ಮೀಸೆ ತಿಮ್ಮಯ್ಯರ ಕರ್ತವ್ಯಪ್ರಜ್ಞೆ ಸ್ಫೂರ್ತಿ
Team Udayavani, Mar 10, 2020, 3:07 AM IST
ಬೆಂಗಳೂರು: ತಾಯಿ, ಮಗಳನ್ನು ರಕ್ಷಿಸುವ ಯತ್ನದಲ್ಲಿ ಲಾರಿ ಅಡಿ ಸಿಲುಕಿ ಮಡಿದ ಸಂಚಾರ ವಿಭಾಗದ ಹೆಡ್‌ಕಾನ್‌ಸ್ಟೆಬಲ್ ಮೀಸೆ ತಿಮ್ಮಯ್ಯ ಅವರ ಕರ್ತವ್ಯ ಪ್ರಜ್ಞೆ ನಿಜವಾಗಲೂ ಎಲ್ಲರಿಗೂ ಸ್ಫೂರ್ತಿದಾಯಕ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಜನರಲ್ ಪೋಸ್ಟ್ ಆಫೀಸ್ ವೃತ್ತದ ಬಳಿ ಸೋಮವಾರ ಬೆಳಗ್ಗೆ ಆಯೋಜಿಸಿದ್ದ ಮೀಸೆ ತಿಮ್ಮಯ್ಯ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
1995ರ ಆಗಸ್ಟ್‌ನಲ್ಲಿ ಜಿಪಿಒ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ವೇಗವಾಗಿ ಬಂದ ಲಾರಿ ವಿದೇಶಿ ಮಹಿಳೆ ಹಾಗೂ ಆಕೆಯ ಮಗಳಿಗೆ ಡಿಕ್ಕಿ ಹೊಡೆಯವುದರಲ್ಲಿತ್ತು. ಅದನ್ನು ಕಂಡು ಕಾರ್ಯ ಪ್ರವೃತ್ತರಾದ ತಿಮ್ಮಯ್ಯ ಅವರಿಬ್ಬರನ್ನು ರಕ್ಷಿಸಲು ಹೋದಾಗ ಅದೇ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದರು.
ಕರ್ತವ್ಯ ನಿರ್ವಹಣೆಯಲ್ಲಿ ಜೀವ ಉಳಿಸಿ ಪ್ರಾಣ ತ್ಯಾಗ ಮಾಡಿದ ಮೀಸೆ ತಿಮ್ಮಯ್ಯ ನೆನಪಿನಲ್ಲಿ ಜಿಪಿಒ ವೃತ್ತಕ್ಕೆ ಪೊಲೀಸ್ ತಿಮ್ಮಯ್ಯ ವೃತ್ತ ಎಂದು ನಾಮಕರಣ ಮಾಡಲಾಗಿತ್ತು. ಇದೀಗ ಪುತ್ಥಳಿ ನಿರ್ಮಿಸುವ ಮೂಲಕ ಅವರ ಕಾರ್ಯವನ್ನು ಮತ್ತೂಮ್ಮೆ ಶ್ಲಾ ಸುತ್ತಿದ್ದೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮೀಸೆ ತಿಮ್ಮಯ್ಯ ಅವರ ಕುರಿತ ಪುಸ್ತಕ ಬಿಡುಗಡೆ ಮಾಡಲಾಯಿತು ಹಾಗೂ ಮೀಸೆ ತಿಮ್ಮಯ್ಯ ಅವರ ಪತ್ನಿ ಲಕ್ಷ್ಮಿದೇವಿ ಹಾಗೂ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು.
ಉದ್ಯಾನ ಲೋಕಾರ್ಪಣೆ: ನಗರದ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಎಸ್‌ಬಿಐ ವೃತ್ತದಲ್ಲಿ ನೂತನವಾಗಿ ನವೀಕೃತಗೊಂಡ ಮಕ್ಕಳ ಸಂಚಾರ ಪೊಲೀಸ್ ಉದ್ಯಾನವನವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಯಾವ ನಗರದಲ್ಲಿ ಉತ್ತಮವಾದ ಸಂಚಾರ ಇರುತ್ತದೆಯೋ? ಅಂತಹ ನಗರದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತದೆ.
