ಇನ್ನೋವೇಟ್ ಕರ್ನಾಟಕ ಲಾಂಛನ ಬಿಡುಗಡೆ
Team Udayavani, Mar 2, 2018, 12:00 PM IST
ಬೆಂಗಳೂರು: ಮಾಹಿತಿ ತಂತ್ರಜ್ಞಾನಕ್ಕೆ ಸೀಮಿತವಾಗಿರುವ ಐಟಿ-ಬಿಟಿ ಇಲಾಖೆ ಈಗ ತನ್ನ ಚೌಕಟ್ಟಿನಿಂದ ಹೊರಬಂದು “ಆವಿಷ್ಕಾರ ಮತ್ತು ತಂತ್ರಜ್ಞಾನ’ದ ರೂಪದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.
ನಗರದ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಗುರುವಾರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಇನ್ನೋವೇಟ್ ಕರ್ನಾಟಕ’ ಲಾಂಛನ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ “ಇನ್ನೋವೇಷನ್ ಆ್ಯಂಡ್ ಟೆಕ್ನಾಲಜಿ’ (ಆವಿಷ್ಕಾರ ಮತ್ತು ತಂತ್ರಜ್ಞಾನ) ಎಂಬ ಹೊಸ ಅವತಾರದಲ್ಲಿ ಇನ್ಮುಂದೆ ಈ ಇಲಾಖೆ ಕಾರ್ಯನಿರ್ವಹಿಸಲಿದೆ.
ಈ ಹೊಸ ಅವತಾರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಹೊಸ ತಂತ್ರಜ್ಞಾನಗಳಿಗೆ ಸಂಬಂಧಿಸಿದ ವಿಶೇಷ ಕೌಶಲ್ಯ ತರಬೇತಿ, ನಾಲೇಡ್ಜ್ ಸೊಸೈಟಿ ನಿರ್ಮಾಣ, ನವೋದ್ಯಮಿಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಮಾರ್ಗದರ್ಶನ, ಉದ್ಯೋಗ ಸೃಷ್ಟಿ ಸೇರಿ ಹಲವು ಕ್ಷೇತ್ರಗಳ ಮೇಲೆ ಹೆಚ್ಚಿನ ಬೆಳಕುಚೆಲ್ಲಲಿದೆ ಎಂದು ಹೇಳಿದರು. ಐಟಿ-ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
MUST WATCH
ಹೊಸ ಸೇರ್ಪಡೆ
Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ
US Result: ಡೊನಾಲ್ಡ್ Trumpಗೆ ಮತ್ತೊಮ್ಮೆ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ
ಬಸ್- ಸ್ಕೂಟರ್ ಢಿಕ್ಕಿ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಸವಾರ ಕೂಡ ಮೃತ್ಯು
Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ
Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.