ಇಂದಿರಾ ಕ್ಯಾಂಟೀನ್‌ ಗಳಿಗೆ ಉದ್ಘಾಟನೆಯ ಭಾಗ್ಯವಿಲ್ಲ


Team Udayavani, Nov 2, 2017, 4:23 PM IST

627831_thump.jpg

ಬೆಂಗಳೂರು: ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಿಂಗಳು ಕಳೆದಿದೆ. ಆದರೆ, ಜನ ಪ್ರತಿನಿಧಿಗಳ ದಿನಾಂಕ ದೊರೆಯದ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳಿಗೆ ಉದ್ಘಾಟನೆ ಭಾಗ್ಯದೊರಕಿಲ್ಲ.

ನಗರದ ಬಡವರು ಹಾಗೂ ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ತಿಂಡಿ ಒದಗಿಸಲು ಆರಂಭಿಸಿರುವ ಇಂದಿರಾ ಕ್ಯಾಂಟಿನ್‌ ಎಲ್ಲ 198 ವಾರ್ಡ್‌ಗಳಲ್ಲಿ ಆರಂಭಿಸಲು ಮುಖ್ಯಮಂತ್ರಿಗಳು ನೀಡಿದ್ದ ಗಡವು ಮುಗಿದಿದೆ. ಈಗಾಗಲೇ 151 ಕಡೆಗಳಲ್ಲಿ ಕ್ಯಾಂಟೀನ್‌ಗಳು ಉದ್ಘಾಟನೆಗೆ ಸಿದ್ಧವಾಗಿವೆ. ಆದರೆ, ಸಚಿವರು ಹಾಗೂ ಶಾಸಕ ದಿನಾಂಕಗಳು ದೊರೆಯದ ಹಿನ್ನೆಲೆಯಲ್ಲಿ ಕ್ಯಾಂಟೀನ್‌ಗಳಲ್ಲಿ ಆಹಾರ ವಿತರಣೆ ಆರಂಭವಾಗಿಲ್ಲ. 

ನ.1ರಂದು ಎಲ್ಲ 198 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸಲಿವೆ ಎಂಬ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದರಾದರೂ, ಈವರೆಗೆ 198 ವಾಡ್‌ ìಗಳಲ್ಲಿ ಕ್ಯಾಂಟೀನ್‌ಗಳು ಆರಂಭವಾಗಿಲ್ಲ. ಈಗಾಗಲೇ ನಗರದಲ್ಲಿ 151 ಕ್ಯಾಂಟೀನ್‌ಗಳು ಪೂರ್ಣಗೊಂಡಿದ್ದು, 128 ಕ್ಯಾಂಟೀನ್‌ಗಳಲ್ಲಿ ಮಾತ್ರ ಆಹಾರ ವಿತರಣೆಯಾಗುತ್ತಿದೆ.

ಆಹಾರ ವಾಪಸ್‌: ಬಿಬಿಎಂಪಿ ಅಧಿಕಾರಿಗಳು ಉದ್ಘಾಟನೆಯಾಗದಿದ್ದರೂ ಆಹಾರ ವಿತರಣೆ ಆರಂಭಿಸುವಂತೆ ಸ್ಥಳ ಜನಪ್ರತಿನಿಧಿಗಳನ್ನು ಕೋರಿದ್ದಾರೆ. ಇದರೊಂದಿಗೆ ಕೆಲವು ಕಡೆಗಳಿಗೆ ಆಹಾರವನ್ನು ಪೂರೈಕೆ ಮಾಡಿದರೂ ಅಲ್ಲಿನ ಸ್ಥಳೀಯ ನಾಯಕರು ತಮ್ಮ ಪ್ರತಿನಿಧಿಗಳಿಂದ ಕ್ಯಾಂಟೀನ್‌ಗಳನ್ನು ಉದ್ಘಾಟಿಸಬೇಕು ಎಂಬ ಕಾರಣದಿಂದ ಪೂರೈಕೆಯಾದ ಆಹಾರವನ್ನು ವಾಪಸ್‌ ಕಳುಹಿಸಿದ ಘಟನೆಗಳು ನಡೆದಿವೆ. 

ಕಾಮಗಾರಿ ಅಪೂರ್ಣ: ಬಿಬಿಎಂಪಿ 198 ವಾರ್ಡ್‌ಗಳ ಪೈಕಿ 151 ಕಡೆಗಳಲ್ಲಿ ಈಗಾಗಲೇ ಕ್ಯಾಂಟೀನ್‌ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿವೆ. 30 ವಾರ್ಡ್‌ಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, 17 ಕಡೆಗಳಲ್ಲಿ ಈವರೆಗೆ ಕ್ಯಾಂಟೀನ್‌ ನಿರ್ಮಾಣಕ್ಕೆ ಜಾಗ ಸಿಕ್ಕಲ್ಲ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಎರಡು ಬಾರಿ ಗಡುವು ನೀಡಿದರೂ ಈವರೆಗೆ 198 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ ಆರಂಭವಾಗಿಲ್ಲ.

ಖಾಸಗಿ ಜಾಗ ಪಡೆಯಲು ಸಿದ್ಧತೆ: ಕ್ಯಾಂಟೀನ್‌ ನಿರ್ಮಾಣಕ್ಕೆ ಕೆಲವೊಂದು ವಾರ್ಡ್‌ಗಳಲ್ಲಿ ಜಾಗ ದೊರೆಯದ ಹಿನ್ನೆಲೆಯಲ್ಲಿ ಈಗಾಗಲೇ ಬೆಸ್ಕಾಂ, ಆರೋಗ್ಯ, ಶಿಕ್ಷಣ, ಸಾರಿಗೆ, ಜಲಮಂಡಳಿ, ಬಿಡಿಎ, ಪೊಲೀಸ್‌ ಸೇರಿದಂತೆ ವಿವಿಧ ಇಲಾಖೆಗಳಿಂದ ಜಾಗ ಪಡೆಯಲಾಗಿದೆ. ಆ ನಡುವೆಯೂ ಜಾಗ ದೊರೆಯದ ಹಿನ್ನೆಲೆಯಲ್ಲಿ ಕೆಲವೊಂದು ಕಡೆಗಳಲ್ಲಿ ಖಾಸಗಿ ಜಾಗವನ್ನು ಪಡೆಯಲು ತೀರ್ಮಾನಿಸಲಾಗಿದೆ.

ರಾಜ್ಯೋತ್ಸವಕ್ಕೆ ಹಲವು ಕ್ಯಾಂಟೀನ್‌ಗಳು ಉದ್ಘಾಟನೆ: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ಕಾಮಗಾರಿ ಪೂರ್ಣ ಗೊಂಡಿರುವ ಹಲವು ವಾರ್ಡ್‌ಗಳಲ್ಲಿನ ಇಂದಿರಾ ಕ್ಯಾಂಟೀನ್‌ಗಳನ್ನು ಸಚಿವರು ಹಾಗೂ ಶಾಸಕರು ಬುಧವಾರ ಉದ್ಘಾಟಿಸಿದರು. ಶಂಕರಾಂಬರಿನಗರ, ಸುಧಾಮನಗರ, ಕಾಮಾಕ್ಷಿನಗರ, ಮಾರುತಿ ಸೇವಾ 
ನಗರ, ಅರಮನೆ ನಗರ, ಕೋನೆನ ಅಗ್ರಹಾರ ಸೇರಿದಂತೆ ಹಲವು ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು ಉದ್ಘಾಟನೆಗೊಂಡಿದೆ.

ಟಾಪ್ ನ್ಯೂಸ್

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.