ರಾಜ್ಯಪಾಲರ ಭಾಷಣದಲ್ಲೂ ನೋಟು ಅಮಾನ್ಯ ಪ್ರಸ್ತಾಪ?


Team Udayavani, Feb 6, 2017, 3:45 AM IST

vidhana-soudha-750.jpg

ಬೆಂಗಳೂರು: ನೋಟು ಅಮಾನ್ಯದಿಂದ ಉಂಟಾಗಿರುವ ಸಮಸ್ಯೆಯನ್ನು ರಾಜ್ಯಪಾಲರ ಮಾತಿನಿಂದಲೇ ಪ್ರಸ್ತಾಪಿಸಿ ಕೇಂದ್ರ ಸರ್ಕಾರವನ್ನು ಟೀಕಿಸುವ ಹಾಗೂ ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿಯನ್ನು ವಿಧಾನಮಂಡಲದಲ್ಲಿ ಕೆಣಕುವ ರಾಜಕೀಯ ತಂತ್ರಗಾರಿಕೆಯನ್ನು ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಹೆಣೆದಿದೆ.

ಇಂದಿನಿಂದ ಆರಂಭವಾಗುವ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ, ಮುಂದಿನ ವರ್ಷದಲ್ಲಿ ಕೈಗೊಳ್ಳಲಿರುವ ಅಭಿವೃದ್ಧಿಯ ಮುನ್ನೋಟದ ಜತೆಗೆ ನೋಟು ಅಮಾನ್ಯದಿಂದ ರಾಜ್ಯದ ಜನತೆ ಎದುರಿಸಿದ ಸಂಕಷ್ಟಗಳನ್ನು ಕೇಂದ್ರ ಸರ್ಕಾರದಿಂದಲೇ ನೇಮಕಗೊಂಡ ರಾಜ್ಯಪಾಲರ ಬಾಯಲ್ಲಿ ಹೇಳಿಸಿ ಆ ಮೂಲಕ ಬಿಜೆಪಿಗೆ ಮುಜುಗರಕ್ಕೀಡುಪಡಿಸುವ ಎಲ್ಲ ಸಾಧ್ಯತೆಗಳಿವೆ.

ನೋಟು ಅಮಾನ್ಯ ಪ್ರಕರಣದ ವಿರುದ್ಧವಾಗಿ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ ಕಾಂಗ್ರೆಸ್‌, ವಿಧಾನಮಂಡಲ ಅಧಿವೇಶನವನ್ನು ವೇದಿಕೆಯನ್ನಾಗಿಸಿ ನೋಟು ಅಮಾನ್ಯದಿಂದ ರಾಜ್ಯದ ಜನತೆ ಸಂಕಷ್ಟ ಎದುರಿಸುವಂತಾಗಲು ಬಿಜೆಪಿಯೇ ಕಾರಣ ಎಂಬುದನ್ನು ಬಿಂಬಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಅಧಿವೇಶನವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲಿದ್ದಾರೆ.

ಅಷ್ಟೇ ಅಲ್ಲ, ಅಧಿವೇಶನದಲ್ಲಿ ನೋಟು ಅಮಾನ್ಯ ಪ್ರಕರಣದ ನೆಪದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು, ಕಾಂಗ್ರೆಸ್‌ ಮುಖಂಡರು, ಅದರಲ್ಲೂ ವಿಶೇಷವಾಗಿ ಸಚಿವ ರಮೇಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಟಾಳ್‌ಕರ್‌, ಚಿಕ್ಕರಾಯಪ್ಪ, ಜಯಚಂದ್ರ ಅವರ ಮೇಲೆ ದಾಳಿ ನಡೆಸಿ ರಾಜ್ಯ ಸರ್ಕಾರದ ಮೇಲೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಿದ ಬಿಜೆಪಿ ಬಣ್ಣವನ್ನು ಸಹ ಜಂಟಿ ಅಧಿವೇಶನದಲ್ಲಿ ಬಯಲು ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಬರ ಸೇರಿ ರಾಜ್ಯ ಸರ್ಕಾರದ ಅಧಿಕಾರಿಗಳು ಹಾಗೂ ಕಾಂಗ್ರೆಸ್‌ ಮುಖಂಡರು ಕಪ್ಪು ಹಣ ಹೊಂದಿರುವ ಪ್ರಕರಣ ಪ್ರಸ್ತಾಪಿಸಿ ಕಾಂಗ್ರೆಸ್‌ ಪಕ್ಷದ ವಿರುದ್ಧ ವಾಗಾœಳಿ ನಡೆಸುವ ಮುನ್ನವೇ ರಾಜ್ಯಪಾಲರಿಂದಲೇ ನೋಟು ಅಮಾನ್ಯ ಪ್ರಕರಣವನ್ನು ಪ್ರಸ್ತಾಪಿಸಿ ಬಿಜೆಪಿಗೆ ತಿರುಗೇಟು ನೀಡುವ ರಾಜಕೀಯ ಚಾಣಾಕ್ಷತೆಯನ್ನು ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದಲ್ಲೇ ಪ್ರಸ್ತಾಪಿಸುವ ಎಲ್ಲ ಲಕ್ಷಣಗಳು ಇವೆ.

