ಅಪ್ಪನ ಮಾತುಗಳೇ ಬದುಕಿಗೆ ಪ್ರೇರಣೆ

Team Udayavani, Feb 17, 2019, 6:23 AM IST

appana.jpg

ಬೆಂಗಳೂರು: “ನನ್ನ ಬಾಲ್ಯವೆಲ್ಲಾ ಆಸ್ಪತ್ರೆಯ ಹಾಸಿಗೆ ಮೇಲೆ ನೋವಿನಿಂದ ಕಳೆದೆ. ಹೀಗಾಗಿ ಅಪ್ಪ, ಅಮ್ಮ, ಅಣ್ಣ, ತಂಗಿಯರ ಪ್ರೀತಿಯ ಅಪ್ಪುಗೆ ಸಿಗಲೇ ಇಲ್ಲ’ ಎಂದು ಹೇಳುತ್ತಲೇ ಅಂತಾರಾಷ್ಟ್ರೀಯ ಕ್ರೀಡಾಪಟು, ಪ್ಯಾರಾ ಅಥ್ಲಿಟ್‌ ಮಾಲತಿ ಹೊಳ್ಳ ಭಾವುಕರಾದರು.

ನಯನ ಸಭಾಂಗಣದಲ್ಲಿ ಶನಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಪಾಲ್ಗೊಂಡು ತಮ್ಮ ಬದುಕಿನ ನೋವು-ನಲಿವುಗಳನ್ನು ಹಂಚಿಕೊಂಡರು.

ಅಂಗವೈಕಲ್ಯ ಯಾವತ್ತೂ ನನ್ನ ಗುರಿ ಸಾಧನೆಗೆ ಅಡ್ಡಿ ಬರಲಿಲ್ಲ. ಆ ಸಮಸ್ಯೆಯನ್ನೇ ಸವಾಲಾಗಿ ಸ್ವೀಕರಿ ಕ್ರೀಡಾ ಕ್ಷೇತ್ರದಲ್ಲಿ ಅರಳಿದೆ. ಕಾಲೃಏಜು ಹಂತದಲ್ಲಿ ಸಹಪಾಠಿಗಳು ತೋರಿದ ಕನಿಕರಕ್ಕೆ ನೊಂದು ಓದು ನಿಲ್ಲಿಸುವ ನಿರ್ಧಾರಕ್ಕೆ ಬಂದೆ ಆದರೆ, ಆಗ ಅಪ್ಪ ಆಡಿದ ಮಾತುಗಳು ನನ್ನನನು ಮತ್ತೆ ಶಿಕ್ಷಣದ ಹಳಿಗೆ ಹಚ್ಚಿದವು ಎಂಬ ಆತ್ಮ ವಿಶ್ವಾಸದ ನುಡಿಗಳನ್ನಾಡಿದರು.

ಹುಟ್ಟಿದ 15 ತಿಂಗಳಿಗೆ ನಾನು, ಪೋಲಿಯೋ ರೋಗಕ್ಕೆ ಒಳಗಾದೆ. ಎರಡು ವರ್ಷಗಳ ಕಾಲ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡೆ. ವೈದ್ಯರ ಸಲಹೆ ಮೇರೆಗೆ ಚೆನ್ನೈನ ಆಸ್ಪತ್ರೆಯಲ್ಲಿ 15 ವರ್ಷಗಳ ಕಾಲ ಚಿಕಿತ್ಸೆಪಡೆದೆ. ಓದು ಕೂಡ ಚಿಕಿತ್ಸೆ ಜತೆಗೇ ಸಾಗಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಆಸ್ಪತ್ರೆಯ ಬೆಡ್‌ ಮೇಲೆ ಮಲಗೇ ಬರೆದು ಪ್ರಥಮ ರ್‍ಯಾಂಕ್‌ ಪಡೆದಿದ್ದು ನನ್ನ ಜೀವನದ ಅವಿಸ್ಮರಣೀಯ ಕ್ಷಣ ಎಂದರು.

ಕಾಲೇಜು ತೊರೆವ ನಿರ್ಧಾರ: ಪ್ರೌಢಶಾಲೆ ಶಿಕ್ಷಣ ಮುಗಿಸಿದ ನಂತರ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಪಿಯುಸಿಗೆ ಸೇರಿದೆ. ಪ್ರಾರಂಭದಲ್ಲಿ ಸಹಪಾಠಿಗಳು ಹಾಗೂ ಶಿಕ್ಷಕರು ತೋರಿಸುತ್ತಿದ್ದ ಕನಿಕರ ನನ್ನ ಮನಸಿಗೆ ನೋವು ತರಿಸಿತು. ಈ ದೃಷ್ಟಿಯಿಂದಲೇ ಒಂದು ಹಂತದಲ್ಲಿ ಕಾಲೇಜು ಬಿಡಬೇಕೆಂದು ನಿರ್ಧರಿಸಿದೆ. ಆದರೆ ಅಪ್ಪನ ಮಾತುಗಳಿಂದ ಪ್ರೇರಣೆಗೊಂಡು ವಿದ್ಯಾಭ್ಯಾಸ ಮುಂದುವರಿಸಿದೆ ಎಂದು ಸ್ಮರಿಸಿದರು.

ಖುಷಿಗಾಗಿ ಕ್ರೀಡೆ: “ಖುಷಿಗಾಗಿ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಭಾಗ‌ವಹಿಸಿದ್ದೆ. ಆ ಕ್ರೀಡೆಯಲ್ಲಿ ಎರಡು ಚಿನ್ನದ ಪದಕ ಗೆದ್ದೆ. ಈ ಗೆಲುವಿನ ಸ್ಫೂರ್ತಿಯಿಂದಾಗಿ ಕ್ರೀಡೆಯನ್ನೇ ನನ್ನ ಆಸಕ್ತಿ ಕ್ಷೇತ್ರವನ್ನಾಗಿ ಆಯ್ದುಕೊಂಡು ಬೆಳೆದೆ. ಪರಿಶ್ರಮ ಪಟ್ಟು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಇಲ್ಲಿಯವರೆಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ 397 ಚಿನ್ನ, 27 ಬೆಳ್ಳಿ, 5 ಕಂಚಿನ ಪದಕ ಗಳಿಸಿದ್ದೇನೆ,’ ಎಂದು ಹೇಳಿದರು.

ನಾನು 30ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಪ್ರತಿ ಚಿಕಿತ್ಸೆ ನಂತರ ವೈದ್ಯಾಧಿಕಾರಿಗಳು ಒಂದು ತಿಂಗಳು ವಿರಾಮಕ್ಕೆ ಸೂಚಿಸುತ್ತಾರೆ. ಆದರೆ, ನಾನು ದೈಹಿಕ ಶಕ್ತಿಗಿಂತ ಮಾನಸಿಕ ಶಕ್ತಿಯನ್ನು ನಂಬುವವಳು. ಹೀಗಾಗಿ, ಬೆಳಗ್ಗೆ 4.30ಕ್ಕೆ ಕೆಲಸ ಪ್ರಾರಂಭಿಸಿದರೆ ರಾತ್ರಿ 11.30ರವರೆಗೆ ನಿರಂತರ ಚಟುವಟಿಕೆಗಳಲ್ಲಿ ತೊಡುಗುತ್ತೇನೆ ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿ ಬನಶಂಕರಿ ಅಂಗಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.