ಯುವತಿಯನ್ನು ವಿವಸ್ತ್ರಗೊಳಿಸಿ ಅಮಾನುಷ ವರ್ತನೆ

Team Udayavani, Jan 21, 2017, 11:54 AM IST

harassment.jpg

ಬೆಂಗಳೂರು: ಯುವತಿಯೊಬ್ಬಳನ್ನು ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿರುವ ಘಟನೆ ನಗರದಲ್ಲಿ ನಡೆದಿದೆ. ಜತೆಗೆ ಆಕೆಯ ತಾಯಿಯ ಮೇಲೂ ಹಲ್ಲೆ ನಡೆಸಲಾಗಿದೆ. ಯುವತಿ ಹಾಗೂ ಆಕೆಯ ತಾಯಿ ಅಪ್ರಾಪ್ತ ವಯಸ್ಸಿನ ಪ್ರೇಮಿಗಳು ಓಡಿ ಹೋಗಲು ಸಹಕರಿಸಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳೆಯರು ಸೇರಿ ಐವರನ್ನು ನಂದಿನಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಜನವರಿ 17ರಂದು ಪ್ರಕರಣ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ತಸೀನಾ ರೆಹಮಾನ್‌, ಈಕೆಯ ಸಹೋದರರಾದ ಇಮ್ರಾನ್‌ ಪಾಷ, ಜಬ್ಬಿವುಲ್ಲಾ, ಈತನ ಪತ್ನಿ ಯಾಸ್ಮಿನ್‌ ತಾಜ್‌ ಮತ್ತು ನೆರೆ ಮನೆ ನಿವಾಸಿ ಇಂದಿರಮ್ಮ ಬಂಧಿತರು. ಯುವಕನೊಬ್ಬ ಅಪ್ರಾಪ್ತೆಯನ್ನು ಪ್ರೀತಿಸಿ ಆಕೆಯ ಜತೆ ಓಡಿ ಹೋಗಿದ್ದ. ಇದಕ್ಕೆ ಯುವತಿ ಮತ್ತು ಆಕೆಯ ತಾಯಿ ಸಹಕಾರ ನೀಡಿದ್ದರು ಎಂದು ಅಪ್ರಾಪ್ತೆಯ ಸಂಬಂಧಿಕರು ಈ ಕೃತ್ಯ ಎಸಗಿದ್ದಾರೆ. ಅಪ್ರಾಪ್ತೆಯನ್ನು ಕರೆದು ಕೊಂಡು ಹೋಗಿರುವ ಅಸ್ಸಾಂ ಮೂಲದ ಶೌಕತ್‌ನನ್ನು ತಡರಾತ್ರಿ ಕೆ.ಆರ್‌. ಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ?: ಕೆ.ಆರ್‌.ಪುರ ನಿವಾಸಿ ಅಸ್ಸಾಂ ಮೂಲದ ಶೌಕತ್‌, ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಸ್ವೀಪರ್‌ ಆಗಿ ಕೆಲಸ ಮಾಡುತ್ತಿದ್ದ. ಇದೇ ಆಸ್ಪತ್ರೆಯಲ್ಲಿ ಸಂತ್ರಸ್ತ ಮಹಿಳೆ ಬಾನು (ಹೆಸರು ಬದಲಾಯಿಸಲಾಗಿದೆ) ಕೆಲಸ ಮಾಡುತ್ತಿದ್ದರು. ಒಂದೇ ಕಡೆ ಕೆಲಸ ಮಾಡುತ್ತಿದ್ದರಿಂದ ಶೌಕತ್‌, ಆಗ್ಗಾಗ್ಗೆ ಬಾನು ಮನೆಗೆ ಬಂದು ಹೋಗುತ್ತಿದ್ದ. ಆ ಸಂದರ್ಭದಲ್ಲಿ ನೆರೆ ಮನೆಯ ಅಪ್ರಾಪ್ತೆ ಜತೆ ಸ್ನೇಹವಾಗಿ ಅದು ಪ್ರೀತಿಗೆ ತಿರುಗಿತ್ತು. ಜ.15ರಂದು ಶೌಕತ್‌ ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಕರೆದುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಬಾಲಕಿ ಪೋಷಕರು ನಂದಿನಿ ಲೇಔಟ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು.

ಶೌಕತ್‌, ಬಾನು ಮನೆಗೆ ಆಗ್ಗಾಗ್ಗೆ ಬಂದು ಹೋಗುತ್ತಿದ್ದನ್ನು ನೋಡಿದ್ದ ಬಾಲಕಿ ಪೋಷಕರು ಶೌಕತ್‌ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಬಾನು ಅವರ ಮಗಳು, ಶೌಕತ್‌ ಮತ್ತು ಬಾಲಕಿಯ ಪ್ರೀತಿಯ ವಿಚಾರ ಬಾಯಿ ಬಿಟ್ಟಿದ್ದಾಳೆ. ಆಗ ಬಾಲಕಿ ಪೋಷಕರು ಶೌಕತ್‌ ಮನೆ ತೋರಿಸುವಂತೆ ಕೇಳಿದ್ದಾರೆ. ಅವರ ಮನೆ ಟಿನ್‌ ಫ್ಯಾಕ್ಟರಿ ಬಳಿ ಇರುವುದಾಗಿ ಯುವತಿ ಹೇಳಿದ್ದಾಳೆ.

