ನೂತನ ಯೋಗ ಕೇಂದ್ರಕ್ಕೆ ಚಾಲನೆ
Team Udayavani, Dec 4, 2017, 12:37 PM IST
ಕೆಂಗೇರಿ: ನಾಗರಿಕರ ಆರೋಗ್ಯ ಸುಧಾರಣೆ ಹಾಗೂ ಮಾನಸಿಕ ಒತ್ತಡ ನಿವಾರಣೆ ಉದ್ದೇಶದಿಂದ ಬಯಲು ವ್ಯಾಯಾಮ ಕೇಂದ್ರ, ಯೋಗ ಕೇಂದ್ರ ಹಾಗೂ ಶುದ್ಧ ಕುಡಿಯುವ ನೀರು ಘಟಕ ಸ್ಥಾಪಿಸುತ್ತಿರುವುದಾಗಿ ಶಾಸಕ ಮುನಿರತ್ನ ತಿಳಿಸಿದರು.
ರಾಜರಾಜೇಶ್ವರಿ ನಗರದ ಬಂಗಾರಪ್ಪನಗರ, ಗಟ್ಟಿಗೆರೆ, ನಿಸರ್ಗ ಬಡಾವಣೆ, ಚನ್ನಸಂದ್ರ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಚರಂಡಿ, ಸಿಮೆಂಟ್ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿ, ಬಿಇಎಂಎಲ್ ಬಡಾವಣೆಯಲ್ಲಿ ನಿರ್ಮಿಸಿರುವ ಯೋಗ ಕೇಂದ್ರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
2018ರ ಮಾರ್ಚ್ನಲ್ಲಿ 16 ವ್ಯಾಯಾಮ ಕೇಂದ್ರ, 16 ಉದ್ಯಾನಗಳ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳಲಿದೆ. ಪಾಲಿಕೆಯ ಬಿಜೆಪಿ ಸದಸ್ಯರ ಜತೆಗೂಡಿ ರಾಜರಾಜೇಶ್ವರಿ ನಗರ ಪಾಲಿಕೆಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪೈಕಿ ಹಲವು ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಗಳು ಏಪ್ರಿಲ್ನಲ್ಲಿ ಮುಗಿಯಲಿವೆ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಮಾತನಾಡಿದರು. ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜ್ಕುಮಾರ್, ಬಿಬಿಎಂಪಿ ಸದಸ್ಯೆ ನಳಿನಿ ಎಂ.ಮಂಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಗೌಡ, ಕೆಎಸ್ಆರ್ಟಿಸಿ ಸದಸ್ಯ ಎಂ.ತಿಬ್ಬೇಗೌಡ, ವಾರ್ಡ್ ಅಧ್ಯಕ್ಷ ವಿ.ಸಿ.ಚಂದ್ರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.