ರಾಜ್ಯಪಾಲರೇ ನೋಟ್‌ ಬ್ಯಾನ್‌ ನಿಷೇಧವನ್ನು ಟೀಕಿಸುವ ಪರಿಸ್ಥಿತಿ ಬಂದಾಗ ಬಿಜೆಪಿ ಸಹ ಇದನ್ನು ಗಂಭೀರವಾಗಿ ಪರಿಗಣಿಸಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗಾœಳಿ ನಡೆಸುವ ಮತ್ತು ವಿಧಾನಮಂಡಲ ಅಧಿವೇಶನದಲ್ಲಿ ಕೋಲಾಹಲ ಎಬ್ಬಿಸುವ ಎಲ್ಲ ಸಾಧ್ಯತೆಗಳು ಹೆಚ್ಚಾಗಿವೆ.

ನೋಟ್‌ ಬ್ಯಾನ್‌ ಜತೆಗೆ ಕೇಂದ್ರ ಸರ್ಕಾರದ ಪ್ರಾಯೋಜಕತ್ವದ ಯೋಜನೆಗಳಲ್ಲಿ ರಾಜ್ಯ ಸರ್ಕಾರಕ್ಕೆ ಅನುದಾನ ನೀಡುವಲ್ಲಿ ಮಧ್ಯಂತರವಾಗಿ ನಿಯಮಾವಳಿಗಳನ್ನು ಬದಲಾವಣೆ ಮಾಡಿದ ನರೇಂದ್ರಮೋದಿ ಸರ್ಕಾರವನ್ನು ಸಹ ಟೀಕಿಸುವ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸುವ ಸಂಭವವನ್ನೂ ತಳ್ಳಿಹಾಕುವಂತಿಲ್ಲ.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಾಜ್ಯಕ್ಕೆ  ಹಲವಾರು ಯೋಜನೆಗಳಲ್ಲಿ ಅನುದಾನ ನೀಡಲು ಒಪ್ಪಿ ಮಧ್ಯಂತರ ಅವಧಿಯಲ್ಲಿ ಕೆಲವು  ನಿಯಮಾವಳಿಗಳ ನೆಪವೊಡ್ಡಿ ಅನುದಾನ ನೀಡದೆ ವಂಚಿಸಿರುವ ಸಂಗತಿಯನ್ನೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ನಿಲುವು ಪ್ರಸ್ತಾಪಿಸಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಧ್ಯತೆಯಿದೆ..

ಕಾವೇರಿ, ಮಹದಾಯಿ, ಕೃಷ್ಣಾ ವಿವಾದ ಹಾಗೂ ತೀವ್ರ ಬರಗಾಲ ಕುರಿತು ಸಹ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಗೊಳ್ಳಲಿದ್ದು ಕಾವೇರಿ ಮತ್ತು ಮಹದಾಯಿ ವಿವಾದದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ಬದ್ಧತೆಯನ್ನು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಸತತ ಬರಗಾಲದ ಮಧ್ಯೆಯೂ ರಾಜ್ಯ ಸರ್ಕಾರ ಸಾಧನೆ ಮಾಡಿದ ಸಂಗತಿಗಳನ್ನು ರಾಜ್ಯಾಪಾಲರ ಭಾಷಣದಲ್ಲಿ ಹೇಳಲಾಗಿದೆ. ಅನ್ನಭಾಗ್ಯದಲ್ಲಿ 1 ಕೋಟಿಗೂ ಹೆಚ್ಚು ಜನರಿಗೆ ಪಡಿತರ ಹಂಚಿಕೆ, ಕ್ಷೀರಭಾಗ್ಯ, ಕೃಷಿ ಭಾಗ್ಯ, ಹಾಲಿನ ಪ್ರೋತ್ಸಾಹ ಧನ ಯಾವುದೇ ತೊಂದರೆ ಇಲ್ಲದೆ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವುದನ್ನು ಸಹ ರಾಜ್ಯಪಾಲರ ಭಾಷಣದಲ್ಲಿ ವಿವರಿಸಲಾಗಿದೆ.

50 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಮತ್ತು ಕೃಷ್ಣಾ ಕಣಿವೆಯಲ್ಲಿ ನೀರಾವರಿ ಯೋಜನೆಗಳನ್ನು ಕಳೆದ ಮೂರು ವರ್ಷಗಳಲ್ಲಿ ಕೈಗೆತ್ತಿಕೊಂಡಿರುವುದು. ರಸ್ತೆ ಅಭಿವೃದ್ಧಿ, ಗ್ರಾಮೀಣಾಭಿವೃದ್ದಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ 10 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಕೆ. ಸರ್ಕಾರದ ಅವಧಿಯಲ್ಲಿ ಹತ್ತು ಲಕ್ಷ ಕಡುಬಡವರಿಗೆ ವಸತಿ  ನಿರ್ಮಿಸುವ ಯೋಜನೆಗಳನ್ನೂ ಸಹ ಸುದೀರ್ಘ‌ವಾಗಿ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಲಾಗಿದೆ.

ನಾಡು, ನುಡಿ, ನೆಲ,. ಜಲ ವಿವಾದಗಳಲ್ಲಿ ಯಾವುದೇ ರಾಜಿ ಇಲ್ಲದೆ ಕನ್ನಡ ನಾಡಿನ ಹಿತಾಸಕ್ತಿಯನ್ನು ಕಾಪಾಡುವ ಬದ್ಧತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

– ಸೋಮಶೇಖರ ಕವಚೂರು

ಟಾಪ್ ನ್ಯೂಸ್

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.