ಸಂತ್ರಸ್ತರಿಗೆ ಸರ್ಕಾರಿ ದಾಖಲೆ ನೀಡಲು ಸೂಚನೆ
Team Udayavani, Dec 11, 2019, 3:07 AM IST
ಬೆಂಗಳೂರು: ಹುಳಿಮಾವು ಕೆರೆ ಕೋಡಿ ಒಡೆದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಆಧಾರ್ ಕಾರ್ಡ್, ಮತದಾನ ಗುರುತಿನ ಚೀಟಿ ಸೇರಿ ಇತರೆ ಸರ್ಕಾರಿ ದಾಖಲೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಶಿಬಿರ ನಡೆಸಿ ದಾಖಲೆಗಳನ್ನು ಕೊಡಿಸಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ ಸೂಚನೆ ನೀಡಿದ್ದಾರೆ.
ಹುಳಿಮಾವು ಕೆರೆ ಅನೈರ್ಮಲ್ಯ ಹಾಗೂ ಕೆರೆ ಕೋಡಿ ಒಡೆದು ಉಂಟಾದ ಅನಾಹುತ ಸಂಬಂಧ ದಾಖಲಾದ ದೂರುಗಳನ್ನು ಮಂಗಳ ವಾರ ಲೋಕಾಯುಕ್ತರು ವಿಚಾರಣೆ ನಡೆಸಿ ಈ ಬಗ್ಗೆ ಸೂಚನೆ ನೀಡಿದರು. ಕೆರೆ ಕೋಡಿ ಒಡೆದು ಮನೆಗಳಿಗೆ ನೀರು ನುಗ್ಗಿದ್ದರಿಂದ ಸಾಕಷ್ಟು ಮಂದಿ ಆಧಾರ್ ಕಾರ್ಡ್, ಮತದಾನ ಗುರುತಿನ, ಪಡಿತರ ಚೀಟಿ ಕಳೆದು ಕೊಂಡಿದ್ದಾರೆ. ಹೊಸದಾಗಿ ದಾಖಲೆಗಳನ್ನು ಕೊಡಿ ಸಲು ಮುಂದಿನ 15 ದಿನಗಳಲ್ಲಿ ಸಕ್ಷಮ ಪ್ರಾಧಿ ಕಾರಗಳ ಜತೆ ಚರ್ಚಿಸಿ ಅಲ್ಲಿಯೇ ಒಂದು ಶಿಬಿರ ನಡೆಸಿ ದಾಖಲೆ ವಿತರಿಸಿ ಎಂದು ಸೂಚಿಸಿದ್ದು. ಈ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿ ಫೆ. 15ಕ್ಕೆ ವಿಚಾರಣೆ ಮುಂದೂಡಿದ್ದಾರೆ.
ವಿಚಾರಣೆ ವೇಳೆ ಕೆರೆಕೋಡಿ ಒಡೆದ ಪರಿಣಾಮ ಸಂತ್ರಸ್ತರಾದವರಿಗೆ ಪರಿಹಾರ ವಿತರಣೆ, ಅವರಿಗೆ ಕಲ್ಪಿಸಲಾಗಿರುವ ಮೂಲಸೌಲಭ್ಯಗಳು ಸೇರಿ ಇನ್ನಿತರೆ ವಿಚಾರಗಳ ಬಗ್ಗೆ ವಸ್ತುಸ್ಥಿತಿ ವರದಿಯನ್ನು ಪಾಲಿಕೆ ಅಧಿಕಾರಿಗಳಿಂದ ಲೋಕಾಯುಕ್ತರು ಪಡೆದುಕೊಂಡರು. ಕೆರೆಕೋಡಿ ಒಡೆದ ದುರಂತಕ್ಕೆ ಕಾರಣವಾದವರು ಯಾರು ಎಂಬುದರ ಬಗ್ಗೆ ಪೊಲೀಸ್ ತನಿಖೆ ಚುರುಕಾಗುವಂತೆ ಅವರ ಜತೆ ತನಿಖೆಗೆ ಸಹಕರಿಸಿ, ಅವರಿಂದ ಮಾಹಿತಿ ಪಡೆದುಕೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಅಷ್ಟೇ ಅಲ್ಲದೆ, ಸಂತ್ರಸ್ತರಿಗೆ ನೀಡಲಾಗುವ ಪರಿಹಾರದಲ್ಲಿ ತಾರತಮ್ಯ ಆಗಬಾರದು. ಅನುದಾನ ಕೂಡ ದುರ್ಬಳಕೆ ಆಗದಂತೆ ನೋಡಿಕೊಳ್ಳಬೇಕು. ಸ್ಥಳೀಯ ನಿವಾಸಿಗಳ ಆರೋಗ್ಯದ ಕಡೆಯೂ ಹೆಚ್ಚು ಗಮನಹರಿಸಿ ಎಂದು ಸಲಹೆ ನೀಡಿದರು. ವಿಚಾರಣೆ ವೇಳೆ ದೂರುದಾರರಾದ ಯುನೈಟಡ್ ಬೆಂಗಳೂರು ಸಂಸ್ಥೆಯ ಅಧ್ಯಕ್ಷರಾದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ, ಸಂಚಾಲಕರಾದ ಎನ್. ಆರ್ ಸುರೇಶ್, ನಮ್ಮ ಬೆಂಗಳೂರು ಫೌಂಡೇಶನ್‌ನ ಲಕ್ಷ್ಮೀಕಾಂತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.