ವೇತನ ತಾರತಮ್ಯ ಸರಿಪಡಿಸಲು ಒತ್ತಾಯ
Team Udayavani, Mar 21, 2018, 12:37 PM IST
ಬೆಂಗಳೂರು: ಆರನೇ ವೇತನ ಆಯೋಗದಲ್ಲಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಆಗಿರುವ ಲೋಪಗಳನ್ನು ಸರಿಪಡಿಸಿ, ಮೌಲ್ಯಮಾಪನ ಬಹಿಷ್ಕಾರಕ್ಕೆ ಅವಕಾಶವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ರಮೇಶ್ ಬಾಬು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಪತ್ರ ಬರೆದಿದ್ದಾರೆ.
ಬೇಡಿಕೆಗಳ ಈಡೇರಿಕೆಗಾಗಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹಲವು ಬಾರಿ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಸರ್ಕಾರ ಕೇವಲ ಒಂದು ವೇತನ ಬಡ್ತಿ ಮಂಜೂರು ಮಾಡಿ ಮತ್ತೂಂದು ವೇತನ ಬಡ್ತಿಯನ್ನು ಸ್ವಲ್ಪ ದಿನಗಳ ಬಳಿಕ ನೀಡುವುದಾಗಿ ಭರವಸೆ ಕೊಟ್ಟಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಆರನೇ ವೇತನ ಆಯೋಗದ ಮೂಲಕವೂ ವೇತನ ತಾರತಮ್ಯ ನಿವಾರಣೆಯಾಗಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಪದವಿ ಪೂರ್ವ ಕಾಲೇಜು ಪರೀಕ್ಷೆ ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಆದ್ದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ವೇತನ ತಾರತಮ್ಯ ನಿವಾರಿಸುವ ಮೂಲಕ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಮೌಲ್ಯಮಾಪನ ಬಹಿಷ್ಕಾರಕ್ಕೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ
Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ
Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು
ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
Naxal Surrender: ನಕ್ಸಲ್ ಶರಣಾಗತಿ ಪೂರ್ವಯೋಜಿತ ಸ್ಟೇಜ್ ಶೋ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.