ಲೋಕಸೇವಾ ಆಯೋಗದಿಂದ 29ಕ್ಕೆ ಸಂದರ್ಶನ
Team Udayavani, Jul 4, 2019, 3:00 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಭ್ಯರ್ಥಿಗಳ ಸಂದರ್ಶನ ದಿನಾಂಕ ಪ್ರಕಟಿಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಬುಧವಾರ ಉಪವಾಸ ಸತ್ಯಾಗ್ರಹ ಆರಂಭಿಸುತ್ತಿದ್ದಂತೆ ಎಚ್ಚೆತ್ತ ಆಯೋಗವು ಇದೇ 29ರಂದು ಸಂದರ್ಶನ ನಡೆಸುವುದಾಗಿ ಪ್ರಕಟಿಸಿದೆ.
2015ರ ಬ್ಯಾಚ್‌ನ ಕೆಎಎಸ್ ಅಧಿಕಾರಿಗಳ ಆಯ್ಕೆಗೆ 2017ರ ಮೇ 12ರಂದು ಅಧಿಸೂಚನೆ ಹೊರಡಿಸಿ 2017ರ ಆ.20ಕ್ಕೆ ಪೂರ್ವಭಾವಿ ಪರೀಕ್ಷೆ ಕೂಡ ನಡೆದಿತ್ತು. ಬಳಿಕ 2017ರ ಡಿಸೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿದ್ದು, ವರ್ಷ ಕಳೆದರೂ ಫಲಿತಾಂಶ ಪ್ರಕಟಿಸಿರಲಿಲ್ಲ. ಫಲಿತಾಂಶ ಪ್ರಕಟಿಸುವಂತೆ ಸುರೇಶ್ ಕುಮಾರ್ ಅವರು ನಿರಂತರವಾಗಿ ಒತ್ತಾಯಿಸುತ್ತಿದ್ದರು. ಬಳಿಕ 2019ರ ಜ.28ರಂದು ಫಲಿತಾಂಶ ಪ್ರಕಟವಾಗಿತ್ತು. ಬಳಿಕ, ಸುರೇಶ್ ಕುಮಾರ್ ಅವರು ಒತ್ತಾಯ ಮಾಡಿದರೂ ಸಂದರ್ಶನದ ದಿನಾಂಕ ಪ್ರಕಟಿಸಿರಲಿಲ್ಲ.
ಈ ಹಿನ್ನೆಲೆಯಲ್ಲಿ ಬುಧವಾರ ಕೆಪಿಎಸ್‌ಸಿ ಕಚೇರಿ ಎದುರು ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದರು. ತಕ್ಷಣವೇ ಆಯೋಗದ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಜು.29ರಂದು ಸಂದರ್ಶನ ನಡೆಸುವುದಾಗಿ ಭರವಸೆ ನೀಡಿದರು. ಇದನ್ನು ಒಪ್ಪದ ಸುರೇಶ್ ಕುಮಾರ್ ಲಿಖೀತ ಮಾಹಿತಿ ನೀಡುವಂತೆ ಒತ್ತಾಯಿಸಿದರು. ಬಳಿಕ, ಕೆಪಿಎಸ್‌ಸಿ ಕಾರ್ಯದರ್ಶಿ ಜನ್ನು, ಜು.29ರಂದು ಸಂದರ್ಶನ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಲಿಖೀತ ರೂಪದಲ್ಲಿ ತಿಳಿಸಿದರು. ಬಳಿಕ, ಅವರು ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆ ಬೆಂಬಲಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಇತರರು ಪಾಲ್ಗೊಂಡಿದ್ದರು. ಜು.29ರಿಂದ ಪ್ರಾರಂಭವಾಗುವ ಸಂದರ್ಶನ ಹೋಟಾ ಸಮಿತಿಯ ಶಿಫಾರಸಿನಂತೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅನ್ಯಾಯಕ್ಕೆ ಅವಕಾಶ ನೀಡಬಾರದು ಎಂದು ಸುರೇಶ್ ಕುಮಾರ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.