ಪ್ರಸಿಡೆನ್ಸಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ
Team Udayavani, Sep 9, 2018, 12:08 PM IST
ಬೆಂಗಳೂರು: ಮಹಿಳೆಯರಿಗೆ ಪೂಜನೀಯ ಸ್ಥಾನ ನೀಡಿರುವ ಭಾರತದಲ್ಲಿ ಸುರಕ್ಷತೆ ಇಲ್ಲದಂತಾಗಿದೆ ಎಂದು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ವೆಂಕಟರಾವ್ ಕಳವಳ ವ್ಯಕ್ತಪಡಿಸಿದರು.
ಯಲಹಂಕದ ರಾಜಾನುಕುಂಟೆ ಪ್ರಸಿಡೆನ್ಸಿ ಕಾಲೇಜಿನಲ್ಲಿ “ಜಂಡರ್ ಇಕ್ವಾಲಿಟಿ ಥ್ರೂ ದ ಸ್ಟ್ರಾಟಜಿ ಆಫ್ ಜಂಡರ್ ಮೆನ್ ಸ್ಟೀಮಿಂಗ್’ ಕುರಿತು ಇತೀ¤ಚೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಮಹಿಳೆಯರಿಗಾಗಿ ಸಂವಿಧಾನದಲ್ಲಿ ಅನೇಕ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಆದರೆ ಅವುಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲ. ಮಹಿಳೆಯರಿಗೆ ವಾಕ್ ಸ್ವಾತಂತ್ರ್ಯ ನೀಡದಿದ್ದರೆ ಸಮಾಜ ಜಡತ್ವ ಹೊಂದಲಿದೆ. ಆಗಲೇ ಶಿಕ್ಷಣ, ಸಂಸ್ಕೃತಿ ಮತ್ತು ಆರ್ಥಿಕತೆಯಲ್ಲಿ ಮಹಿಳೆಯರು ಸಬಲೀಕರಣ ಸಾಧಿಸಲು ಸಾಧ್ಯವಾಗುತ್ತದೆ.
ಯುನೈಟೆಡ್ ನೇಷನ್ಸ್ ಇನ್ಪಾರ್ಮೇಷನ್ ಸೆಂಟರ್ ಫಾರ್ ಇಂಡಿಯಾ ಆ್ಯಂಡ್ ಭೂತಾನ್ ನಿರ್ದೇಶಕ ಡರ್ಕ್ ಸೆಗಾರ್ ಮಾತನಾಡಿ, ಭಾರತದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಆದರೆ, ಲೋಕಸಭೆಯಲ್ಲಿ ಮಹಿಳೆಯರು ಕನಿಷ್ಟ ಸಂಖ್ಯೆಯಲ್ಲಿ ಮಾತ್ರ ಇದ್ದಾರೆ. ಉದ್ಯೋಗ, ರಾಜಕೀಯ ಸೇರಿದಂತೆ ಇನ್ನಿತರ ವರ್ಗಗಳಲ್ಲಿ ಮಹಿಳೆಯರಿಗೆ ಹೆಚ್ಚು ಅವಕಾಶ ಕಲ್ಪಿಸಬೇಕಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅಫ್ಘಾನಿಸ್ತಾನ, ಭೂತಾನ್, ಬಾಂಗ್ಲಾದೇಶ, ಇರಾಕ್, ಕೀನ್ಯಾ, ಸ್ವೀಡನ್, ತಾಂಜೇನಿಯ, ಸೂಡಾನ್ ಸೇರಿದಂತೆ ಇನ್ನಿತರ ದೇಶಗಳ ವಿದ್ಯಾರ್ಥಿಗಳು ಭಾಗವಸಿದ್ದರು. ಕಾರ್ಯಕ್ರಮದಲ್ಲಿ ಕುಲಾಧಿಪತಿ ಪ್ರೊ. ವಿಜಯ್ ಇಮಾನ್ಯುಲ್, ಕುಲಪತಿ ಪ್ರೊ. ರಾಧಾ ಪದ್ಮನಾಭನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.