ಕೆಎಸ್‌ಆರ್‌ಟಿಸಿ ನಿಲ್ದಾಣಗಳಲ್ಲಿ ತಪಾಸಣೆ
Team Udayavani, Aug 18, 2019, 9:19 AM IST
ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಭಯೋತ್ಪಾದಕರು ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲ ಪ್ರಮುಖ ನಿಲ್ದಾಣಗಳಲ್ಲಿ ಹಾಗೂ ಬಸ್‌ಗಳಲ್ಲಿ ಶನಿವಾರ ತೀವ್ರ ತಪಾಸಣೆ ನಡೆಸಲಾಯಿತು. ಅಲ್ಲದೆ, ಭದ್ರತೆಗೆ ಸಂಬಂಧಿಸಿದಂತೆ ಹಲವು ಮುಂಜಾಗ್ರತಾ ಕ್ರಮಗಳಿಗೆ ಸೂಚಿಸಲಾಯಿತು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ನಗರಗಳಿಗೆ ಕಾರ್ಯಾಚರಣೆ ಮಾಡುವ ಫ್ಲೈಬಸ್‌ಗಳು, ಪ್ರತಿಷ್ಠಿತ ವೋಲ್ವೊ, ಮಲ್ಟಿ ಆಕ್ಸೆಲ್, ಅಂಬಾರಿ ಮುಂತಾದ ಬಸ್‌ಗಳಲ್ಲಿ ತೆಗೆದುಕೊಂಡು ಹೋಗುವ ಲಗೇಜುಗಳನ್ನು ಕೂಲಂಕಷವಾಗಿ ತನಿಖೆಗೊಳಪಡಿಸಬೇಕು. ಆಯಾ ನಿಲ್ದಾಣ/ ಘಟಕಗಳ ವ್ಯಾಪ್ತಿಯಲ್ಲಿನ ಸಿಸಿ ಕ್ಯಾಮೆರಾಗಳನ್ನು ಸುಸ್ಥಿಯಲ್ಲಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.
ಅಲ್ಲದೆ, ವಾಹನ ನಿಲ್ದಾಣಗಳಲ್ಲಿ ಸಾರ್ವಜನಿಕರ ಗಮನಕ್ಕೆ ಧ್ವನಿವರ್ಧಕದ ಮೂಲಕ ಅರಿವು ಮೂಡಿಸಬೇಕು. ಪ್ರತಿ ಗಂಟೆಗೊಮ್ಮೆ ವಿಭಾಗದ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ, ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ವಿಧ್ವಂಸಕ ಕೃತ್ಯ ಪರಿಶೀಲನಾ ತಂಡದಿಂದ ಕಾಲ ಕಾಲಕ್ಕೆ ಅನಿರೀಕ್ಷಿತ ತಪಾಸಣೆ ನಡೆಸಬೇಕು. ವಿಭಾಗೀಯ ಕಚೇರಿ/ ಘಟಕ/ ಕಾರ್ಯಾಗಾರ/ ತರಬೇತಿ ಕೇಂದ್ರ/ ಬಸ್ ನಿಲ್ದಾಣಗಳ ಪ್ರವೇಶ ದ್ವಾರಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸೂಚಿಸಿದ್ದಾರೆ. ಈ ಮಧ್ಯೆ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ, ಶಾಂತಿನಗರ, ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣಗಳು ಸೇರಿ ನಿಗಮದ ವ್ಯಾಪ್ತಿಯಲ್ಲಿ ಜಿಲ್ಲಾಮಟ್ಟದಲ್ಲಿನ ಪ್ರಮುಖ ನಿಲ್ದಾಣಗಳಲ್ಲಿ ಭದ್ರತಾ ಮತ್ತು ಜಾಗೃತ ವಿಭಾಗದ ಸಿಬ್ಬಂದಿಯಿಂದ ತಪಾಸಣೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.