ಆಗ ಮನೆ ತೋರಿಸುವಂತೆ ಜ.16ರಂದು ಸಂಜೆ ಯುವತಿಯನ್ನು ಬಾಲಕಿ ಸಂಬಂಧಿಕರು ಕಾರಿನಲ್ಲಿ ಕೆ.ಆರ್‌.ಪುರದ ಟಿನ್‌ ಫ್ಯಾಕ್ಟರಿ ಸಮೀಪ ಕರೆದುಕೊಂಡು ಹೋಗಿದ್ದಾರೆ. ಆರೋಪಿ ಮನೆ ಬಳಿ ತೆರಳಿ ತಪಾಸಣೆ ನಡೆಸಿದ್ದು, ಆರೋಪಿ ಶೌಕತ್‌ ಮನೆ ಖಾಲಿ ಮಾಡಿಕೊಂಡಿರುವ ವಿಷಯ ತಿಳಿದಿದೆ. ಬಳಿಕ ತಡ ರಾತ್ರಿ ಯುವತಿ ಮತ್ತು ತಾಯಿಯನ್ನು ಬಾಲಕಿ ಪೋಷಕರು ಮನೆಗೆ ಕರೆ ತಂದು ಬಿಟ್ಟಿದ್ದರು. 

ಮರು ದಿನ ಬೆಳಗ್ಗೆ ಜ.17ರಂದು ಬಾಲಕಿಯ ಕುಟುಂಬದವರು ಬಾನು ಬಳಿ ಬಂದು ಆರೋಪಿಯ ಬಗ್ಗೆ ಮಾಹಿತಿ ಕೇಳಿದ್ದಾರೆ. ಆಗ ನಮಗೆ ಏನೂ ತಿಳಿದಿಲ್ಲ ಎಂದು ಬಾನು ಪುತ್ರಿ ಹೇಳಿದ್ದಾಳೆ. ಇದರಿಂದ ಕೋಪಗೊಂಡ ಅವರು “ನಮ್ಮ ಮನೆಯ ಹುಡುಗಿಯನ್ನು ಶೌಕತ್‌ ಕರೆದೊಯ್ಯಲು ನೀವು ನೆರವು ನೀಡಿದ್ದೀರಿ’ ಎಂದು ತಾಯಿ ಮತ್ತು ಮಗಳ ಮೇಲೆ ಹಲ್ಲೆ ನಡೆಸಿದರು. ನಂತರ ಯುವತಿಯನ್ನು ವಿವಸ್ತ್ರಗೊಳಿಸಿ ಆಕೆಯನ್ನು ತೀವ್ರವಾಗಿ ಥಳಿಸಿ ಆಕೆಯ ಗುಪ್ತಾಂಗಕ್ಕೆ ಮೆಣಸಿನ ಪುಡಿ ಎರಚಿ ವಿಕೃತವಾಗಿ ವರ್ತಿಸಿದರು ಎಂದು ಹೇಳಲಾಗಿದೆ.

ಈ ಬಗ್ಗೆ ತಾಯಿ ಮತ್ತು ಮಗಳು ಪೊಲೀಸರಿಗೆ ದೂರು ನೀಡಿದ್ದು, ದೂರಿ ನಲ್ಲಿ ಅಪ್ರಾಪ್ತೆ ಕುಟುಂಬ ಸದಸ್ಯರು ನೀಡಿದ ಹಿಂಸೆಯನ್ನು ತಿಳಿಸಿದ್ದಾರೆ. ತಾಯಿ ಮತ್ತು ಮಗಳು ನೀಡಿದ ದೂರಿನ ಮೇರೆಗೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್‌ 354-ಲೈಂಗಿಕ ದೌರ್ಜನ್ಯ, 506-ಜೀವ ಬೆದರಿಕೆ, 367-ಅಪಹರಣ, 327-ಹಲ್ಲೆ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಕರೆದುಕೊಂಡು ಹೋಗಿರುವ ಅಸ್ಸಾಂ ಮೂಲದ ಯುವಕನ ವಿರುದ್ಧ ಅಪಹ ರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೌಕತ್‌ ಬಂಧನ, ಬಾಲಕಿ ರಕ್ಷಣೆ
15 ವರ್ಷದ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ ಆರೋಪಿ ಶೌಕತ್‌ನನ್ನು ನಂದಿನಿ ಲೇಔಟ್‌ ಠಾಣೆ ಪೊಲೀಸರು ಕೆ.ಆರ್‌.ಪುರದಲ್ಲಿ ಶುಕ್ರವಾರ ತಡ ರಾತ್ರಿ ಬಂಧಿಸಿದ್ದಾರೆ. ಈತನ ಜತೆಗಿದ್ದ ಬಾಲಕಿಯನ್ನು ರಕ್ಷಿಸಿ ಪೋಷಕರು ಸುಪರ್ದಿಗೆ ನೀಡಲಾಗಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಅಪ್ರಾಪ್ತೆಯನ್ನು ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಪೊಕೋÕ ಮತ್ತು ಅಪಹರಣ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

8(1

Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಬಸ್‌ ಚೇಸ್‌ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ

Bengaluru: ಬಸ್‌ ಚೇಸ್‌ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.