ಇಂದಿರಾ ಕ್ಯಾಂಟೀನ್ಗೆ ಇನ್ನೊಂದೆಡೆ ವಿರೋಧ
Team Udayavani, Jul 16, 2017, 11:23 AM IST
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಇಂದಿರಾ ಕ್ಯಾಂಟಿನ್’ ಯೋಜನೆಗೆ ಹಲವು ವಾರ್ಡ್ಗಳಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಬೆನ್ನೆಲ್ಲೆ ಯಶವಂತಪುರ ವಾರ್ಡ್ನಲ್ಲಿ ಕ್ಯಾಂಟಿನ್ ನಿರ್ಮಾಣಕ್ಕೆ ಗುರುತಿಸಿರುವ ಜಾಗಕ್ಕೂ ವಿರೋಧ ವ್ಯಕ್ತವಾಗಿದೆ.
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣವಾದ ಮೈಸೂರು ಲ್ಯಾಂಪ್ಸ್ ಕಾರ್ಖಾನೆಯನ್ನು 2003ರಲ್ಲಿ ಮುಚ್ಚಲಾಗಿದೆ. ಆದರೆ, ಸಮರ್ಪಕವಾಗಿ ಪರಿಹಾರ ನೀಡಿಲ್ಲ ಎಂದು ನೌಕರರು ನ್ಯಾಯಾಲಯದ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಯ ಜಾಗ ಮಾರಾಟ ಮಾಡುವಂತಿಲ್ಲ ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ. ಆದರೂ, ಬಿಬಿಎಂಪಿ ಯಾರ ಅನುಮತಿಯನ್ನೂ ಪಡೆಯದೆ ಕಾರ್ಖಾನೆಯ ಜಾಗದಲ್ಲಿ ಕ್ಯಾಂಟಿನ್ ನಿರ್ಮಿಸುತ್ತಿದೆ ಎಂದು ಮಾಜಿ ನೌಕರರು ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಖಾನೆಯ ಮಾಜಿ ನೌಕರ ನರಸಿಂಹ ಮೂರ್ತಿ, ಕಾರ್ಮಿಕರು ಹಾಗೂ ಕಾರ್ಖಾನೆಯ ನಡುವಿನ ವ್ಯಾಜ್ಯ ಇತ್ಯರ್ಥವಾಗುವವರೆ ಜಾಗವನ್ನು ಮಾರಾಟ ಅಥವಾ ಬೇರೆಯವರಿಗೆ ಗುತ್ತಿಗೆ ನೀಡಬಾರದು ಎಂದು ನ್ಯಾಯಾಲಯ ಸ್ಪಷ್ಟವಾಗಿ ಆದೇಶಿಸಿದೆ. ಆದರೆ, ಪಾಲಿಕೆಯ ಅಧಿಕಾರಿಗಳು ಯಾರನ್ನೂ ಸಂಪರ್ಕಿಸದೆ ಏಕಾಏಕಿ ಕ್ಯಾಂಟಿನ್ ನಿರ್ಮಿಸಿದ್ದಾರೆ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.