ಮಧ್ಯಪ್ರವೇಶ ಸೂಕ್ತವಲ್ಲ:ಹೈಕೋರ್ಟ್
Team Udayavani, Mar 20, 2018, 6:55 AM IST
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಶಶಿಕಲಾ ವಿ. ನಟರಾಜನ್‌ಗೆ ಐಷಾರಾಮಿ ಸೌಲಭ್ಯ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆ ಪ್ರಾರ್ಥಮಿಕ ಹಂತದಲ್ಲಿರುವಾಗ ನ್ಯಾಯಾಲಯ ಮಧ್ಯಪ್ರವೇಶಿಸುವುದು ಸಮಂಜಸವಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಪ್ರಕರಣದ ಸಂಬಂಧ ತನಿಖೆ ನಡೆಸಲು ಸರ್ಕಾರ ನೀಡಿದ್ದ ಆದೇಶ ರದ್ದು ಪಡಿಸುವಂತೆ ಕೋರಿ ರಾಜ್ಯ ಬಂಧೀಖಾನೆ ಇಲಾಖೆ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರಾಘವೇಂದ್ರ ಎಸ್.ಚೌಹಾಣ್ ಅವರಿದ್ದ ನ್ಯಾಯಪೀಠ, ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿರುವಾಗ ನ್ಯಾಯಾಲಯ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ಮೌಖೀಕ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಕರಣ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಆದರೆ, ಇದಕ್ಕೆ ಆಕ್ಷೇಪಿಸಿದ ನ್ಯಾಯಪೀಠ, ಈಗಾಗಲೇ ತನಿಖೆ ಆರಂಭವಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 2 ಕೋಟಿ ಲಂಚ ಪಡೆದ ಆರೋಪವಿದೆ. ಇದನ್ನು ಪರಿಗಣಿಸಿರುವ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ರೀತಿ ವಿಚಾರಣೆ ಪ್ರಾಥಮಿಕ ಹಂತದಲ್ಲಿರುವಾಗ ನ್ಯಾಯಾಲಯದ ಮಧ್ಯಪ್ರವೇಶ ಸರಿಯಲ್ಲ. ತನಿಖೆ ನಡೆಯಲಿ, ತಪ್ಪು ಮಾಡಿರುವ ದಾಖಲೆ ಲಭ್ಯವಾದರೆ ಚಾರ್ಚ್ ಶೀಟ್ ಸಲ್ಲಿಸಲಿ. ಇಲ್ಲವಾದಲ್ಲಿ ಪ್ರಕರಣ ರದ್ದಾಗಲಿದೆ ಎಂದು ನ್ಯಾಯಪೀಠ ತಿಳಿಸಿತು.
ಪ್ರಕರಣವೇನು?
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಸೌಲಭ್ಯ ಒದಗಿಸಲು ಸತ್ಯನಾರಾಯಣ ರಾವ್ 2 ಕೋಟಿ ಲಂಚ ಪಡೆದಿದ್ದಾರೆ ಎಂದು ಬಂಧೀಖಾನೆ ಇಲಾಖೆ ಡಿಐಜಿಯಾಗಿದ್ದ ಡಾ.ಡಿ.ರೂಪ ಆರೋಪಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಅವರನ್ನು ಸರ್ಕಾರ ನೇಮಿಸಿತ್ತು. ವಿಚಾರಣೆ ಪೂರ್ಣಗೊಳಿಸಿದ್ದ ವಿನಯ್ ಕುಮಾರ್, 2017ರ ಅ.21ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು. ವರದಿಯನ್ನು 2018ರ ಫೆ.26ರಂದು ಸಮ್ಮತಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಕರಣ ಕುರಿತು ತನಿಖೆ ನಡೆಸುವಂತೆ ಎಸಿಬಿಗೆ ನಿರ್ದೇಶಿಸಿದ್ದರು. ಅದರಂತೆ ಎಸಿಬಿ ಪೊಲೀಸರು ಎಫ್ಐಆರ್ ಮಾ.3ರಂದು ಎಫ್ಐಆರ್ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.