ಇಂದಿರಾ ಕ್ಯಾಂಟೀನ್ ಅಡುಗೆ ಮನೆಗೆ ಬೀಗ
Team Udayavani, Feb 19, 2020, 3:06 AM IST
ಬೆಂಗಳೂರು: ನಾಯಂಡಹಳ್ಳಿಯಲ್ಲಿ ರುವ ಇಂದಿರಾ ಕ್ಯಾಂಟೀನ್ ಅಡುಗೆ ಕೋಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಇಂದಿರಾ ಕ್ಯಾಂಟೀನ್ ಅಡುಗೆ ಕೋಣೆ ಜಾಗದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣ ಮಾಡಲು ವಸತಿ ಸಚಿವ ವಿ.ಸೋಮಣ್ಣ ಮುಂದಾಗಿದ್ದಾರೆ.
ಈ ಸಂಬಂಧ ಸುದ್ದಿಗಾರರ ಜತೆ ಮಾತ ನಾಡಿದ ಮೇಯರ್ ಎಂ.ಗೌತಮ್‌ಕುಮಾರ್, ಇಂದಿರಾ ಕ್ಯಾಂಟೀನ್ ಅಡುಗೆ ಮಾಡುವುದಕ್ಕೆ ಈಗ ನಿಗದಿಯಾಗಿರುವ ಪ್ರದೇಶ ಕೊಳಚೆ ನಿರ್ಮೂಲನ ಮಂಡಳಿಗೆ ಒಳಪಟ್ಟಿದೆ. ನಾಯಂಡಹಳ್ಳಿ ವ್ಯಾಪ್ತಿಯಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಿಸುವಂತೆ ಸಾರ್ವಜನಿಕರು ಕೇಳಿದ್ದು, ಸಚಿವರು ಸ್ಪಂದಿಸಿದ್ದಾರೆ. ನಾಯಂಡಹಳ್ಳಿಯಲ್ಲಿರುವ ಅಡುಗೆ ಕೋಣೆಗೆ ಪರ್ಯ ಯವಾಗಿ 2 ತಿಂಗಳ ಹಿಂದೆ ದೀಪಾಂಜಲಿ ನಗರದಲ್ಲಿ ಬದಲಿ ಕಿಚನ್ ನಿರ್ಮಾಣ ಮಾಡಲಾಗಿದೆ ಎಂದರು.
ಚೆಫ್ಟಾಕ್‌ನ ಗುತ್ತಿಗೆದಾರರಾದ ಗೋವಿಂದ ಪೂಜಾರಿ, ಒಪ್ಪಂದದ ಪ್ರಕಾರ ಹದಿನೈದು ಅಡುಗೆ ಮನೆ ಕೊಡುತ್ತೇವೆ ಎಂದಿದ್ದರು. ಆದರೆ, ನಂತರ 8 ಅಡುಗೆ ಕೋಣೆ ನಿರ್ಮಾಣವಾದವು. ಈಗ ಅದ ರಲ್ಲೂ ಒಂದು ತೆರವು ಮಾಡುತ್ತಿರುವುದರಿಂದ ಸಮಸ್ಯೆ ಆಗಲಿದೆ. ಸದ್ಯ ನಾಯಂಡ ಹಳ್ಳಿಗೆ ಪರ್ಯಾಯವಾಗಿ ಯಾವುದೇ ವ್ಯವಸ್ಥೆ ಮಾಡಿಲ್ಲ ಎಂದು ದೂರಿದರು.
ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್‌ಗೆ ಆಹಾರ ಪೂರೈಕೆ ಮಾಡಲು ಕೊಳಚೆ ನಿರ್ಮೂಲನ ಮಂಡಳಿ ಜಾಗ ದಲ್ಲಿ ಅಂದಾಜು 1ಕೋಟಿ ರೂ. ವೆಚ್ಚದಲ್ಲಿ ಅಡುಗೆ ಮನೆ ನಿರ್ಮಾಣ ಮಾಡಲಾಗಿತ್ತು. ಇಲ್ಲಿಂದ 15 ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡಲಾಗುತ್ತಿತ್ತು. ಸೋಮವಾರ ಅಡುಗೆ ಕೋಣೆಗೆ ಬೀಗ ಹಾಕಲಾಗಿದ್ದು, ದೀಪಾಂಜಲಿ ನಗರದಲ್ಲಿರುವ ಕ್ಯಾಂಟೀನ್ ಅಡುಗೆ ಮನೆಯಿಂದ ಪಶ್ಚಿಮ ವಲಯದ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.