ಅಮಾನ್ಯ ನೋಟು ಜಪ್ತಿ: ಇಬ್ಬರ ಸೆರೆ
Team Udayavani, Sep 28, 2017, 12:24 PM IST
ಬೆಂಗಳೂರು: ಇತ್ತೀಚೆಗೆ ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದ ಪ್ರಕರಣ ಬೇಧಿಸಿದ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಕುಶಾಲನಗರ ಮೂಲದ ಜಾಫರ್ (32) ಹಾಗೂ ರಜಾಕ್ (28) ಬಂಧಿತರು. ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳವಾರ ರಾತ್ರಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.24 ರಂದು ರಾತ್ರಿ ಮಹಾಲಕ್ಷಿ ಲೇಔಟ್ನ ಈಜುಕೊಳದ ಬಳಿ ಅಮಾನ್ಯಗೊಂಡಿರುವ ನೋಟುಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿದ ಪೊಲೀಸರು, ಈ ಮೊದಲು ಮೊಹಮ್ಮದ್ ಅಸ್ಲಂ, ಕಾಳಿಂಗಪ್ಪ ಹಾಗೂ ಮಂಜುನಾಥ್ ಎಂಬುವರನ್ನು ಬಂಧಿಸಿದ್ದರು. ಸಿಫ್ಟ್ ಡಿಸೈರ್ ಕಾರಿನಲ್ಲಿ 1 ಸಾವಿರ ರೂ. ಮುಖಬೆಲೆಯ 5.40 ಲಕ್ಷ ರೂ. ಅಮಾನ್ಯಗೊಂಡ ನೋಟುಗಳನ್ನು ಸಾಗಿಸಲಾಗುತ್ತಿತ್ತು.
ಇಷ್ಟು ಮೊತ್ತದ ಹಣ ಎಲ್ಲಿಂದ ಬಂದಿದೆ. ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬುದರ ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಇದುವರೆಗೂ ಹಣದ ಮೂಲ ಮಾಲೀಕನ ಬಗ್ಗೆ ಬಂಧಿತರು ಬಾಯಿ ಬಿಡುತ್ತಿಲ್ಲ. ಈ ದಂಧೆಯ ಹಿಂದೆ ಇನ್ನಷ್ಟು ಮಂದಿ ಇರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.