ಸಾರಿಗೆ ನೌಕರರಿಗೆ ಯುಗಾದಿ ಬಂಪರ್: ಅಂತರ್ ನಿಗಮ ವರ್ಗಾವಣೆಗೆ ಓಕೆ
Team Udayavani, Mar 31, 2017, 6:44 AM IST
ಬೆಂಗಳೂರು: ಸಾರಿಗೆ ಸಂಸ್ಥೆಯ ನೌಕರರಿಗೆ ಸರ್ಕಾರ ಯುಗಾದಿ ಬಂಪರ್ ನೀಡಿದ್ದು, ಬಹುವರ್ಷಗಳ ಬೇಡಿಕೆಯಾಗಿದ್ದ ಅಂತರ್ ನಿಗಮ ವರ್ಗಾವಣೆಗೆ ಹಸಿರು ನಿಶಾನೆ ತೋರಿಸಿದೆ.
ಸೇವಾವಧಿಯಲ್ಲಿ ಒಂದು ಬಾರಿ ಮಾತ್ರ ಅಂತರ್‌ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ 1950ರ ರಸ್ತೆ ಸಾರಿಗೆ ನಿಗಮ ಕಾಯ್ದೆಯ ಕಲಂ 34ರಡಿ ಅವಕಾಶ ನೀಡಿ ಗುರುವಾರ (ಮಾ.30) ಸರ್ಕಾರ ಆದೇಶ ಹೊರಡಿಸಿದೆ. ಈ ಅಂತರ್‌ನಿಗಮ ವರ್ಗಾವಣೆಗೆ ಅವಕಾಶ ಮಾಡಿಕೊಡುವುದರಿಂದ ಹಲವು ವರ್ಷಗಳಿಂದ ವರ್ಗಾವಣೆ ಎದುರು ನೋಡುತ್ತಿದ್ದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಬ್ಲೂಕೆಆರ್ ಟಿಸಿ, ಎನ್‌ಇಕೆಆರ್‌ಟಿಸಿಯ ಸುಮಾರು 30 ಸಾವಿರಕ್ಕೂ ಹೆಚ್ಚು ನೌಕರರಿಗೆ ಅನುಕೂಲವಾಗಲಿದೆ.
ಈ ವರ್ಗಾವಣೆ ಡ್ರೈವರ್. ಕಂಡಕ್ಟರ್, ಮೆಕಾನಿಕ್, ಮೇಲ್ವಿಚಾರಕೇತರರಿಗೆ ಅನ್ವಯ ವಾಗಲಿದೆ. ಉಳಿದಂತೆ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಅಂತರ್ ನಿಗಮ ವರ್ಗಾವಣೆ ವ್ಯಾಪ್ತಿಗೆ ಬರುವುದಿಲ್ಲ. ಸಾರಿಗೆ ಸಂಸ್ಥೆಯ 4 ನಿಗಮಗಳಲ್ಲಿ ಅಂದಾಜು 1.20 ಲಕ್ಷಕ್ಕೂ ಹೆಚ್ಚು ಅಧಿಕಾರಿ/ನೌಕರರು ಇದ್ದು, ಈ ಪೈಕಿ 1 ಲಕ್ಷಕ್ಕೂ ಹೆಚ್ಚು ನೌಕರರು ಅಂತರ್‌ನಿಗಮ ವರ್ಗಾವಣೆ ವ್ಯಾಪ್ತಿಗೆ ಬರಲಿದ್ದಾರೆ.
ಅಂದರೆ, ಡ್ರೈವರ್, ಕಂಡಕ್ಟರ್, ಮೆಕಾನಿಕ್ ಹಾಗೂ ಮೇಲ್ವಿಚಾರಕೇತರ ಸಿಬ್ಬಂದಿಗಳಿದ್ದು, ಅದರಲ್ಲೂ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿಯ ಸುಮಾರು 10 ರಿಂದ 15 ಸಾವಿರ ನೌಕರರು ಸೇರಿ, 30 ಸಾವಿರಕ್ಕೂ ಹೆಚ್ಚು ನೌಕರರು ವರ್ಗಾವಣೆಯನ್ನು ಅನೇಕ ವರ್ಷಗಳಿಂದ ಎದುರು ನೋಡುತ್ತಿದ್ದರು.
ಏ.10ರೊಳಗೆ ನಿಯಮ ಸಿದ್ದ: ಅಂತರ್ ನಿಗಮಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ
ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಉಳಿದ ಮೂರು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರನ್ನೊಳಗೊಂಡ ಸಮಿತಿ ರಚಿಸ
ಲಾಗುವುದು. ಈ ಸಮಿತಿಯ ರೂಪುರೇಷೆ ಮತ್ತು ನಿಯಮ ಸಿದ್ದಪಡಿಸಲಿದ್ದು, ಏ.10ರೊಳಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.