ಆಂಧ್ರ ಪ್ರದೇಶಕ್ಕೆ ಪ್ರೇರಣೆಯಾದ ಇಂದಿರಾ ಕ್ಯಾಂಟೀನ್
Team Udayavani, Nov 5, 2017, 11:18 AM IST
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಮಾದರಿಯ ಯೋಜನೆಯನ್ನು ಜಾರಿಗೊಳಿಸಲು ಆಂಧ್ರಪ್ರದೇಶ ಮುಂದಾಗಿದ್ದು, ಬಿಬಿಎಂಪಿ ಅಧಿಕಾರಿಗಳಿಂದ ಇಂದಿರಾ ಕ್ಯಾಂಟೀನ್ ಯೋಜನೆಯ ಸಂಪೂರ್ಣ ಮಾಹಿತಿ ಪಡೆದಿದೆ.
ಇಂದಿರಾ ಕ್ಯಾಂಟೀನ್‌ಗೆ ಸಿಲಿಕಾನ್ ಸಿಟಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕ ಬೆನ್ನಲ್ಲೇ ಅದೇ ಮಾದರಿಯ ಯೋಜನೆ ಜಾರಿಗೆ ಆಂಧ್ರ ಸರ್ಕಾರ ಆಸಕ್ತಿ ತೋರಿದೆ. 2016ರಲ್ಲಿ ಆಂಧ್ರಪ್ರದೇಶ ಸರ್ಕಾರ ಕಡಿಮೆ ದರದಲ್ಲಿ ಜನರಿಗೆ ಆಹಾರ ಪೂರೈಕೆ ಮಾಡುವ ಯೋಜನೆ ಜಾರಿಗೊಳಿಸಲು ಮುಂದಾಗಿತ್ತಾದರೂ, ಅದು ಕಾರಣಾಂತರಗಳಿಂದ ಯಶಸ್ವಿಯಾಗಿರಲಿಲ್ಲ.
ಇದೀಗ ಆಂಧ್ರಪ್ರದೇಶ ಸರ್ಕಾರದ ಪೌರಾಡಳಿತ ನಿರ್ದೇಶನಾಲಯದ ಕನ್ನಬಾಬು ನೇತೃತ್ವದಲ್ಲಿ ಅನಂತಪುರ, ಕರ್ನೂಲು ಮತ್ತು ಚಿತ್ತೂರು ಜಿಲ್ಲೆಗಳ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಯೋಜನೆಯ ಕುರಿತು ವಿಶೇಷ ಆಯುಕ್ತ ಮನೋಜ್ ರಾಜನ್ ಅವರಿಂದ ಮಾಹಿತಿ ಪಡೆದಿದ್ದಾರೆ.
ತಿಂಗಳಲ್ಲಿ ಮೊಬೈಲ್ ಕ್ಯಾಂಟೀನ್ ವಿನ್ಯಾಸ ಸಿದ್ಧ
ಬಿಬಿಎಂಪಿಯ 198 ವಾರ್ಡ್‌ಗಳ ಪೈಕಿ 18 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಸ್ಥಳ ದೊರೆಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮೊಬೈಲ್ ಕ್ಯಾಂಟೀನ್ ಆರಂಭಿಸುವಂತೆ ಸೂಚಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಮೊಬೈಲ್ ಕ್ಯಾಂಟೀನ್ ವಿನ್ಯಾಸ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಒಂದು ತಿಂಗಳೊಳಗೆ ಮೊಬೈಲ್ ಕ್ಯಾಂಟೀನ್ ವಿನ್ಯಾಸ ಸಿದ್ಧವಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
ಆಂಧ್ರಪ್ರದೇಶದಲ್ಲೂ ಕಡಿಮೆ ದರದಲ್ಲಿ ಜನರಿಗೆ ಆಹಾರ ನೀಡುವ ಯೋಜನೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲಿಸಿದ್ದೇವೆ. ಕ್ಯಾಂಟೀನ್‌ಗಳು ಉತ್ತಮವಾಗಿವೆ.
-ಕನ್ನಬಾಬು, ಆಂಧ್ರ ಪ್ರದೇಶ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.