ರಾತ್ರಿ ಸಮಯದಲ್ಲಿ ಸಂಚಾರ ನಿಯಂತ್ರಿಸುವುದು ಹಾಗೂ ಮಹಿಳಾ ಸುರಕ್ಷತೆ ಬಗ್ಗೆ ನಿಗಾ ವಹಿಸುವುದು ಮಹತ್ವದ್ದಾಗಿದೆ. ಮಹಿಳಾ ಸುರಕ್ಷತೆಗಾಗಿ ಈಗಾಗಲೇ ಸರ್ಕಾರ 75 ಪಿಂಕ್ ಹೊಯ್ಸಳ ತರಲು ತೀರ್ಮಾನಿಸ ಲಾಗಿದ್ದು, ಮಹಿಳೆಯರು ಹೆಚ್ಚಾಗಿ ಕೆಲಸ ಮಾಡುವ ಪ್ರದೇಶದಲ್ಲಿ ಪಿಂಕ್ ಹೊಯ್ಸಳ ಗಸ್ತು ಹೆಚ್ಚಿಸ ಲಾಗುವುದು ಎಂದು ಹೇಳಿದರು. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಿದ ಮಕ್ಕಳ ಸಂಚಾರ ಪೊಲೀಸ್ ಉದ್ಯಾನವನ ಇದಾಗಿದ್ದು, ಸಂಚಾರ ನಿಯಮದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿ ಸಲು ಇದು ಸಹಕಾರಿಯಾಗಿದೆ.
ಮುಂದಿನ ದಿನಗಳಲ್ಲಿ ಇಂತಹ ಪಾರ್ಕ್‌ಗಳನ್ನು ಇನ್ನಷ್ಟು ಕಡೆಗಳಲ್ಲಿ ನಿರ್ಮಿಸಲು ಚಿಂತೆನೆ ನಡೆಸಲಾಗಿದೆ ಎಂದು ಭರವಸೆ ನೀಡಿದರು. ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುವ 12 ವಲಯಗಳನ್ನು ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರದೇಶಗಳ ಸಂಚಾರ ದಟ್ಟಣೆ ನಿಯಂತ್ರಿಸಿ ಪಾರ್ಕಿಂಗ್ ಪ್ರದೇಶ ಸೇರಿ ಹಲವು ಸೌಲಭ್ಯ ಕಲ್ಪಿಸಿ, ಸುಗಮ ಸಂಚಾರಕ್ಕೆ ಕ್ರಮಕೈಗೊಳ್ಳಲಾಗುವುದು. ಸಂಚಾರ ದಟ್ಟಣೆ ನಿಯಂತ್ರಿಸುವುದು ಸಂಚಾರ ಪೊಲೀರಿಗೆ ಸವಾಲಾಗಿದೆ.
ಸದ್ಯದಲ್ಲೇ ವೈಟ್‌ಫೀಲ್ಡ್‌ನಲ್ಲಿ ಸಂಚಾರ ಉಪ ವಿಭಾಗ ಆರಂಭವಾಗಲಿದೆ. ಅಲ್ಲಿಗೆ ಅಗತ್ಯವಿರುವ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸದ್ಯದಲ್ಲೇ ನೇಮಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಜಂಟಿ ಪೊಲೀಸ್ ಆಯುಕ್ತ ಡಾ ಬಿ.ಆರ್.ರವಿಕಾಂತೇಗೌಡ, ಪೂರ್ವ ಸಂಚಾರ ವಿಭಾಗದ ಡಿಸಿಪಿ ಎಂ.ನಾರಾಯಣ, ವಾಸ್ವನಿ ಗ್ರೂಪ್‌ನ ಅಧ್ಯಕ್ಷ ಅರುಣ್ ಅದ್ವಾನಿ, ಫೋರ್ಟಿಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ಪ್ರಿಯಾ ಶ್ರೀಧರನ್, ಪ್ರವೀಣ್ ವಾಲಿ ಇತರರು ಇದ್ದರು.
ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ: ಸಂಚಾರ ನಿಯಮಗಳನ್ನು ಅರ್ಥಮಾಡಿಕೊಂಡು ಅನುಸರಿಸುವಂತೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ, ರಸ್ತೆಯಲ್ಲಿ ಸುರಕ್ಷೆತೆಯನ್ನು ಪಾಲಿಸುವ ಕೌಶಲ್ಯ ಬೆಳೆಸಲು ರಸ್ತೆಗಳ ಮಾರ್ಕಿಂಗ್‌ಗಳು ಮತ್ತು ಮಾಹಿತಿ ಚಿಹ್ನೆಗಳು, ಸಿಗ್ನಲ್ ಲೈಟುಗಳು, ಎಚ್ಚರಿಕೆ ನೀಡುವ ಫಲಕಗಳು ಸೇರಿ ಒಟ್ಟಾರೆ ಸಂಚಾರ ನಿಯಮ ಕುರಿತು ಜಾಗೃತಿ ಮಾಹಿತಿ ನೀಡಲು ಮಕ್ಕಳ ಪಾರ್ಕ್‌ನಲ್ಲಿ ಪ್ರಾತ್ಯಕ್ಷಿಕೆ ಸ್ಥಾಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.