ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ
Team Udayavani, Oct 27, 2017, 11:03 AM IST
ಬೆಂಗಳೂರು: 200 ಕೋಟಿ ರೂ. ವೆಚ್ಚ ಮಾಡಿ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಮತ್ತು ಜಾತಿವಾರು ಜನಸಂಖ್ಯೆ ಕಲೆ ಹಾಕಲಾಗಿದೆ. ಆದರೆ ಈ ವರದಿ ಬಹಿರಂಗಪಡಿಸದೆ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಆರೋಪಿಸಿದರು.
ವಸಂತ ನಗರದ ದೇವರಾಜ ಅರಸು ಭವನದಲ್ಲಿ ಗುರುವಾರ ದಿ.ದೇವರಾಜ ಅರಸು ಸಂಶೋಧನಾ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಒಳ ವರ್ಗೀಕರಣ ಮತ್ತು ಸಾಮಾಜಿಕ ನ್ಯಾಯ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿ ವರ್ಷ ಕಳೆಯುತ್ತಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ಈ ವರದಿಯನ್ನು ಬಹಿರಂಗ ಮಾಡಬೇಕು. ಹಿಂದುಳಿದ ವರ್ಗಗಳನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ ಎಂದರು.
ಸಮೀಕ್ಷೆಯ ವರದಿಯನ್ನು ಸುಪ್ರೀಂಕೋರ್ಟ್ ಹಾಗೂ ನಿವೃತ್ತ ನ್ಯಾಯಮೂರ್ತಿ ರೋಹಿಣಿ ಆಯೋಗ ಕೇಳುತ್ತಿದೆ. ರಾಜ್ಯ ಸರ್ಕಾರ ಈಗ ಒದಗಿಸದೇ ಇದ್ದರೆ ರಾಜ್ಯದ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಅನ್ಯಾಯವಾಗಲಿದೆ. ಐಐಎಸ್ಸಿ, ಐಐಎಂ, ಐಐಟಿಗಳಲ್ಲಿ ಸಿಗಬೇಕಾದಷ್ಟು ಸೀಟುಗಳಿಂದ ವಂಚಿತರಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಇದೇ ವಿಳಂಬ ಧೋರಣೆ ಅನುಸರಿಸಿದರೆ ಸಾಮಾಜಿಕ ನ್ಯಾಯದ ಬದಲಿಗೆ ಸಾಮಾಜಿಕ ಅನ್ಯಾಯವಾಗಲಿದೆ ಎಂಬ ಎಚ್ಚರಿಕೆ ನೀಡಿದರು.
ಹಿಂದುಳಿದ ವರ್ಗಗಳ ಒಳ ವರ್ಗೀಕರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ನಿರ್ಧಾರ. ಕೇಂದ್ರದ ಮೀಸಲಾತಿಯಲ್ಲಿ ಬ್ರಾಹ್ಮಣರು, ಲಿಂಗಾಯತರು, ಮುಸಲ್ಮಾನರು ಸೇರಿ 190 ಹಿಂದುಳಿದ ಜಾತಿಗಳು ಬರುತ್ತವೆ. ಇವರೆಲ್ಲರೂ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕು. ಇತರ ಹಿಂದುಳಿದ ವರ್ಗಗಳ(ಒಬಿಸಿ) ಒಳ ವರ್ಗೀಕರಣದ ಬಗ್ಗೆ ಪರಿಶೀಲನೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ನಿಡುಮಾಮಿಡಿ ಮಹಾಸಂಸ್ಥಾನದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿಯಲ್ಲಿ ಸಣ್ಣ ಪುಟ್ಟ ಲೋಪದೋಷ ಇರಬಹುದು. ಈ ಕಾರಣಕ್ಕಾಗಿಯೇ ಸಂಪೂರ್ಣವಾಗಿ ಅದನ್ನು ವಿರೋಧಿಸುವುದು ಸರಿಯಲ್ಲ. ವಿರೋಧಿಸುವವರ ನಿಲುವನ್ನು ಸರ್ಕಾರ ಆಲಿಸಬೇಕು. ನ್ಯಾಯಾಲಯಗಳು ಪೂರ್ವಾನ್ವಯ ಆಗುವಂತೆ ಆದೇಶ ನೀಡುವುದು ಸರಿಯಲ್ಲ. ಭವಿಷ್ಯದ ಉನ್ನತಿಗಾಗಿ ಆದೇಶ ಮಾಡಬೇಕು ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಡಾ.ಎನ್.ವಿ.ಪ್ರಸಾದ್, ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ವಿ.ನರಸಿಂಹಯ್ಯ, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಜೆ.ಶ್ರೀನಿವಾಸನ್, ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕೆ.ಎನ್.ಲಿಂಗಪ್ಪ, ಮಾಜಿ ಸದಸ್ಯರಾದ ಎಸ್.ಕೆ.ಅಮಿನ್, ಎಂ.ಎಸ್.ಹಳವರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.