![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 4, 2017, 3:45 AM IST
ಬೆಂಗಳೂರು: ದ್ವೀತೀಯ ಪಿಯುಸಿ ಪರೀಕ್ಷೆಗಳಲ್ಲಿ ಕೃಪಾಂಕ ನೀಡುವ ವಿಧಾನದ ಬಗ್ಗೆ ನಿರ್ದಿಷ್ಟ ಮಾರ್ಗಸೂಚಿ ರಚಿಸದೆ 2016-2017ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಸೀಟು ಪ್ರವೇಶಕ್ಕೆ (ಸಿಇಟಿ) ಅರ್ಜಿ ಆಹ್ವಾನಿಸಿದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಮಂಗಳೂರು ಮೂಲದ ಭುವನಜ್ಯೋತಿ ಶಿಕ್ಷಣ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ, ಪದವಿ ಪೂರ್ವ ಮಂಡಳಿ ಮತ್ತು ಕರ್ನಾಟ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅರ್ಜಿಯೇನು?
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2017ರ ಜ.24ರಂದು ವೈದ್ಯಕೀಯ, ದಂತ ವೈದ್ಯಕೀಯಯ ಆಯುರ್ವೇದ, ಹೋಮಿಯೋಪತಿ, ಎಂಜಿನಿಯರ್, ಬಿಟೆಕ್, ಆರ್ಕಿಟೆಕ್ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಸಿಇಟಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಮಂಡಳಿಯು 2016ರ ಮಾರ್ಚ್‌ನಲ್ಲಿ 2015-2016ನೇ ಸಾಲಿನ ದ್ವೀತೀಯ ಪಿಯುಸಿ ಪರೀಕ್ಷೆ ನಡೆಸಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆಯಾದ್ದರಿಂದ ಮರು ಪರೀಕ್ಷೆ ನಡೆಸಲಾಗಿತ್ತು. ಆದರೆ, ಗಣಿತ ವಿಷಯದಲ್ಲಿ ಏಳು ಪಠ್ಯೇತರ ಪ್ರಶ್ನೆಗಳು ಕೇಳಿದ್ದರಿಂದ 21 ಕೃಪಾಂಕವನ್ನು ಸರ್ಕಾರ ನೀಡಿತ್ತು. ಈ ಕ್ರಮ ಪ್ರಶ್ನಿಸಿ ಅರ್ಜಿದಾರರು 2016ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಸರ್ಕಾರವು 21 ಕೃಪಾಂಕ ನೀಡುವುದರಿಂದ ರಾಜ್ಯ ಸರ್ಕಾರ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕ ಸಿಗಲಿದೆ. ಈ ಅಂಕ ಪರಿಗಣಿಸಿದಲ್ಲಿ ಸಿಬಿಎಸ್‌ಸಿ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಕಡಿಮೆ ಅಂಕಗಳು ಸಿಕ್ಕಿ, ವೃತ್ತಿಪರ ಕೋರ್ಸ್‌ಗಳ ಪ್ರವೇಶದಿಂದ ವಂಚಿತರಾಗುವ ಸಾಧ್ಯತೆಯಿದೆ. ಹೀಗಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳ ಬದಲು ಕೇವಲ ಸಿಇಟಿ ಅಂಕ ಪರಿಗಣಿಸಲು ಸರ್ಕಾರಕ್ಕೆ ಮತ್ತು ವೃತ್ತಿಪರ ಕೋಸ್‌ಗಳ ಶಿಕ್ಷಣಾ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಕೋರಲಾಗಿತು ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ದ್ವೀತೀಯ ಪಿಯುಸಿ ಪರೀಕ್ಷೆಗಳಲ್ಲಿ ಕೃಪಾಂಕ ನೀಡುವ ವಿಧಾನದ ಬಗ್ಗೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ನಾಲ್ಕು ತಿಂಗಳಲ್ಲಿ ರಚಿಸಬೇಕು ಎಂದು 2016 ಜುಲೈ 22ರಂದು ಸರ್ಕಾರಕ್ಕೆ ಆದೇಶಿಸಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸದೆ 2015-16ನೇ ಸಾಲಿನ ಸಿಇಟಿ ಪರೀಕ್ಷೆಗೆ ವಿಧಿಸಿದ್ದ ಷರತುಗಳನ್ನೇ ಮತ್ತೆ ವಿಧಿಸಿ 2017ರ ಜ.24ರಂದು 2016-2017ನೇ ಸಾಲಿನ ವೃತ್ತಿಪರ ಕೋರ್ಟ್‌ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ.
ಇದು ಹೈಕೋರ್ಟ್ ಆದೇಶದ ಉಲ್ಲಂಘನೆಯಾದ ಹಿನ್ನೆಲೆಯ್ಲಿ ಜ.24ರಂದು ಹೊರಡಿಸಿದ ಅಧಿಸೂಚನೆ ರದ್ದುಪಡಿಸಬೇಕು ಅರ್ಜಿಯಲ್ಲಿ ಕೋರಲಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.