುಕ್ ಹೌಸ್, ನಗರದ ಹೋಟೆಲ್ ಒಂದರಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಲ್ಲಿಕಾರ್ಜುನ ಹಿರೇಮಠ ಅವರ “ಹವನ’ ಕಾದಂಬರಿಯ ಇಂಗ್ಲಿಷ್ ಆವೃತ್ತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಪರ್ಕ ಭಾಷೆಯೊಂದು ಇಲ್ಲದ ಹಿನ್ನೆಲೆಯಲ್ಲಿ ತಮಿಳು, ತೆಲಗು ಸೇರಿದಂತೆ ಇನ್ನಿತರ ಭಾಷೆಯ ಜನರೊಂದಿಗೆ ಮಾತನಾಡಲು ಆಗುತ್ತಿಲ್ಲ. ಅವರೊಂದಿಗೆ ಸಂವಹನ ನಡೆಸಬೇಕಾದರೆ ಇಂಗ್ಲಿಷ್ ಬೇಕಾಗುತ್ತದೆ. ಆ ಹಿನ್ನೆಲೆಯಲ್ಲಿ ದೇಶದ ಇತರರೊಂದಿಗೆ ಸಂಪರ್ಕ ಸಾಧಿಸಲು, ಸಂಪರ್ಕ ಭಾಷೆಯೊಂದು ಅಗತ್ಯವಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗಿದೆ. ಇದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಆಂಗ್ಲ ಭಾಷೆ ಕಲಿತವರೆಲ್ಲ ಬುದ್ಧಿವಂತರಲ್ಲ ಎಂಬುವುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜತೆಗೆ ಮಾತೃ ಭಾಷೆಯಲ್ಲೇ ಶಿಕ್ಷಣ ಪಡೆದರೆ ಮಕ್ಕಳ ಸೃಜನಶೀಲತೆ ಹೆಚ್ಚಾಗಲಿದೆ ಎಂಬುವುದನ್ನು ಅರಿಯಬೇಕು ಎಂದರು.
ಭಾರತದಲ್ಲಿ ಆಳ್ವಿಕೆ ನಡೆಸಿದ ಆಂಗ್ಲರು ನಮ್ಮಲ್ಲಿ ಕೀಳರಿಮೆ ಬೆಳಸಿದರು. ಹಾಗಾಗಿಯೇ ಬ್ರಿಟಿಷರು ಹೇಳಿದ ಎಲ್ಲದಕ್ಕೂ ನಮ್ಮ ಹಿರಿಯರು ತಲೆದೂಗಿದರು. ನಮ್ಮ ಆಯುರ್ವೇದ ಶ್ರೇಷ್ಠವಾಗಿದ್ದರೂ, ಇಂದಿಗೂ ಕೂಡ ಇಂಗ್ಲಿಷ್ ಔಷಧ ಶ್ರೇಷ್ಠ ಎಂದು ಕೊಂಡಿದ್ದೇವೆ ಎಂದು ಹೇಳಿದರು.
ಮಲ್ಲಿಕಾರ್ಜುನ ಹಿರೇಮಠ ಅವರ ಕನ್ನಡ “ಹವನ’ ಕಾದಂಬರಿ, ಇಂಗ್ಲಿಷ್‌ಗೆ ಅನುವಾದ ಆಗಿರುವುದು ಖುಷಿ ಕೊಟ್ಟಿದೆ. ಎಲ್ಲಾ ಭಾಷೆ ಜನರಿಗೂ ಇದು ತಲುಪಲಿ ಎಂದು ಆಶಿಸಿದರು.
ಹಿರಿಯ ವಿಮರ್ಶಕ ಡಾ.ಸಿ.ಎನ್.ರಾಮಚಂದ್ರನ್ ಮಾತನಾಡಿ, ಹವನ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಸಿಗಬೇಕಾಗಿತ್ತು.ಆದರೆ ಪ್ರಕಾಶಕರು ಮಾಡಿದ ಕೆಲವು ತಪ್ಪುಗಳಿಂದಾಗಿ ಈ ಕಾದಂಬರಿ ಓದುಗರ ಕೈಗೆ ತಲುಪಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಂಗ್ಲ ಭಾಷೆ ಪ್ರಕಾಶರು, ಈ ಕಾದಂಬರಿಗೆ ನ್ಯಾಯ ನೀಡಿದ್ದಾರೆ.ಅನುವಾದಕರು ಕೂಡ ಮೂಲ ವಸ್ತುವಿಗೆ ಚ್ಯುತಿಬಾರದ ಹಾಗೇ ಅನುವಾದ ಮಾಡಿದ್ದಾರೆ ಎಂದು ಪ್ರಶಂಸಿದರು.
ಕಾದಂಬರಿ ಕುರಿತು ಮಾತನಾಡಿದ ಲೇಖಕ ಡಾ.ಟಿ.ಪಿ.ಅಶೋಕ್ , ಹವನ ಕಾದಂಬರಿ ಬಂಜಾರ ಸಮುದಾಯವನ್ನು ಕುರಿತ ಕಥೆ ಹೊಂದಿದ್ದು ಆಧುನೀಕ ಭಾರತದ ತಲ್ಲಣಗಳು ಇದರಲ್ಲಿ ಅಡಗಿವೆ ಎಂದು ಹೇಳಿದರು. ರತ್ನ ಬುಕ್ ಹೌಸ್‌ನ ಶ್ರೀಧರ್ ಬಾಲನ್, ಡಾ.ವಿಜಯ ವಾಮನ್, ಕಾದಂಬರಿಕಾರ ಮಲ್ಲಿಕಾರ್ಜುನ ಹಿರೇಮಠ, ಅನುವಾದಕ ಎಸ್.ಮೋಹನ್ ರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.